ಚಿತ್ರದುರ್ಗದಲ್ಲಿ ಸೋಮವಾರ ಆಯೋಜಿಸಿದ್ದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಂಗವಿಕಲ ಮಕ್ಕಳ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಡಿಡಿಪಿಐ ಎಂ.ಆರ್. ಮಂಜುನಾಥ್ ಉದ್ಘಾಟಿಸಿದರು. ಮಹಂತೇಶ್, ಎಂ.ಕೆ. ಅನಂತರೆಡ್ಡಿ, ಮಜಹರ್‌ವುಲ್ಲಾ, ಗುರುಮೂರ್ತಿ, ಸುರೇಶ್ ಇತರರು ಇದ್ದರು. 
ಚಿತ್ರದುರ್ಗ

ಸೋಲು ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದೇ ಮುಖ್ಯ

ಪ್ರಮುಖ ಮುಖ್ಯಾಂಶಗಳು

  • ಡಿಡಿಪಿಐ ಎಂ.ಆರ್. ಮಂಜುನಾಥ್ ಅಭಿಪ್ರಾಯ
  • ಅಂಗವಿಕಲ ಮಕ್ಕಳ ಕ್ರೀಡಾಕೂಟಕ್ಕೆ ಚಾಲನೆ
  • ಮುಖ್ಯವಾಹಿನಿ
ಚಿತ್ರದುರ್ಗ: ಅಂಗವಿಕಲ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಅವಕಾಶ ಕಲ್ಪಿಸಿದರೆ ಅವರು ಮುಖ್ಯವಾಹಿನಿಗೆ ಬರಲು ಸಾಧ್ಯವಾಗಲಿದೆ ಎಂದು ಡಿಡಿಪಿಐ ಎಂ.ಆರ್. ಮಂಜುನಾಥ್ ದೈಹಿಕ ಶಿಕ್ಷಣ ಶಿಕ್ಷಕರಿಗೆ ಸಲಹೆ ನೀಡಿದರು.
ಶಿಕ್ಷಣ ಇಲಾಖೆ ನಗರದ ವೀರ ವನಿತೆ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ೧೪ ರಿಂದ ೧೭ ವರ್ಷ ವಯೋಮಿತಿಯೊಳಗಿನ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಂಗವಿಕಲ ಮಕ್ಕಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಸೋಲು-ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ. ಜಿಲ್ಲಾ ಮಟ್ಟದಲ್ಲಿ ಗೆದ್ದು, ರಾಜ್ಯಮಟ್ಟದಲ್ಲೂ ಜಯಗಳಿಸುವ ಮೂಲಕ ಜಿಲ್ಲೆಗೆ ಕೀರ್ತಿ ತರುವಂತೆ ಮಕ್ಕಳಿಗೆ ಶುಭ ಹಾರೈಸಿದರು.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ರಾಜ್ಯ ಆಡಳಿತ ಮಂಡಳಿ ಸದಸ್ಯ ಎಂ.ಕೆ. ಅನಂತರೆಡ್ಡಿ ಮಾತನಾಡಿ, ಅಂಗವಿಕಲ ಮಕ್ಕಳು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ತಮ್ಮ ಸಂಸ್ಥೆಯಿAದ ಅವರಿಗೆ ನೆರವಾಗಲು ಪ್ರಾಮಾಣಿವಾಗಿ ಶ್ರಮಿಸುತ್ತೇನೆ. ಅಂಗವಿಕಲರಿಗೆ ಅನುಕಂಪಕ್ಕಿAತ ಅವಕಾಶ ಮುಖ್ಯ ಎಂದರು.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹಂತೇಶ್ ಮಾತನಾಡಿ, ಅಂಗವಿಕಲ ಮಕ್ಕಳು ಕೀಳರಿಮೆ ತೊರೆದು ಕ್ರೀಡೆಯಲ್ಲಿ ಭಾಗವಹಿಸಿದಾಗ ಏನಾದರೂ ಸಾಧನೆ ಮಾಡಬಹುದು. ನಮ್ಮ ದೇಶದ ಅನೇಕ ಅಂಗವಿಕಲ ಕ್ರೀಡಾಪಟುಗಳು ಪ್ರತಿಭೆ ಪ್ರದರ್ಶಿಸಿದ್ದಾರೆ. ಅವರು ನಿಮಗೆ ಮಾದರಿ ಆಗಲಿ ಎಂದರು.
ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಕಾರ್ಯದರ್ಶಿ ಮಜಹರ್‌ವುಲ್ಲಾ,ನಿರ್ದೇಶಕರಾದ ಗುರುಮೂರ್ತಿ, ಸುರೇಶ್, ಶಿವರಾಂ, ಡಿವೈ ಪಿಸಿ ವೆಂಕಟೇಶಪ್ಪ, ವಿದ್ಯಾಽಕಾರಿ ಎನ್.ಆರ್. ತಿಪ್ಪೇಸ್ವಾಮಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಽಕಾರಿ ಜೆ. ವೈಶಾಲಿ, ಗ್ರೇಡ್೧ ದೈ ಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಕಲ್ಲೇಶ್‌ಮೌರ್ಯ, ಗ್ರೇಡ್ ೨ ಅಧ್ಯಕ್ಷೆ ಲತಾ, ದೈಹಿಕ ಶಿಕ್ಷಣಾಽಕಾರಿ ಎ. ಚಿದಾನಂದಸ್ವಾಮಿ ಇತರರು ಇದ್ದರು.