ಚಿತ್ರದುರ್ಗದಲ್ಲಿ ಸೋಮವಾರ ಏರ್ಪಡಿಸಿದ್ದ ಕಾನೂನು ಅರಿವು ನೆರವು ಕರ‍್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಽÃಶ ರೋಣ್‌ವಾಸುದೇವ ಉದ್ಘಾಟಿಸಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್.ಮಹೇಶ್ವರ ಪ್ಪ,ಉಪಾಧ್ಯಕ್ಷೆ ಕೆ.ಎಸ್.ಸಾವಿತ್ರಮ್ಮ,ಪ್ರಧಾನ ಕರ‍್ಯದರ್ಶಿ ಎಚ್.ಒ.ಜಗದೀಶ್ ಗುಂಡೇರಿ ಹಾಗೂ ನ್ಯಾಯಾಽÃಶರು ಇದ್ದರು.
- ಜಿಲ್ಲಾ ಮತ್ತು ಸತ್ರ ನ್ಯಾಯಾಽÃಶ ರೋಣ್‌ವಾಸುದೇವ ಹೇಳಿಕೆ
- ಕಾನೂನು ಅರಿವು ನೆರವು ಕಾರ್ಯಕ್ರಮ
- ಲೋಕ ಅದಾಲತ್
ಚಿತ್ರದುರ್ಗ: ಸಿವಿಲ್ ಪ್ರಕರಣಗಳ ಕರಡು ರಚನೆಗೆ ಭಾಷಾ ಕೌಶಲ ಅತಿ ಮುಖ್ಯ. ಕನ್ನಡದಲ್ಲಿ ಸರಳವಾಗಿ ಪ್ರಕರಣದ ಕರಡು ಸಿದ್ಧಪಡಿಸಿದರೆ ಅನಗತ್ಯ ಗೊಂದಲಗಳನ್ನು ನಿವಾರಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಽÃಶ ರೋಣ್‌ವಾಸುದೇವ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ನಗರದ ವಕೀಲರ ಸಂಘದ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ, ಸಿವಿಲ್ ಪ್ರಕರಣಗಳಲ್ಲಿ ಕರಡು ರಚನೆ ಕೌಶಲ ಕುರಿತು ಉಪನ್ಯಾಸ ನೀಡಿದರು.
ಆಸ್ತಿ ಹಕ್ಕಿಗಾಗಿ ಕಕ್ಷಿದಾರರು ನ್ಯಾಯಾಲಯಗಳಲ್ಲಿ ಸಿವಿಲ್‌ದಾವೆಗಳನ್ನು ಹೂಡುತ್ತಾರೆ. ಕ್ರಿಮಿನಲ್ ಪ್ರಕರಣಗಳಲ್ಲಿ ನೇರವಾಗಿ ಕಾಯ್ದೆಗಳನ್ನು ಉಲ್ಲೇಖಿಸಿ ಕಕ್ಷಿದಾರರ ಪ್ರಕರಣದ ಕರಡು ಸಿದ್ಧ್ದಪಡಿಸಬಹುದು. ಆದರೆ, ಸಿವಿಲ್ ಪ್ರಕರಣಗಳಲ್ಲಿ ಕಾಯ್ದೆಗಳನ್ನು ಉಲ್ಲೇಖಿಸುವುದರಿಂದ ಗೊಂದಲ ಹೆಚ್ಚಾಗುತ್ತದೆ. ಬದಲಿಗೆ ಸರಳವಾಗಿ ಕಕ್ಷಿದಾರರ ಪರ ವಿಷಯಗಳನ್ನು ಕರಡಿನಲ್ಲಿ ಸ್ಪಷ್ಟಪಡಿಸಬೇಕು. ಕ್ಲಿಷ್ಟಕರ ಶಬ್ದಗಳನ್ನು ಬಳಸಬಾರದು. ಕರಡಿನಲ್ಲಿ ಅಸಲು ದಾವೆ ಮಾಹಿತಿ ನೀಡಿದರೆ ಸಾಕು, ಅನಗತ್ಯವಾಗಿ ದೊಡ್ಡ ಕರಡು ರಚಿಸಬಾರದು. ಕರಡು ಸುಲಭವಾಗಿ ಅರ್ಥವಾದರೆ ಪ್ರಕರಣಗಳಲ್ಲಿ ಶೀಘ್ರ ಪರಿಹಾರ ದೊರಕಲಿದೆ ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಎಂ. ವಿಜಯ್ ಮಾತನಾಡಿ, ಕಾನೂನು ಸೇವಾ ಪ್ರಾಽಕಾರ ದುರ್ಬಲ ವರ್ಗದವರಿಗೆ ಉಚಿತ ಕಾನೂನು ನೆರವು ನೀಡುತ್ತದೆ. ಪೊಕ್ಸೋ, ಬಾಲ್ಯವಿವಾಹ ಸೇರಿದಂತೆ ಸಾಮಾಜಿಕ ಪಿಡುಗುಗಳ ಕುರಿತು ಪ್ರಸಕ್ತ ವರ್ಷದಲ್ಲಿ ೩೦೦ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ೩ ಲೋಕ ಅದಾಲತ್‌ನಲ್ಲಿ ೧೧,೭೪೪ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ಪ್ರಾಽಕಾರದೊಂದಿಗೆ ೯೧ ಪ್ಯಾನಲ್ ವಕೀಲರು, ೮ ಕಾನೂನು ಅಭಿರಕ್ಷಕರು ಹಾಗೂ ೯೦ ನ್ಯಾಯಿಕ ಸಹಾಯಕರು ಕೆಲಸ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ನ್ಯಾಯಾಲಯದ ನ್ಯಾಯಾಽÃಶ ವೀರಣ್ಣ ಸೋಮಶೇಖರ್, ಗಂಗಾಧರ ಚನ್ನಬಸಪ್ಪ ಹಡಪದ್, ಡಿ. ಮಮತಾ, ಎ.ಎಂ. ಚೈತ್ರಾ, ಉಜ್ವಲಾ ವೀರಣ್ಣ ಸಿದ್ದಣ್ಣವರ್,ರಶ್ಮಿ ಎಸ್. ಮರಡಿ,ಪೂಜಾ ಬೆಳಕೇರಿ,ನಿಖಿತಾ ಎಸ್ ಅಕ್ಕಿ,ಆರ್.ಸಹನಾ,ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್.ಮಹೇಶ್ವರ ಪ್ಪ,ಉಪಾಧ್ಯಕ್ಷೆ ಕೆ.ಎಸ್.ಸಾವಿತ್ರಮ್ಮ, ಪ್ರಧಾನ ಕರ‍್ಯದರ್ಶಿ ಎಚ್.ಒ.ಜಗದೀಶ್ ಗುಂಡೇರಿ ಇತರರು ಇದ್ದರು.