- ಗ್ರಾಮೀಣ ಭಾಗದಲ್ಲಿ ಡಂಗೂರ ಸಾರಿಸಿ
- ಪಿಡಿಒಗಳಿಗೆ ದುರ್ಗ ತಾಪಂ ರವಿಕುಮಾರ್ ಪತ್ರ
- ಎಸ್‌ಎಸ್‌ಎಲ್‌ಸಿ
ಚಿತ್ರದುರ್ಗ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ಸಮಯದಲ್ಲಿ ಚಿತ್ರದುರ್ಗ ತಾಲೂಕು ಪಂಚಾಯತ್ ಮಹತ್ವದ ಹೆಜ್ಜೆಯನ್ನಿಟ್ಟಿದೆ.
ಓದುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಏಕಾಗ್ರತೆ ಹೆಚ್ಚಿಸಲು ನಿತ್ಯ ಸಂಜೆ ೨ ಗಂಟೆಗಳ ಕಾಲ ಟಿವಿ ಮತ್ತು ಮೊಬೈಲ್ ಬಳಕೆ ಸ್ಥಗಿತಗೊಳಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ತಾಲೂಕಿನ ಎಲ್ಲ ಗ್ರಾಪಂ ಪಿಡಿಒಗಳಿಗೆ ತಾಪಂ ಇಒ ರವಿಕುಮಾರ್ ಅವರು ಪತ್ರ ಬರೆದು, ತಮ್ಮ ಗ್ರಾಪಂ ವ್ಯಾಪ್ತಿಯಲ್ಲಿ ಡಂಗೂರು ಹೊಡೆಸುವ ಮೂಲಕ ಪಾಲಕರು, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವಂತೆ ಕೋರಿದ್ದಾರೆ.
ಕಳೆದ ಎರಡು ವರ್ಷಗಳಿಂದ ತಾಲೂಕಿನ ಎಸ್‌ಎಸ್‌ಎಲ್‌ಸಿ -Àಲಿತಾಂಶ ಕುಸಿಯುತ್ತಿದ್ದು, ೨೦೨೫-೨೬ನೇ ಸಾಲಿನ -Àಲಿತಾಂಶ ಸುಧಾರಣೆಗೆ ಈ ಅಭಿಯಾನದ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಪರೀಕ್ಷೆಗಳು ಪೂರ್ಣಗೊಳ್ಳುವವರೆಗೆ ಸಂಜೆ ೭ರಿಂದ ರಾತ್ರಿ ೯ರವರೆಗೆ ಗ್ರಾಮೀಣ ಭಾಗದ ಪ್ರತಿ ಮನೆಯಲ್ಲೂ ಮೊಬೈಲ್ ಹಾಗೂ ಟಿವಿಗಳ ಸ್ವಿಚ್‌ಆ-ï ಮಾಡುವಂತೆ ನಾಗರಿಕರಿಗೆ ಇಒ ಮನವಿ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮಗಳ ಹಾವಳಿ, ವಿದ್ಯಾರ್ಥಿಗಳ ಸಾಧನೆಗೆ ತೊಡಕಬಾರದು ಎಂಬ ಉದ್ದೇಶದಿಂದ ಈ ಕ್ರಮ ಅನಿವಾರ್ಯವಾಗಿದೆ ರವಿಕುಮಾರ್ ತಿಳಿಸಿದ್ದಾರೆ.