ಚಿತ್ರದುರ್ಗ ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಂ. ಜುಂಜಣ್ಣ ಬುಧವಾರ ಅಽಕಾರ ಸ್ವೀಕರಿಸಿದರು. ಸಹಾಯಕ ನಿರ್ದೇಶಕ ಬಿ.ವಿ.ತುಕಾರಾಂರಾವ್ ಇದ್ದಾರೆ. 
ಚಿತ್ರದುರ್ಗ

ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಂ. ಜುಂಜಣ್ಣ ಅಽಕಾರ ಸ್ವೀಕಾರ

ಚಿತ್ರದುರ್ಗ: ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ ಹಿರಿಯ ಸಹಾಯಕ ನಿರ್ದೇಶಕರಾಗಿ ಎಂ. ಜುಂಜಣ್ಣ ಬುಧವಾರ ಅಽಕಾರ ವಹಿಸಿಕೊಂಡರು.
ಚಿಕ್ಕಬಳ್ಳಾಪುರ ವಾರ್ತಾ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದ ಅವರು ಬಡ್ತಿಯೊಂದಿಗೆ ಹಿರಿಯ ಸಹಾಯಕ ನಿರ್ದೇಶಕರಾಗಿ ದುರ್ಗಕ್ಕೆ ವರ್ಗಾವಣೆ ಆಗಿದ್ದಾರೆ.
ಈ ಹಿಂದೆ ಮಂಗಳೂರು, ಉಡುಪಿ, ಹಾವೇರಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಚಿತ್ರದುರ್ಗ ಕಚೇರಿಯ ಸಹಾಯಕ ನಿರ್ದೇಶಕರಾಗಿದ್ದ ಬಿ.ವಿ.ತುಕಾರಾಂರಾವ್ ಅವರು ಕೇಂದ್ರ ಕಚೇರಿಗೆ ವರ್ಗಾವಣೆಗೊಂಡಿದ್ದಾರೆ.