ಚಿತ್ರದುರ್ಗ ತಾಲೂಕು ಡಿ.ಎಸ್. ಹಳ್ಳಿಯಲ್ಲಿ ಸೋಮವಾರ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವದಲ್ಲಿ ಎಡಿಸಿ ಬಿ.ಟಿ. ಕುಮಾರಸ್ವಾಮಿ ಅವರು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಿದರು. ಎಂ.ಆರ್. ಮಂಜುನಾಥ್, ಎಂ. ನಾಸಿರುದ್ದೀನ್, ವೆಂಕಟೇಶ್, ಎಸ್.ನಾಗಭೂಷಣ್ ಇತರರು ಇದ್ದರು. 
ಚಿತ್ರದುರ್ಗ

ಖಾಸಗಿ ಶಿಕ್ಷಣ ಸಂಸ್ಥೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆ ಉಳಿಸಿ

ಪ್ರಮುಖ ಮುಖ್ಯಾಂಶಗಳು

  • ಪಾಲಕರಿಗೆ ಎಡಿಸಿ ಬಿ.ಟಿ. ಕುಮಾರಸ್ವಾಮಿ ಮನವಿ
  • ಡಿಎಸ್ ಹಳ್ಳಿಯಲ್ಲಿ ಶಾಲಾ ಪ್ರಾರಂಭೋತ್ಸವ
  • ದ್ವಿಭಾಷಾ ಮಾಧ್ಯಮ
ಚಿತ್ರದುರ್ಗ: ಸರ್ಕಾರಿ ಶಾಲೆಗಳು ಅಳಿವಿನ ಅಂಚಿಗೆ ತಲುಪುತ್ತಿವೆ ಎಂದು ಎಡಿಸಿ ಬಿ.ಟಿ.ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ ರು.
ಚಿತ್ರದುರ್ಗ ತಾಲೂಕು ದೊಡ್ಡಸಿದ್ದವ್ವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳ ಉಳಿವು ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ. ಸರ್ಕಾರದ ಜತೆಗೆ ಪಾಲಕರು, ಶಿಕ್ಷಕರು ಕೈಜೋಡಿಸಿದರೆ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಲು ಸಾಧ್ಯವಾಗಲಿದೆ ಎಂದರು.
ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ, ಪ್ರತಿಭಾವಂತ ಶಿಕ್ಷಕರಿಗೆ ಕೊರತೆಯಿಲ್ಲ. ಆದರೂ ಸರ್ಕಾರಿ ಶಾಲೆಗಳೆಡೆ ಪಾಲಕರಲ್ಲಿ ಪೂರ್ವಾಗ್ರಹ ಪೀಡಿತ ಮನೋಭಾವವಿದೆ. ನಾನು ಕೂಡ ಪ್ರಾಥಮಿಕ ಶಾಲಾ ಶಿಕ್ಷಕನಾಗಿ ವೃತ್ತಿ ಜೀವನ ಆರಂಭಿಸಿದ್ದವನು. ಇಂದು ನಾನು ಎಡಿಸಿಯಾಗಿದ್ದೇನೆ ಎಂದರೆ ಅದಕ್ಕೆ ನನ್ನ ಪ್ರಾಥಮಿಕ ಶಾಲೆಯ ಶಿಕ್ಷಕರು, ಡಯಟ್‌ನ ಗುರುಗಳು ಕಲಿಸಿದ ಶಿಕ್ಷಣ, ಮೌಲ್ಯಗಳು ಕಾರಣ ಎಂದರು.
ಸರ್ಕಾರಿ ನೌಕರಿ ಪಡೆಯುವುದು ಕಷ್ಟ. ಆದರೆ, ಪಡೆದ ಮೇಲೆ ಸುಲಭವಾಗಿ ಕೆಲಸದಿಂದ ತೆಗೆಯಲಾಗದೆಂಬ ಕಾರಣಕ್ಕೆ ಉದಾಸೀನತೆ ತೋರಬಾರದು. ಹೊಸ ಕೌಶಲಗಳೊಂದಿಗೆ, ಸ್ಪರ್ಧಾತ್ಮಕ ಜಗತ್ತಿನಲ್ಲಿ ಕಾಲಕ್ಕೆ ತಕ್ಕಂತೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಹೊಣೆ ಶಿಕ್ಷಕರ ಮೇಲಿದೆ ಎಂದರು.
ತಮ್ಮ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಪಾಲಕರು ನಿಗಾ ವಹಿಸಬೇಕು. ದಿನದಲ್ಲಿ ಒಂದು ಗಂಟೆ ಮೀಸಲಿಟ್ಟು ಮಗು ಶಾಲೆ ಗೆ ಹೋಗಿ ಬಂದ ಮೇಲೆ ಏನು ಮಾಡಿತು, ಏನು ಓದಿತು ಎಂಬುದನ್ನು ಗಮನಿಸಬೇಕು. ಇಂದು ಶಿಕ್ಷಣ ಅತ್ಯಂತ ಮುಖ್ಯವಾದ ಅಸ್ತ ಎಂದರು.
ಡಯಟ್ ಉಪ ಪ್ರಾಚಾರ್ಯ ಎಸ್. ನಾಗಭೂಷಣ್ ಮಾತನಾಡಿ, ಈ ಬಾರಿಯ ಶಾಲಾ ಪ್ರಾರಂಭೋತ್ಸವದಲ್ಲಿ ಸರ್ಕಾರ ಮತ್ತು ಇಲಾಖೆ ಮುಖ್ಯ ಆಶಯವೆಂದರೆ ಸರ್ಕಾರಿ ಶಾಲೆಗಳ ಸಬಲೀಕರಣ ಹಾಗೂ ಮಕ್ಕಳ ದಾಖಲಾತಿ ಪ್ರಕ್ರಿಯೆ ಯಶಸ್ವಿಯಾಗಿ ಆರಂ ಭಿಸುವುದಾಗಿದೆ ಎಂದರು.
ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಸಕ್ತ ಸಾಲಿನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇಂದಿನಿAದಲೇ ರಾಜ್ಯದಲ್ಲಿ ೧೦೦೦ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಮವಸö, ಪಠ್ಯಪುಸ್ತಕ ವಿತರಿಸಲಾಯಿತು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿ ಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಡಿಡಿಪಿಐ ಎಂ.ಆರ್. ಮಂಜುನಾಥ್, ಡಯಟ್ ಪ್ರಾಚಾರ್ಯ ಎಂ. ನಾಸಿರುದ್ದೀನ್, ಎಸ್‌ಡಿಎಂಸಿ ಅಧ್ಯಕ್ಷ ವೆಂಕಟೇಶ್, ಅಂತರ್ಜಲ ತಜ್ಞ ದೇವರಾಜರೆಡ್ಡಿ, ಹಳೆ ವಿದ್ಯಾರ್ಥಿಗಳ ಸಂಘದ ಶಿವಮೂರ್ತಿ, ರೈತ ಮುಖಂಡರಾದ ಮಲ್ಲಿಕಾರ್ಜುನ್, ಜ್ಞಾನೇಶ್, ಬಿಆರ್‌ಸಿ ಸಂಪತ್‌ಕುಮಾರ್, ವಿಷಯ ಪರಿವೀಕ್ಷಕರಾದ ನಿತ್ಯಾನಂದ, ಪ್ರಶಾಂತ್, ರಂಗನಾಯ್ಕ್, ಜಿಲ್ಲಾ ದೈಹಿಕ ಶಿಕ್ಷಣ ಅಽಕಾರಿ ಚಿದಾ ನಂದಸ್ವಾಮಿ, ಶಿಕ್ಷಕ ರ ಸಂಘದ ಪ್ರತಿನಿಽಗಳಾದ ಲೋಲಾಕ್ಷಮ್ಮ, ಕÊಷ್ಣಪ್ಪ ಇತರರು ಇದ್ದರು.
ದ್ವಿಭಾಷಾ ಮಾಧ್ಯಮ
ಜಿಲ್ಲೆಯ ಹೊಸದುರ್ಗ, ಹೊಳಲ್ಕೆರೆ, ಚಿತ್ರದುರ್ಗ ಮತ್ತು ಮೊಳಕಾಲ್ಮೂರು ತಾಲೂಕುಗಳ ಎಲ್ಲ ಸರ್ಕಾರಿ ಪ್ರಾಥಮಿಕ ಶಾಲೆಗಳ ೧ರಿಂದ ೫ನೇ ತರಗತಿಯವರೆಗೆ ದ್ವಿಭಾಷಾ ಮಾಧ್ಯಮ ಜಾರಿಗೆ ತರಲಾಗುತ್ತಿದೆ ಎಂದು ಎಸ್. ನಾಗಭೂಷಣ್ ಹೇಳಿದರು.
ಚಳ್ಳಕೆರೆ ಮತ್ತು ಹಿರಿಯೂರು ತಾಲೂಕುಗಳಲ್ಲಿ ಕರ್ನಾಟಕ ಪಬ್ಲಿಕ್‌ಶಾಲೆ, ಪಿಎಂಶ್ರೀ ಶಾಲೆ ಹಾಗೂ ಆಯ್ದ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಪ್ರಾರಂಭವಾಗಲಿದೆ ಎಂದರು.