ಟಿ.ಆರ್.ಉಮಾಪತಿ 
ಚಿತ್ರದುರ್ಗ

ಉಪ ಸಮಿತಿ ರಚನೆಗೆ ಕಾರ್ಮಿಕ ಸಂಘಟನೆಗಳ ಆಕ್ರೋಶ

ಪ್ರಮುಖ ಮುಖ್ಯಾಂಶಗಳು

  • ಪರಿಷ್ಕೃತ ಕನಿಷ್ಠ ವೇತನ ನೀತಿ

ಚಿತ್ರದುರ್ಗ:

ಪರಿಷ್ಕೃತ ಕನಿಷ್ಠ ವೇತನ ನೀತಿ ಅನುಷ್ಠಾನ ಕುರಿತ ಪರಿಶೀಲನೆಗಾಗಿ ಸಚಿವ ಸಂಪುಟದ ಉಪ ಸಮಿತಿ ರಚಿಸಿರುವು ದಕ್ಕೆ ಎಐಟಿಯುಸಿ ರಾಜ್ಯಉಪಾಧ್ಯಕ್ಷ ಟಿ.ಆರ್.ಉಮಾಪತಿ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ರಾಜ್ಯಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ಐದು ವರ್ಷಗಳಿಗೊಮ್ಮೆ ಕನಿಷ್ಠ ವೇತನ ಪರಿಷ್ಕರಣೆ ನಿಯಮವಿದ್ದರೂ, ಕಳೆದ ೮ವರ್ಷಗಳಿಂದ ಯಾ ವುದೇ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರ, ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದ ಬಳಿಕ ಜುಲೈನಲ್ಲಿ ಕನಿಷ್ಠ ವೇತನ ಪರಿಷ್ಕರಣೆ ಮಾಡಿ ಅಽಸೂಚನೆ ಹೊರಡಿಸಿತ್ತು ಎಂದರು.
ಇದನ್ನು ಪ್ರಶ್ನಿಸಿ ಪ್ರಮುಖ ಕಾರ್ಖಾನೆ ಮಾಲೀಕರು ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಕಾರ್ಮಿಕ ಸಂಘಟನೆ ಗಳೂ ಮೇಲ್ಮನವಿ ಸಲ್ಲಿಸಿದ್ದು, ಹೈಕೋರ್ಟ್ ಪರಿಷ್ಕೃತ ವೇತನಕ್ಕೆ ಯಾವುದೇ ತಡೆಯಾಜ್ಞೆ ನೀಡಿಲ್ಲ. ಪ್ರಕರಣದ ವಿಚಾರಣೆಯನ್ನು ಆರು ವಾರಗಳ ಕಾಲ ಮುಂದೂಡಿದೆ.
ಕೆಪಿಟಿಸಿಎಲ್, ಕಾರ್ಮಿಕ ಇಲಾಖೆ ಹಾಗೂ ಬೆಂಗಳೂರು ಜಲಮಂಡಳಿ ಸೇರಿದಂತೆ ಹಲವು ಇಲಾಖೆಗಳಲ್ಲಿ ನೂತನ ಕನಿಷ್ಠ ವೇತನ ಅನುಷ್ಠಾನಕ್ಕೆ ಅನುದಾನವಿಲ್ಲವೆಂಬ ನೆಪ ಹೇಳಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಸಿ.ಸುರೇಶ್‌ಬಾಬು ಮಾತನಾಡಿ, ರಾಜ್ಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಹೊರಗುತ್ತಿಗೆ ಕಾರ್ಮಿಕರಿದ್ದಾರೆ. ಇವರಿಗೆ ಕನಿಷ್ಠ ವೇತನ ಹೆಚ್ಚಿಸುವುದರಿಂದ ಸರ್ಕಾರಕ್ಕೆ ವರ್ಷಕ್ಕೆ ೧೫೦೦ ಕೋಟಿ ರೂ.ಹೆಚ್ಚುವರಿ ಹೊರೆಯಾಗಲಿದೆ ಎಂದು ಸರ್ಕಾರ ನೆಪ ಹೇಳುತ್ತಿದೆ ಎಂದು ದೂರಿದರು.
೭ನೇ ವೇತನ ಆಯೋಗ ಶಿಫಾರಸು ಜಾರಿಯಿಂದ ಸರ್ಕಾರಿ ಕಾಯಂ ನೌಕರರಿಗೆ ೨೦ ಸಾವಿರ ಕೋಟಿ ರೂ.ಹೆಚ್ಚುವರಿ ವೆಚ್ಚ ಭರಿ ಸಲು ಸರ್ಕಾರ ಒಪ್ಪಿಕೊಂಡಿದೆ. ಬಡ ಕಾರ್ಮಿಕರ ವಿಷಯದಲ್ಲಿ ಮಾತ್ರ ಅನುದಾನದ ಕೊರತೆ ನೆಪ ಹೇಳುವುದು ಕಾನೂನಿನ ಉಲ್ಲಂಘನೆಯಾಗಿದೆ.

ಎಐಟಿಯುಸಿ ಜಿಲ್ಲಾಧ್ಯಕ್ಷ ಬಿ.ಬಸವರಾಜು, ಸತ್ಯಕೀರ್ತಿ, ಸಾವಿತ್ರಮ್ಮ, ಪರ್ವಿನ್ ಇದ್ದರು.