ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ
- ಹೊಸ ಪಿಂಚಣಿ ಯೋಜನೆ
- ಹಳೇ ಪಿಂಚಣಿ ಯೊಜನೆ
- ರಾಜ್ಯ ಸರ್ಕಾರಿ ನೌಕರರ ಸಂಘ
ಚಿತ್ರದುರ್ಗ: ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೇ ಪಿಂಚಣಿ ಯೊಜನೆ ಜಾರಿಗೊಳಿಸುವ ಸಂಬ Aಧ ರಚನೆ ಆಗಿರುವ ಸಮಿತಿ ಒಂದು ವಾರದೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ ಭರವಸೆ ವ್ಯಕ್ತಪಡಿಸಿದ್ದಾರೆ.
ಗುರುವಾರ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ನೇತÊತ್ವದ ನಿಯೋಗ ಬೆಂಗಳೂರಲ್ಲಿ ಎನ್‌ಪಿಎಸ್ ಸ ಮಿ ತಿ ಸದಸ್ಯರು ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿ ಡಾ.ಎಂ.ಟಿ. ರೇಜು ಅವರೊಂದಿಗೆ ಚರ್ಚಿಸಿದ ಸಂದರ್ಭದಲ್ಲಿ ಸಮಿತಿ ಈಗಾಗ ಲೇ ವರದಿ ಸಿದ್ಧಪಡಿಸಿದೆ. ಮತ್ತೊಂದು ಸಭೆ ಬಳಿಕ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಹೇಳಿದ್ದಾರೆ ಎಂದು ಮುದ್ದಜ್ಜಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ೧೮-೫೨ ವರ್ಷದೊಳಗಿನ ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರ ರಜೆ ಸೌಲಭ್ಯವನ್ನು ಮಂಜೂರು ಮಾಡಿರುವ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ್ದಾರೆ.