ಚಿತ್ರದುರ್ಗದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆಯನ್ನು ಜಿಲ್ಲಾ ಕಾನೂನು ಸೇವಾ ಪ್ರಾಽಕಾರದ ಸದಸ್ಯ ಕರ‍್ಯದರ್ಶಿ ಎಂ.ವಿಜಯ್ ಉದ್ಘಾಟಿಸಿದರು. ಕೆ.ತಿಮ್ಮಯ್ಯ, ಡಾ.ಜಿ.ಪಿ.ರೇಣುಪ್ರಸಾದ್, ಕೆ.ಎಚ್.ವಿಜಯಕುಮಾರ್ ಇತರರು ಇದ್ದರು.
- ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಹೇಳಿಕೆ
- ಸಾಧಕರಿಗೆ ಪುರಸ್ಕಾರ
- ಮಕ್ಕಳ ಗ್ರಾಮ ಸಭೆ
ಚಿತ್ರದುರ್ಗ: ಮಕ್ಕಳನ್ನು ಜಾಗತಿಕ ಮಟ್ಟದಲ್ಲಿ ಒಳ್ಳೆಯ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕರ‍್ಯದರ್ಶಿ ಎಂ.ವಿಜಯ್ ಹೇಳಿದರು.
ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಬೇಟಿ ಬಚಾವೋ, ಬೇಟಿ ಪಢಾವೋ ಘೋಷಣೆಯೊಂದಿಗೆ ಜಿಪಂನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಬೆಳವಣಿಗೆಗೆ ಪೂರಕವಾಗಿ ಸಹಕಾರ, ರಕ್ಷಣೆ ಜತೆಗೆ ಉತ್ತಮ ಶಿಕ್ಷಣ ಕೊಡಿಸುವುದು ಹಾಗೂ ಜಾಗತಿಕ ಮಟ್ಟದಲ್ಲಿ ಉತ್ತಮ ವೇದಿಕೆ ಕಲ್ಪಿಸುವ ಹೊಣೆ ನಮ್ಮೆಲ್ಲರ ಮೇಲಿದೆ. ಬಾಲ್ಯವಿವಾಹ ಸೇರಿ ಹಲವು ಸಾಮಾಜಿಕ ಪಿಡುಗುಗಳಿಗೆ ಹಾಗೂ ಅನಿಷ್ಟ ಪದ್ಧತಿಗಳಿಗೆ ಮಕ್ಕಳು ಪ್ರತಿರೋಧವನ್ನು ತೋರಿ, ತಮಗಾದ ಸಮಸ್ಯೆಗಳ ಕುರಿತು ಸಂಬAಽಸಿದವರಿಗೆ ಮಾಹಿತಿ ನೀಡಬೇಕು ಎಂದರು.
ಜಿಪA ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ ಮಾತನಾಡಿ, ಮಕ್ಕಳು ತಮ್ಮ ಹಕ್ಕುಗಳು, ಸಮಸ್ಯೆಗಳು ಮತ್ತು ಗ್ರಾಮದ ಅಭಿವÊದ್ಧಿ ಕುರಿತು ಚರ್ಚಿಸಲು ಹಾಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಮಕ್ಕಳ ಗ್ರಾಮ ಸಭೆ ಆಯೋಜಿಸಲಾಗುತ್ತಿದೆ. ಶಿಕ್ಷಣದ ಪ್ರಗತಿ, ಬಿಸಿಯೂಟ, ಶೌಚಗೃಹ, ಶಾಲಾ ಸ್ವಚ್ಛತೆ, ಸಾರಿಗೆ ಸೌಕರ್ಯ ಇತ್ಯಾದಿ ಸಮಸ್ಯೆಗಳನ್ನು ಚರ್ಚಿಸಿ ಬಗೆಹರಿಸಲು ಅಗತ್ಯ ಕ್ರಮಕೈಗೊಳ್ಳಲಾಗುತ್ತಿದೆ.
ಈ ನಿಟ್ಟಿನಲ್ಲಿ ಮಕ್ಕಳ ಗ್ರಾಮ ಸಭೆ ಶಕ್ತಿ ಇದ್ದಂತೆ ಎಂದರು. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪಿ.ಶೀಲಾ ಮಾತನಾಡಿದ. ಚಳ್ಳಕೆರೆ ತಾಲೂಕು ರೆಡ್ಡಿಹಳ್ಳಿ ಸ್ವಪ್ನಾ, ಮೊಳಕಾಲ್ಮೂರಿನ ಗಂಗಮ್ಮ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ
ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
೬ ತಾಲೂಕಿನ ವಿವಿಧ ಪ್ರೌಢಶಾಲೆಗಳಲ್ಲಿ ನಡೆಸಿದ್ದ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧಾ ವಿಜೇತ ಮಕ್ಕಳು ಹಾಗೂ ವಿವಿಧ ಸ್ಪರ್ಧೆ ಗಳ ವಿಜೇತರಾದ ಬಾಲಕರ ಬಾಲಮಂದಿರ, ಬಾಲಕಿಯರ ಬಾಲಮಂದಿರದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ತಿಮ್ಮಯ್ಯ, ಡಿಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್, ಮಹಿಳಾ ಮತ್ತು ಮಕ್ಕಳ ಅಭಿವÊದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಚ್.ವಿಜಯಕುಮಾರ್, ಜಿಲ್ಲಾ ನಿರೂಪಣಾಽಕಾರಿ ಡಿ.ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವÊದ್ಧಿ ಅಽಕಾರಿ ಗಂಗಪ್ಪ, ಜಿಲ್ಲಾ ಮಕ್ಕಳ ರಕ್ಷಣಾಽಕಾರಿ ಕೆ.ಪ್ರೇಮಮೂರ್ತಿ ಇತರರಿದ್ದರು.