ಚಿತ್ರದುರ್ಗದಲ್ಲಿ ಸೋಮವಾರ ಮಹರ್ಷಿ ವಾಲ್ಮೀಕಿ, ಬಿರ್ಸಾ ಮುಂಡಾ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಜನ್ ಭಾಗೀದಾರಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಬಿ.ಟಿ.ಕುಮಾರಸ್ವಾಮಿ, ಎಚ್.ದಿವಾಕರ್, ಡಾ.ಚಂದ್ರಕಾAತ್ ನಾಗಸಮುದ್ರ, ಡಾ.ಬಿ.ಗಿರೀಶ್ ಇತರರಿದ್ದರು. 
ಚಿತ್ರದುರ್ಗ

ಜನ ಭಾಗೀದಾರಿ ಅಭಿಯಾನಕ್ಕೆ ಚಾಲನೆ

ಪ್ರಮುಖ ಮುಖ್ಯಾಂಶಗಳು

  • ಅರ್ಹರಿಗೆ ಸೌಲಭ್ಯ ತಲುಪಿಸಲು ಶ್ರಮಿಸಿ
  • ಎಡಿಸಿ ಬಿ.ಟಿ.ಕುಮಾರಸ್ವಾಮಿ ಸೂಚನೆ
  • ಶಿಕ್ಷಣ, ಆರೋಗ್ಯ,
ಚಿತ್ರದುರ್ಗ: ಮಾಹಿತಿ ಕೊರತೆ ಕಾರಣಕ್ಕೆ ಸರ್ಕಾರದ ಸೌಲಭ್ಯಗಳು ಬುಡಕಟ್ಟು ಸಂಸ್ಕೃತಿಯ ಪರಿಶಿಷ್ಟ ಪಂಗಡದವರಿಗೆ ತಲು ಪದೇ ಇರಬಾರದು. ಆದ್ದರಿಂದ ಪ್ರತಿ ಇಲಾಖೆಯೂ ಜವಾಬ್ದಾರಿಯಿಂದ ಜನರಲ್ಲಿ ವ್ಯಾಪಕ ಅರಿವು ಮೂಡಿಸಬೇಕು ಎಂದು ಹೆಚ್ಚುವರಿ ಜಿ¯್ಲÁಽಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.
ಜಿ¯್ಲÁಡಳಿತ, ಜಿಪಂ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಡಿಸಿ ಕಚೇರಿ ಸಭಾಂಗಣದಲ್ಲಿ ಧರ್ತಿ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನದಡಿ ಸೋಮವಾರ ಹಮ್ಮಿಕೊಂಡಿದ್ದ ಜನ ಭಾಗೀದಾರಿ -ಸಬ್ಸೆ ಡೋರ್ ಸಬ್ಸೆ ಪೆಹ್ಲೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಿಶಿಷ್ಟ ಪಂಗಡದ ಸಮುದಾಯಗಳ ಶ್ರೇಯೋಭಿವೃದ್ಧಿಗಾಗಿ ಹತ್ತಾರು ಯೋಜನೆಗಳನ್ನು ಜಾರಿ ಗೊಳಿಸಿವೆ. ಅಽಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಸೌಲಭ್ಯಗಳನ್ನು ತಳಮಟ್ಟಕ್ಕೆ ತಲುಪಿಸಲು ಶ್ರಮಿಸಬೇಕೆಂದು ತಾಕೀತು ಮಾಡಿದರು.
ಜಿ¯್ಲÁ ಪರಿಶಿಷ್ಟ ವರ್ಗಗಳ ಕಲ್ಯಾಣಾಽಕಾರಿ ಎಚ್.ದಿವಾಕರ್ ಮಾತನಾಡಿ, ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ದಿAದ ಜಿ¯್ಲೆಯಲ್ಲಿ ಮೇ ೨೫ರವರೆಗೆ ಐಇಸಿ ಅಭಿಯಾನ ಕೈಗೊಳ್ಳಲಾಗಿದೆ ಎಂದರು.
ಅರ್ಹರಿಗೆ ಸರ್ಕಾರಗಳ ವಿವಿಧ ಯೋಜನೆಗಳಿಂದಾಗುವ ಪ್ರಯೋಜನಗಳ ಕುರಿತು ಮಾಹಿತಿ ನೀಡುವುದು. ಅದಕ್ಕೆ ಬೇಕಾಗುವ ಅಗತ್ಯ ದಾಖಲಾತಿಗಳನ್ನು ಒದಗಿಸುವ ನಿಟ್ಟಿನಲ್ಲಿ ಸಂಬAಽಸಿದ ಇಲಾಖೆಗಳ ಸಮನ್ವಯದೊಂದಿಗೆ ಈ ಅಭಿಯಾನ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಗ್ರಾಮ ಮಟ್ಟದಲ್ಲಿ Awereness and Benefit Saturation Camps, ಆರೋಗ್ಯ ತಪಾಸಣಾ ಶಿಬಿರಗಳು ಹಾಗೂ ಬುಡ ಕಟ್ಟು ಜನರಲ್ಲಿ ಕಂಡುಬರುವ ಸಿಕಲï ಸೆಲï ಅನೀಮಿಯಾ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಈ ಅವಽಯಲ್ಲಿ ಹಮ್ಮಿ ಕೊಳ್ಳಲಾಗುತ್ತಿದೆ. ಇದರೊಟ್ಟಿಗೆ ಪ್ರಮುಖವಾಗಿ ಪ್ರಧಾನಮಂತ್ರಿ ಜನಮನ್ ಹಾಗೂ ಡಿಎ-ಜೆಜಿಯುಎ ಯೋಜನೆಗಳ ಕುರಿತು ತಿಳಿಸುವುದು ಇದರ ಮುಖ್ಯ ಉದ್ದೇಶ ಎಂದು ಹೇಳಿದರು.
ಶಿಕ್ಷಣ, ಆರೋಗ್ಯ, ಪಶು ಸಂಗೋಪನೆ, ಕೃಷಿ ಸೇರಿ ವಿವಿಧ ಇಲಾಖೆಗಳ ಅಡಿಯಲ್ಲಿ ಸಿಗುವ ಸೌಲಭ್ಯಗಳು ಮತ್ತು ಯೋಜನೆ ಗಳನ್ನು ಅರ್ಹರ ಮನೆಬಾಗಿಲಿಗೆ ತಲುಪಿಸುವ ಕೆಲಸ ಅಽಕಾರಿಗಳು ಮಾಡಬೇಕಿದೆ. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು ತಮ್ಮ ವ್ಯಾಪ್ತಿಯ ಯೋಜನೆಗಳ ಕುರಿತು ಕ್ರಿಯಾ ಯೋಜನೆ ಸಿದ್ಧಪಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಜಿ¯್ಲÁ ಆಯುಷ್ ಅಽಕಾರಿ ಡಾ.ಚಂದ್ರಕಾAತ್ ನಾಗಸಮುದ್ರ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉ ಪ ನಿರ್ದೇಶಕ ಡಾ.ತಿಪ್ಪೇಸ್ವಾಮಿ, ಲೀಡ್ ಬ್ಯಾಂಕ್ ಜಿ¯್ಲÁ ವ್ಯವಸ್ಥಾಪಕ ಎಂ.ಪಿ.ಪ್ರವೀಣ್, ಟಿಎಚ್‌ಒ ಡಾ.ಬಿ.ಗಿರೀಶ್, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಽಕಾರಿಗಳಾದ ಶಿವರಾಜ್, ನಾಸೀರುದ್ದೀನ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾದ ದಿನೇಶ್, ಚನ್ನಬಸಪ್ಪ, ಗೋಪಾಲಪ್ಪ ಇತರರಿದ್ದರು.