ಚಿತ್ರದುರ್ಗದಲ್ಲಿ ನಡೆಯಲಿರುವ ಉದ್ಯೋಗ ಮೇಳದ ಸಿದ್ಧತಾ ಸಭೆಯಲ್ಲಿ ಸಿಇಒ ಡಾ.ಎಸ್.ಆಕಾಶ್, ಗಾಯತ್ರಿ, ಜಯಲಕ್ಷಿ÷್ಮÃ ಇದ್ದರು.
- ಐಟಿ ಸೇರಿದಂತೆ ೧೦೦ಕ್ಕೂ ಹೆಚ್ಚು ಕಂಪನಿಗಳು ಭಾಗಿ
- ಯುವನಿಽ ಫಲಾನುಭವಿಗಳ ಕಡ್ಡಾಯ ನೋಂದಣಿಗೆ ನಿಗಾ ವಹಿಸಿ
- ಅಽಕಾರಿಗಳಿಗೆ ಸಿಇಒ ಡಾ.ಎಸ್.ಆಕಾಶ್ ತಾಕೀತು
ಚಿತ್ರದುರ್ಗ: ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ -ೆ.೧ರಂದು ಆಯೋಜಿಸಿರುವ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ ಜಿಲ್ಲೆಯ ಯುವ ನಿಽ -Àಲಾನುಭವಿಗಳೆಲ್ಲರೂ ಕಡ್ಡಾಯವಾಗಿ ನೋಂದಣಿ ಮಾಡಿಸಲು ಕ್ರಮವಹಿಸುವಂತೆ ಜಿಪಂ ಸಿಇಒ ಡಾ.ಎಸ್.ಆಕಾಶ್ ಅಽಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಪಂನಲ್ಲಿ ಗುರುವಾರ ಮೇಳದ ಸಿದ್ಧತಾ ಸಭೆಯಲ್ಲಿ ಮಾತನಾಡಿ, ನಿರುದ್ಯೋಗಿ ಯುವ ಜನರಿಗೆ ಉದ್ಯೋಗಾವಕಾಶ ಕಲ್ಪಿಸಲು ಜಿಲ್ಲಾಡಳಿತ, ಜಿಪಂ ಹಾಗೂ ಕೌಶಲಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಸಹಯೋಗದಲ್ಲಿ ಮೇಳ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ೧೮೦೦ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೋಂದಣಿ ಮಾಡಿಸಿದ್ದು, ೭೫೦೦ಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಮೇಳದಲ್ಲಿ ಐಟಿ, ಬಿಟಿ, ಮೆಕ್ಯಾನಿಕಲ್, ಆಟೋಮೊಬೈಲ್ ಸೇರಿ ವಿವಿಧ ಕ್ಷೇತ್ರಗಳ ೧೦೦ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊ ಳ್ಳಲಿವೆ. ಬಿಇ ಪದವೀಧರರಿಗಾಗಿ ಪ್ರತಿಷ್ಠಿತ ಐಟಿ ಕಂಪನಿಗಳೂ ಈ ಬಾರಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ ಎಂದು ತಿಳಿಸಿದರು.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಬಿಇ ಹಾಗೂ ಇತರ ಯಾವುದೇ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದ್ದು, ಪ್ರತಿ ಅಭ್ಯರ್ಥಿ ಕನಿಷ್ಠ ೫ರಿಂದ ೬ ರೆಸ್ಯೂಮ್ ಹಾಗೂ ಪೂರಕ ದಾಖಲೆಗಳೊಂದಿಗೆ ಹಾಜರಾಗಬೇಕು ಎಂದರು.
ಜಿಲ್ಲೆಯ ಉದ್ಯೋಗ ವಿನಿಮಯ ಕೇಂದ್ರದಲ್ಲಿ ತಾಂತ್ರಿಕ ಶಿಕ್ಷಣ ಪೂರೈಸಿದ ೯೬೭ಕ್ಕೂ ಅಽಕ ಅಭ್ಯರ್ಥಿಗಳು ಉದ್ಯೋಗಕ್ಕಾಗಿ ನೋಂದಾಯಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ ಎರಡು ವರ್ಷದಲ್ಲಿ ಡಿಪ್ಲೊಮಾ ಹಾಗೂ ಐಟಿಐ ಪೂರೈಸಿದ ೧೫೦೦ ವಿದ್ಯಾರ್ಥಿಗಳು, ಯುವನಿಽಯ ೫,೦೩೪ -Àಲಾನುಭವಿಗಳು ಕಡ್ಡಾಯವಾಗಿ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಉದ್ಯೋಗ ಪಡೆದುಕೊಳ್ಳಬೇಕು ಎಂದರು.
ಉದ್ಯೋಗಾವಕಾಶಗಳ ಹೆಚ್ಚಳ ಮತ್ತು ಗಡಿ ಭಾಗದ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಜಿಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆ ಯಿAದ ಚಿತ್ರದುರ್ಗದೊಂದಿಗೆ ತುಮಕೂರು, ಶಿವಮೊಗ್ಗ, ಬಳ್ಳಾರಿ ಮತ್ತು ದಾವಣಗೆರೆ ಜಿಲ್ಲೆ ಸೇರಿ ವಿವಿಧ ಜಿಲ್ಲೆಗಳ ಪ್ರಮುಖ ಕಂಪನಿಗಳನ್ನು ಮೇಳಕ್ಕೆ ಆಹ್ವಾನಿಸಲಾಗಿದೆ. ಮೇಳದಲ್ಲಿ ೮ ರಿಂದ ೧೦ ಕೌಂಟರ್‌ಗಳಿದ್ದು, ೨೫ ಕೊಠಡಿಗಳಲ್ಲಿ ಕಂಪನಿಗಳು ಅಭ್ಯರ್ಥಿಗಳ ಆಯ್ಕೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.
ನೋಂದಣಿಗಾಗಿ ಕ್ಯೂಆರ್ ಕೋಡ್ ರೂಪಿಸಲಾಗಿದೆ. ಜಿಲ್ಲೆಯ ಎಲ್ಲ ೧೮೯ ಗ್ರಾಪಂಗಳೂ ಸೇರಿ ಎಲ್ಲ ನಗರ, ಪಟ್ಟಣ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ವಚ್ಛತಾ ವಾಹಿನಿ ವಾಹನಗಳಲ್ಲಿ ಜಿಂಗಲ್ ಪ್ರಸಾರದ ಮೂಲಕ ಪ್ರಚಾರ ಕೈಗೊಳ್ಳಬೇಕು. ಅಭ್ಯರ್ಥಿಗಳಿಗೆ ಯಾವುದೇ ಗೊಂದಲಗಳಾಗದAತೆ ಅಚ್ಚುಕಟ್ಟಾಗಿ ಮಾಹಿತಿ ನೀಡುವಂತೆ ಅಽಕಾರಿಗಳಿಗೆ ಸಿಇಒ ತಾಕೀತು ಮಾಡಿದರು.
ಜಿಪಂ ಮುಖ್ಯ ಯೋಜನಾಽಕಾರಿ ಗಾಯತ್ರಿ, ಯೋಜನಾ ನಿರ್ದೇಶಕಿ ಜಯಲಕ್ಷಿ÷್ಮÃ, ಜಿಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆ ಉಪ ನಿರ್ದೇ ಶಕ ಮಂಜುನಾಥ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಎಂ.ರಾಘವೇAದ್ರ, ಉದ್ಯೋಗಾಽಕಾರಿ ರವೀಂದ್ರ, ಜಿಟಿಟಿಸಿ ಪ್ರಾ ಚಾರ್ಯ ಸುಹಾಸ್, ಕಾರ್ಮಿಕ ಅಽಕಾರಿ ಅನಿಲ್ ಬಾಲಚಂದ್ರ ಬಗಟಿ, ಜಿಲ್ಲಾ ಕೌಶಲಭಿವೃದ್ಧಿ ಅಽಕಾರಿ ಡಿ.ವೇಮಣ್ಣ, ಸಹಾಯಕ ಸಾಂಖ್ಯಿಕ ಅಽಕಾರಿ ಸಣ್ಣಕ್ಕಿ ಮಾರುತಿ ಇತರರಿದ್ದರು.