ಚಿತ್ರದುರ್ಗದಲ್ಲಿ ಗುರುವಾರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಡಿಎಚ್‌ಒ ಡಾ.ಜಿ.ಪಿ.ರೇಣು ಪ್ರಸಾದ್ ಇತರರು ಇದ್ದರು. 
ಚಿತ್ರದುರ್ಗ

ಹೆಣ್ಣು ಭ್ರೂಣ ಹತ್ಯೆ ನಿಯಂತ್ರಣ ಜಾಗೃತಿಗೆ ನಿರ್ದೇಶನ

ಡಿ.ಪಿ.ನಾಗರಾಜ ಶ್ರೇಷ್ಠಿ

ಪ್ರಮುಖ ಮುಖ್ಯಾಂಶಗಳು

  • ರಾಜ್ಯಮಕ್ಕಳ ಹಕ್ಕುಗಳ ರಕ್ಷಣÁ ಆಯೋಗ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ
  • ಪಿಸಿಪಿಎನ್‌ಡಿಟಿ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ
  • ಡಿಎಚ್‌ಒ ಕಚೇರಿ
ಚಿತ್ರದುರ್ಗ: ಹೆಣ್ಣು ಭ್ರೂಣ ಹತ್ಯೆಯು ಶಿಶುವಿನ ಬದುಕುವ ಮೂಲ ಹಕ್ಕಿನ ನೇರ ಉಲ್ಲಂಘನೆಯಾಗಿದ್ದು,ಇAತಹ ಅಮಾನವೀಯ ಪದ್ಧತಿ ನಿ ರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮ ಹಾಗೂ ತಳಮಟ್ಟದಿಂದಲೂ ಅರಿವು ಮೂಡಿಸ ಬೇಕೆಂದು ರಾಜ್ಯಮಕ್ಕಳ ಹಕ್ಕುಗಳ ರಕ್ಷಣÁ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಅಽಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ಡಿಎಚ್‌ಒ ಕಚೇರಿಯಲ್ಲಿ ಗುರುವಾರ, ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರವಿಧಾನಗಳ(ಲಿAಗ ಆಯ್ಕೆ ನಿಷೇಧ) ಅಽನಿಯಮ೧೯೯೪ರ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,ಇತ್ತೀಚಿನ ದಿನಗಳಲ್ಲಿ

ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ ಪ್ರಕರಣಗಳು ರಾಜ್ಯ,ದೇಶದಲ್ಲಿ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಪಿಸಿಪಿಎನ್‌ಡಿಟಿ ಕಾಯ್ದೆ ಮಹತ್ವ ಪಡೆದಿದೆ. ಹೆಣ್ಣು ಮಗು ಎಂಬ ಕಾರಣಕ್ಕೆ ಗರ್ಭಪಾತ ಮಾಡಿಸುವ ಪ್ರವೃತ್ತಿಗೆ ಕಡಿವಾಣ ಹಾಕಲು ಪರಿಣÁಮಕಾರಿಯಾಗಿ ಕಾನೂನು ಜಾರಿ ಮತ್ತು ಸಾಮಾಜಿಕ ಅರಿವು ಕರ‍್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕಿದೆ ಎಂದರು.
ಪ್ರತಿ ೩ ತಿಂಗಳಿಗೊಮ್ಮೆ ಸಭೆ ನಡೆಸಿ
ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡದಂತೆ ತಡೆಗಟ್ಟುವುದು ಹಾಗೂ ಹೆಣ್ಣು ಮಕ್ಕಳ ಲಿಂಗಾನುಪಾತ ಹೆಚ್ಚಿಸುವುದು ಗರ್ಭ ಪೂ ರ್ವ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರವಿಧಾನಗಳ(ಲಿAಗ ಆಯ್ಕೆ ನಿಷೇಧ)ಅಽನಿಯಮದ ಉದ್ದೇಶವಾಗಿದ್ದು, ಈ ಕಾಯ್ದೆಯಡಿ ರಚಿಸಿ ರು ಸಲಹಾ ಮತ್ತು ಮೇಲ್ವಿಚಾರಣÁ ಸಮಿತಿಗಳು ಪ್ರತಿ ೩ ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಸಬೇಕೆಂದು ಸೂಚಿ ಸಿದರು.
ಪಿಸಿಪಿಎನ್‌ಡಿಟಿ ಸಮಿತಿಗಳು ಸಮರ್ಪಕವಾಗಿ ಸಭೆ ನಡೆಸದಿರುವುದಕ್ಕೆ ತೀವ್ರ ಅಸಮಾಧಾನವ್ಯಕ್ತಪಡಿಸಿದ ಅವರು,ಹೆಣ್ಣು ಭ್ರೂಣ ಹತ್ಯೆ ತಡೆಗೆ ಸಮರ್ಪಕ ಯೋಜನೆಗಳನ್ನು ರೂಪಿಸಬೇಕು ಎಂದು ತಾಕೀತು ಮಾಡಿದರು. ಕೇವಲ ಚರ್ಚೆಗಳಿಂದ ಬದಲಾವಣÉ ಸಾಧ್ಯವಿಲ್ಲ.
ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಗಳ ಮೂಲಕ ತಳಮಟ್ಟದಲ್ಲಿ ಜನರಿಗೆ ಅರಿವು ಮೂಡಿಸಬೇಕು. ಆಸ್ಪತ್ರೆ ಮತ್ತು ಸ್ಕ್ತ್ಯ್ಯಾನಿಂಗ್ ಸೆಂಟರ್‌ಗಳ ಮೇಲೆ ನಿರಂತರ ನಿಗಾ ಇಡಬೇಕು. ಹೆಣ್ಣು ಮಕ್ಕಳ ರಕ್ಷಣÉಗೆ ಪೂರಕವಾದ ವಾತಾವರಣ ನಿರ್ಮಿ ಸುವುದು ನಮ್ಮೆಲ್ಲರ ಆದ್ಯತೆಯಾಗಬೇಕು. ಕಾನೂನು ಜಾರಿ ಜತೆಗೆ ಸಮಾಜದಲ್ಲಿ ಜಾಗÊತಿ ಮೂಡಿಸುವ ಕೆಲಸ ನಿರಂತರವಾಗಿ ನಡೆಯಲಿ ಎಂದರು.
ಡಿಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್,ಜಿಲ್ಲಾ ಕುಟಂಬ ಕಲ್ಯಾಣÁಽಕಾರಿ ಡಾ.ಟಿ.ಡಿ.ರೇಖಾ,ಪಿಸಿಪಿಎನ್ ಡಿಟಿ ಪರಿಶೀಲನಾ ಮತ್ತು ತಪಾಸಣÁ ಸಮಿತಿ ಸದಸ್ಯರಾದ ಡಾ.ಸತ್ಯನಾರಾಯಣ, ಕೆ.ಪಿ.ಮೀನಾಕ್ಷಿ, ಪಿಸಿಪಿಎನ್‌ಡಿಟಿ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷೆ ಡಾ.ಎಸ್. ಸೌಮ್ಯ, ಸದಸ್ಯರಾದ ಡಾ.ದೇವರಾಜ್, ಗಾಯತ್ರಿಶಿವರಾಂ ಇತರರು ಇದ್ದರು.
ಸ್ಕಾ÷್ಯನಿಂಗ್ ಸೆಂಟರ್‌ಗಳಿಗೆ ಭೇಟಿ
ಪ್ರಸವ ಪೂರ್ವ ಮತ್ತು ಗರ್ಭಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ ಪರಿಣÁಮಕಾರಿ ಅನುಷ್ಠಾನ ನಿಟ್ಟಿನಲ್ಲಿ ಜಿಲ್ಲಾ ತಪಾಸ ಣÁ ಮತ್ತು ಪರಿಶೀಲನಾ ತಂಡದೊAದಿಗೆ ಅನಿರೀಕ್ಷಿತವಾಗಿ ಚಿತ್ರದುರ್ಗದ ವಿವಿಧ ಸ್ಕ್ತ್ಯ್ಯಾನಿಂಗ್ ಸೆಂಟರ್‌ಗಳಿಗೆ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಅವರು ಭೇಟಿ ನೀಡಿ ಪರಿಶೀಲಿಸಿದರು. ಜೆಸಿಆರ್ ಬಡಾವಣÉಯ ಕೀರ್ತಿ ಆಸ್ಪತ್ರೆ,ಆಫಿಯಾ ಆಸ್ಪತ್ರೆಯ ಸ್ಕ್ತ್ಯ್ಯಾನಿಂಗ್ ಸೆಂಟರ್ ಗಳಲ್ಲಿ ದಾಖಲೆಗಳ ಪರಿಶೀಲಿಸಿ,ಕೆಲವು ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಸೂಚಿಸಿದರು.