ಚಿತ್ರದುರ್ಗದಲ್ಲಿ ಶನಿವಾರ ಆಯೋಜಿಸಿದ್ದ ಶ್ರೀ ಅಗ್ನಿಬನ್ನಿರಾಯ ಜಯಂತ್ಯುತ್ಸವದಲ್ಲಿ ಶ್ರೀ ಅಗ್ನಿಬನ್ನಿರಾಯರ ಭಾವಚಿತ್ರಕ್ಕೆ ಉಪ ವಿಭಾಗಾಽಕಾರಿ ಡಾ.ಕೆ.ಜೆ. ಕಾಂತರಾಜ್ ಪುಷ್ಪ ನಮನ ಸಲ್ಲಿಸಿದರು. ಬಿ.ಎಂ. ಗೋವಿಂದರಾಜ್, ಎಸ್.ಲಕ್ಷಿ÷್ಮÃ, ಎಂ. ಉಷಾರಾಣಿ ಇತರರು ಇದ್ದರು. -----
- ಲಾಲ್‌ಬಾಗ್ ನಿರ್ಮಾಣದಲ್ಲಿ ಕೊಡುಗೆ ಅನನ್ಯ
- ದುರ್ಗದಲ್ಲಿ ಶ್ರೀ ಅಗ್ನಿಬನ್ನಿರಾಯ ಜಯಂತಿ
- ಸಸ್ಯಕಾಶಿ
ಚಿತ್ರದುರ್ಗ: ಬೆಂಗಳೂರಿನ ಲಾಲ್‌ಬಾಗ್ ಉದ್ಯಾನವನ್ನು ಸಸ್ಯಕಾಶಿಯಾಗಿ ರೂಪಿಸಿದ, ಐತಿಹಾಸಿಕ ಕರಗ ಉತ್ಸವ ಉಳಿಸಿ ಬೆಳೆಸುವಲ್ಲಿ ತಿಗಳ ಸಮುದಾಯದ ಕೊಡುಗೆ ಅನನ್ಯ ಎಂದು ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜು ಕನ್ನಡ ಉಪನ್ಯಾಸಕ ಡಾ.ಜಿ.ಎನ್. ಯಶೋಧರ್ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಪಂ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಶನಿವಾರ ಡಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಶ್ರೀ ಅಗ್ನಿಬನ್ನಿರಾಯ ಜಯಂತ್ಯುತ್ಸವದಲ್ಲಿ ಅವರು ಉಪನ್ಯಾಸ ನೀಡಿದರು.
ಅಗ್ನಿ ಪುರಾಣದ ಪ್ರಕಾರ, ಶಂಭು ಮಹರ್ಷಿಯ ಯಜ್ಞ ಕುಂಡದಿAದ ಶಿವನ ಮೂರನೇ ಕಣ್ಣಿನ ಹನಿಯ ಮೂಲಕ ಜನ್ಮತಾಳಿದ ಅಗ್ನಿ ಬನ್ನಿರಾಯ ಈ ಸಮುದಾಯದ ಮೂಲ ಪುರುಷÀ. ತಮಿಳುನಾಡಿನ ಚೋಳರ ಕಾಲದಲ್ಲಿ ಸೈನಿಕರಾಗಿ ಸೇವೆ ಸಲ್ಲಿಸುತ್ತಿದ್ದ ಈ ಸಮುದಾಯಕ್ಕೆ ಅಗ್ನಿ(ತಿ)ಮತ್ತು ಸಮೂಹ(ಗಳ)ದಿಂದ ತಿಗಳ ಎಂಬ ಹೆಸರು ಬಂದಿದೆ. ಚಂದ್ರನನ್ನು ತಿಂಗಳ ಎನ್ನುವಂತೆ ಈ ಸಮುದಾಯವನ್ನು ತಿಂಗಳರು ಎಂದೂ ಕರೆಯಲಾಗುತ್ತಿತ್ತು, ಕಾಲಕ್ರಮೇಣ ತಿಗಳ ಎಂದಾಗಿದೆ ಎಂದರು.
೧೮ನೇ ಶತಮಾನದಲ್ಲಿ ಹೈದರಾಲಿ ಆರ್ಕಾಟ್ ಪ್ರಾಂತ್ಯ ಗೆದ್ದಾಗ, ಅಲ್ಲಿನ ತಿಗಳ ಸಮುದಾಯದವರ ಕೃಷಿ, ತೋಟಗಾರಿಕೆ ನೈಪುಣ್ಯತೆ ಕಂಡು ಬೆರಗಾಗಿ ಅವರನ್ನು ಮೈಸೂರಿಗೆ ಕರೆತಂದನು. ನಾವಿಂದು ಕಾಣುವ ೬೦ ಎಕರೆ ವಿಸ್ತೀರ್ಣದ ಲಾಲ್‌ಬಾಗ್ ಸಸ್ಯಕಾಶಿಯನ್ನು ನಿ ರ್ಮಿಸಿದ ಕೀರ್ತಿ ಈ ಸಮುದಾಯಕ್ಕೆ ಸಲ್ಲುತ್ತದೆ.
ಇದರೊಂದಿಗೆ ಬೆಂಗಳೂರಿನಲ್ಲಿ ಕಳೆದ ಐದು ಶತಮಾನಗಳಿಂದ ನಡೆಯುತ್ತಿರುವ ಕರಗ ಉತ್ಸವ ತಿಗಳ ಸಮುದಾಯದ ಸಾಂ ಸ್ಕೃತಿಕ ಅಸ್ಮಿತೆಯಾಗಿದೆ. ಸಮುದಾಯದ ಶೈಕ್ಷಣಿಕ ಅಭಿವೃದ್ಧಿಗೆ ತುಮಕೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠ ಹಾಗೂ ಸರ್ಕಾರ ತಿಗಳ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ಶ್ಲಾಘನೀಯ ಎಂದು ಯಶೋಧರ ಹೇಳಿದರು.
ಉಪ ವಿಭಾಗಾಽಕಾರಿ ಡಾ.ಕೆ.ಜೆ. ಕಾಂತರಾಜ್, ತಹಸೀಲ್ದಾರ್ ಬಿ.ಎಂ. ಗೋವಿಂದರಾಜ್, ನಗರಸಭೆ ಪೌರಾಯುಕ್ತೆ ಎಸ್. ಲಕ್ಷಿ÷್ಮÃ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎಂ. ಉಷಾರಾಣಿ ಮತ್ತಿತರರು ಇದ್ದರು. ಹೊಸದುರ್ಗದ ಶಬೀನಾಬಾನು ತಂಡದವರು ಗೀತ ಗಾಯನ ನಡೆಸಿಕೊಟ್ಟರು.