- ಉಪವಿಭಾಗಾಽಕಾರಿ ಡಾ.ಕೆ.ಜೆ. ಕಾಂತರಾಜು
- ಪೂರ್ವಭಾವಿ ಸಭೆ
- ಜಿಲ್ಲಾಽಕಾರಿ ಕಚೇರಿ
ಚಿತ್ರದುರ್ಗ: ನಗರದಲ್ಲಿ ಮೇ ೧೦ ರಂದು ಶಿವಶರಣೆ ಮಹಾಸಾಽ್ವ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಉಪವಿಭಾಗಾಽಕಾರಿ ಡಾ.ಕೆ.ಜೆ. ಕಾಂತರಾಜು ಹೇಳಿದರು.
ಡಿಸಿ ಕಚೇರಿಯಲ್ಲಿ ಬುಧವಾರ ಹೇಮರೆಡ್ಡಿ ಮಲ್ಲಮ್ಮ ಜಯಂತ್ಯುತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಅಂದು ಬೆಳಗ್ಗೆ ೧೧ಕ್ಕೆ ಜಿಲ್ಲಾಽಕಾರಿ ಕಚೇರಿಯಲ್ಲಿ ಹೇಮ ರೆಡ್ಡಿ ಮಲ್ಲಮ್ಮ ಜಯಂತ್ಯುತ್ಸವ ಆಯೋಜಿಸಲಾಗುವುದು ಎಂದರು.
ಹೇಮರೆಡ್ಡಿ ಮಲ್ಲಮ್ಮ ಸಮುದಾಯದ ಕಾರ್ಯದರ್ಶಿ ಡಿ.ಟಿ. ಶಿವಾನಂದಪ್ಪ ಮಾತನಾಡಿ, ಸಮಾಜದಿಂದಲೂ ಮೇ ೨೫ರಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಅದ್ದೂರಿ ಮೆರವಣಿಗೆ, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ.೯೦ಕ್ಕಿಂತ ಹೆಚ್ಚು ಅಂಕಗಳಿಸಿದ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರನ್ನು ಸನ್ಮಾನಿಸಲಾಗುವುದು. ಈ ಕಾರ್ಯಕ್ರಮಕ್ಕೂ ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ, ಜಿಲ್ಲಾ ದೈಹಿಕ ಶಿಕ್ಷಣ ಅಽಕಾರಿ ಚಿದಾನಂದ ಸ್ವಾಮಿ, ನಗರಸಭೆ ಪುಟ್ಟಪ್ಪ, ಹೇಮರೆಡ್ಡಿ ಮಲ್ಲಮ್ಮ ಸಮಾಜದ ಅಧ್ಯಕ್ಷ ಡಾ.ಎಲ್. ಪಾಲಾಕ್ಷಯ್ಯ, ನಗರಸಭೆ ಮಾಜಿ ಅಧ್ಯಕ್ಷೆ ಸುನೀತಾ ಮಲ್ಲಿಕಾರ್ಜುನ್, ಮುಖಂಡರಾದ ಮಲ್ಲಿಕಾರ್ಜುನ, ರವಿಂದ್ರನಾಥ, ನಾಗಭೂಷಣ, ಶಶಿಧರ ಇತರರು ಇದ್ದರು.