ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತಾರಾಷ್ಟಿçÃಯ ದಿನದ ಅಂಗವಾಗಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡಿದ್ದ ಅಂದಾಜು ೨೬ ಲಕ್ಷ ರೂ. ಮೌಲ್ಯದ ಗಾಂಜಾವನ್ನು ನಾಶಪಡಿಸಲಾಯಿತು. ಎಸ್‌ಪಿ ರಂಜಿತ್‌ಕುಮಾರ್ ಬಂಡಾರು, ಎಎಸ್‌ಪಿ ಡಾ. ಶಿವಕುಮಾರ್, ಡಿವೈಎಸ್‌ಪಿಗಳಾದ ಅರುಣ್ ನಾಗೇಗೌಡ, ಶಿವಕುಮಾರ್ ಇತರರು ಇದ್ದರು. 
ಚಿತ್ರದುರ್ಗ

ಪೊಲೀಸರಿಂದ ೨೬ಲಕ್ಷ ರೂ.ಮೌಲ್ಯದ ಗಾಂಜಾ ನಾಶ

ಪ್ರಮುಖ ಮುಖ್ಯಾಂಶಗಳು

  • ಗಾಂಜಾ ನಾಶ
  • ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತಾರಾಷ್ಟಿçÃಯ ದಿನ
  • ಎನ್‌ಡಿಪಿಎಸ್ ಕಾಯ್ದೆ
ಚಿತ್ರದುರ್ಗ : ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತಾರಾಷ್ಟಿçÃಯ ದಿನದ ಅಂಗವಾಗಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡಿದ್ದ ಗಾಂಜಾವನ್ನು ಶುಕ್ರವಾರ ಸುಟ್ಟು ನಾಶಪಡಿಸಲಾಯಿತು.
ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಾದ ೨೧ಪ್ರಕರಣಗಳಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದ ಅಂದಾ ಜು ೨೬,೪೮ಲಕ್ಷ ರೂ. ಮೌಲ್ಯದ ಗಾಂಜಾ ಮತ್ತು ಗಾಂಜಾ ಗಿಡಗಳನ್ನು ನಗರದ ತ್ಯಾಜ್ಯವಸ್ತು ವಿಲೇವಾರಿ ಘಟಕದಲ್ಲಿ ಜಿಲ್ಲಾ ಮಾದ ಕ ವಸ್ತುಗಳ ವಿಲೇವಾರಿ ಸಮಿತಿ ಅಧ್ಯಕ್ಷ, ಎಸ್‌ಪಿ ರಂಜಿತ್ ಕುಮಾರ್ ಬಂಡಾರು ಹಾಗೂ ಪಂಚರ ಸಮಕ್ಷಮದೊಂದಿಗೆ ನಾಶಪಡಿ ಸ ಲಾಯಿತು.
ಎಎಸ್‌ಪಿ ಡಾ. ಶಿವಕುಮಾರ್, ಚಿತ್ರದುರ್ಗ ಡಿವೈಎಸ್‌ಪಿ ಅರುಣ್‌ನಾಗೇಗೌಡ, ಹಿರಿಯೂರು ಡಿವೈಎಸ್‌ಪಿ ಶಿವಕುಮಾರ್ ಇತರರು ಇದ್ದರು.