- ವಿಚಾರಣೆಗೆ ಡಿಸಿ ಟಿ.ವೆಂಕಟೇಶ್ ಸೂಚನೆ
- ವಿವರಣೆ ನೀಡುವಲ್ಲಿ ವಿಮಾ ಕಂಪನಿ ಪ್ರತಿನಿಽಗಳು ವಿಫಲ
- ಪ್ರಕೃತಿ ವಿಕೋಪ
ಚಿತ್ರದುರ್ಗ: ಜಂಟಿ ಸಮೀಕ್ಷೆ ಸ್ಥಳ ಪರಿಶೀಲನಾ ವರದಿ ಪಡೆಯದೆ ಚಳ್ಳಕೆರೆ ತಾಲೂಕಿನ ತಳಕು ಹೋಬಳಿ ಹಿರೇಹಳ್ಳಿ ಗ್ರಾಮದ ರೈತರಿಗೆ ೨೦೨೫-೨೬ನೇ ಸಾಲಿನ ಮುಂಗಾರು ಹಂಗಾಮಿನ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪದಡಿ ನಿಯಮ ಬಾಹಿರ ವಾಗಿ ಬೆಳೆ ವಿಮೆ ಪಾವತಿಸಿದ ವಿಮಾ ಕಂಪನಿ ಪ್ರತಿನಿಽಗಳ ವಿರುದ್ಧ ವಿಚಾರಣೆ ನಡೆಸುವಂತೆ ಜಿಲ್ಲಾಽಕಾರಿ ಟಿ. ವೆಂಕಟೇಶ್ ಸೂಚಿಸಿದ್ದಾರೆ.
ಈ ಕುರಿತಂತೆ ರೈತರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ, ಜಿಲ್ಲಾಽಕಾರಿ ಗುರುವಾರ ತಮ್ಮ ಗೃಹ ಕಚೇರಿಯಲ್ಲಿ ಸಂಬAಽಸಿದ ಅಽಕಾರಿಗಳು ಹಾಗೂ ವಿಮಾ ಕಂಪನಿ ಪ್ರತಿನಿಽಗಳ ಸಭೆ ನಡೆಸಿದರು.
ನಿಯಮಗಳ ಪ್ರಕಾರ ಬೆಳೆಹಾನಿ ಕುರಿತಂತೆ ತಹಸೀಲ್ದಾರ್ ನೇತÊತ್ವದಲ್ಲಿ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಹಾಗೂ ವಿಮಾ ಕಂಪನಿ ಅಽಕಾರಿಗಳು ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವುದು ಕಡ್ಡಾಯವಾಗಿದೆ.
ಆದರೆ, ಯಾವುದೇ ಸಮೀಕ್ಷೆ ನಡೆಸದೆ ಹಿರೇಹಳ್ಳಿ ಗ್ರಾಪಂ ವ್ಯಾಪ್ತಿಯ ಒಟ್ಟು ೭೭ ಜನರಿಗೆ ೪೪,೫೧,೬೫೫ ರೂ.ಬೆಳೆ ವಿಮೆ ಮೊತ್ತವನ್ನು ನಿಯಮಬಾಹಿರವಾಗಿ ಪಾವತಿಸಿರುವುದು ಜಿಲ್ಲಾಡಳಿತದ ತನಿಖೆಯಿಂದ ಬಹಿರಂಗವಾಗಿದೆ.
ಸಭೆಯಲ್ಲಿ ವಿಮಾ ಕಂಪನಿಯ ಪ್ರತಿನಿಽಗಳು ಈ ಕುರಿತಂತೆ ಸೂಕ್ತ ವಿವರಣೆ ನೀಡದೆ ಬೇಜವಾಬ್ದಾರಿತನ ತೋರಿಸಿದ್ದು, ಯಾವ ಆಧಾರದ ಮೇಲೆ ವಿಮಾ ಮೊತ್ತವನ್ನು ಪಾವತಿಸಲಾಗಿದೆ ಎಂಬ ಬಗ್ಗೆ ಸಮಂಜಸ ಮಾಹಿತಿ ನೀಡಲು ವಿ-Àಲರಾದರು.
ಬೆಳೆ ವಿಮೆ ಮೊತ್ತ ಪಾವತಿಯಲ್ಲಿ ನಿಯಮ ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಈ ಪ್ರಕರಣಕ್ಕೆ ಸಂಬAಽಸಿದAತೆ ವಿಮಾ ಕಂಪನಿ ಪ್ರತಿನಿಽಗಳಾದ ಮಹೇಶ್, ಸಲಾವುದ್ದೀನ್, ರಾಜಶೇಖರ್ ಇವರಿಂದ ಸಂಪೂರ್ಣ ಮಾಹಿತಿ ಪಡೆಯಲು ಜಿಲ್ಲಾಽಕಾರಿ ಪೊಲೀಸ್ ಅಽಕಾರಿಗಳಿಗೆ ನಿರ್ದೇಶಿಸಿದರು.
ಹಿರೇಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ೭೭ ರೈತರಿಗೆ ೪೪,೫೧,೬೫೫ ಬೆಳೆ ವಿಮೆ ಪಾವತಿಸಲಾಗಿದೆ. ಈ ಪೈಕಿ ೫೯ ರೈತರಿಗೆ ಅವರು ನೋಂದಾಯಿಸಿದ್ದ ಬೆಳೆಗಳಿಗೆ ವಿಮೆ ಪಾವತಿಯಾಗಿದೆ. ಆದರೆ, ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಕ್ಕೆ ಸಂಬAಽಸಿದAತೆ ಜಂಟಿ ಸಮೀಕ್ಷೆ ವರದಿಯನ್ನು ವಿಮಾ ಕಂಪನಿ ಪಡೆದಿಲ್ಲ.
ಪಾವತಿಯಾದ ೫ ಪ್ರಕರಣಗಳಲ್ಲಿ ರೈತರು ಬೆಳೆವಿಮೆ ಮಾಡಿಸಿದ್ದರೂ ಜಮೀನಿನಲ್ಲಿ ಯಾವುದೇ ಬೆಳೆ ಇರಲಿಲ್ಲ. ಇಂತಹ ಬೀಳು ಭೂಮಿಗೂ ವಿಮೆ ಪಾವತಿ ಮಾಡಲಾಗಿದೆ. ೧೧ ಪ್ರಕರಣಗಳಲ್ಲಿ ರೈತರು ನೋಂದಾಯಿಸಿದ ಬೆಳೆಗೂ, ಹೊಲದಲ್ಲಿದ್ದ ಬೆಳೆಗೂ ಯಾವುದೇ ಸಾಮ್ಯತೆ ಇರಲಿಲ್ಲ. ೨ ಪ್ರಕರಣಗಳಲ್ಲಿ ರೈತರು ನೋಂದಾಯಿಸಿರುವ ಭೂ ವಿಸ್ತೀರ್ಣಕ್ಕಿಂತ ಹೆಚ್ಚಿನ ಪ್ರದೇಶಕ್ಕೆ ವಿಮೆ ಪಾವತಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಬಿ. ಮಂಜುನಾಥ್ ಮಾಹಿತಿ ನೀಡಿದರು.
ಜಿಲ್ಲಾ ಸಂಖ್ಯಾ ಸಂಗ್ರಹಣಾಽಕಾರಿ ರವಿಕುಮಾರ್ ಸೇರಿದಂತೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಽಕಾರಿಗಳು ಇದ್ದರು.