ಚಿತ್ರದುರ್ಗದಲ್ಲಿ ಶನಿವಾರ ಆಯೋಜಿಸಿದ್ದ ಬಿಜೆಪಿಯ ಪ್ರಶಿಕ್ಷಣ ಮಹಾ ಅಭಿಯಾನದಲ್ಲಿ ಮಾಜಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ಎ. ಮುರಳಿ, ಕೆ.ಟಿ. ಕುಮಾರಸ್ವಾಮಿ, ನರೇಂದ್ರನಾಥ್, ಜಿ.ಎಚ್. ಮೋಹನ್‌ಕುಮಾರ್ ಇತರರು ಇದ್ದರು. 
ಚಿತ್ರದುರ್ಗ

ನಾಯಕತ್ವ ಬೆಳವಣಿಗೆಗೆ ಪ್ರಶಿಕ್ಷಣ ಮಹಾ ಅಭಿಯಾನ ಸಹಕಾರಿ

ಪ್ರಮುಖ ಮುಖ್ಯಾಂಶಗಳು

  • ಬಿಜೆಪಿ ವಿಭಾಗೀಯ ಪ್ರಭಾರಿ ಎ.ಮುರಳಿ ಅಭಿಮತ
  • ಕಾರ್ಯಕ್ರಮಕ್ಕೆ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಚಾಲನೆ
  • ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿನ
ಚಿತ್ರದುರ್ಗ: ಬಿಜೆಪಿ ಇಂದು ಪ್ರಪಂಚದಲ್ಲೇ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಬಹುದೊಡ್ಡ ರಾಜಕೀಯ ಪಕ್ಷವಾಗಿ ಹೊರ ಹೊಮ್ಮಿದೆ ಎಂದು ಪಕ್ಷದ ವಿಭಾಗ ಸಹ ಪ್ರಭಾರಿ ಎ.ಮುರಳಿ ಹೇಳಿದರು.
ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿನದ ಅಂಗವಾಗಿ ಪಕ್ಷದ ನಗರ ಮಂಡಲ ವತಿಯಿಂದ ಮುರುಘಾ ಮಠದ ಅಲ್ಲಮ ಪ್ರಭು ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಶಿಕ್ಷಣ ಮಹಾ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಿಜೆಪಿಯ ಇತಿಹಾಸ, ಪಕ್ಷ ಕಟ್ಟಿ ಬೆಳೆಸುವಲ್ಲಿ ಹಿರಿಯರ ಶ್ರಮ, ತ್ಯಾಗವನ್ನು ಕಾರ್ಯಕರ್ತರು ಅರಿತು ಜನರಿಗೂ ತಿಳಿಸುವ ಮೂ ಲಕ ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು. ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿ ಆದ ಬಳಿಕ ಸರ್ವ ಶಿಕ್ಷಣ ಅಭಿಯಾನ, ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.
ಈಗ ಪ್ರಧಾನಿ ನರೇಂದ್ರಮೋದಿ ಅವರು ಇಡೀ ವಿಶ್ವವೇ ಮೆಚ್ಚವಂಥ ರೀತಿಯಲ್ಲಿ ಭಾರತವನ್ನು ಮುನ್ನಡೆಸುತ್ತಿದ್ದಾರೆ. ಇದು ಪಕ್ಷದ ಕಾರ್ಯಕರ್ತರು ಹೆಮ್ಮೆಪಡುವಂಥ ಸಂಗತಿ ಎಂದರು.
ಪ್ರಶಿಕ್ಷಣ ಅಭಿಯಾನದಲ್ಲಿ ಕಾರ್ಯಕರ್ತರು ತಮ್ಮ ಗ್ರಾಮಗಳಲ್ಲಿ ಭಾರತದ ಸಾಧನೆಗಳನ್ನು ಜನರಿಗೆ ತಿಳಿಸುವಂಥ ಕಾರ್ಯ ಮಾ ಡಿದಾಗ ಪಕ್ಷದ ಮುನ್ನಡೆ ಖಂಡಿತ ಸಾಧ್ಯವಿದೆ. ಪ್ರಶಿಕ್ಷಣದ ಅಗತ್ಯತೆ ಅರಿತು ಪಕ್ಷದ ಕಾರ್ಯಕರ್ತರಿಗಾಗಿ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಇದರಲ್ಲಿ ಭಾಗವಹಿಸುವುದರ ಮೂಲಕ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ಜನರೊಂದಿಗೆ ಉತ್ತಮ ಸಂವಹನ ಗುಣವೂ ಬೆಳೆಯಲಿದೆ ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.
ಪ್ರಶಿಕ್ಷಣ ಅಭಿಯಾನದ ಜಿಲ್ಲಾ ಸಂಯೋಜಕ ಜಿ.ಎಚ್. ಮೋಹನ್‌ಕುಮಾರ್ ಮಾತನಾಡಿ, ಬಿಜೆಪಿಯ ವಿವಿಧ ಕಾರ್ಯಕ್ರಮಗಳಲ್ಲಿ ಪ್ರಶಿಕ್ಷಣ ಮಹಾ ಆಭಿಯಾನ ಮಹತ್ವದ್ಧಾಗಿದೆ. ಇದರಲ್ಲಿ ಪಕ್ಷದ ಸಾಮಾನ್ಯ ಕಾರ್ಯಕರ್ತನಿಂದ ಹಿಡಿದು ಪ್ರಧಾನ ಮಂತ್ರಿ ಕೂಡ ಭಾಗವಹಿಸಲಿದ್ದಾರೆ.
ಇದರಲ್ಲಿ ಭಾಗವಹಿಸುವುದರಿಂದ ಪಕ್ಷದ ಆಗುಹೋಗುಗಳನ್ನು ತಿಳಿದುಕೊಳ್ಳಬಹುದು. ಬಿಜೆಪಿ ಸಾಮಾನ್ಯ ಕಾರ್ಯಕರ್ತನನ್ನು ವ್ಯಕ್ತಿಯನ್ನಾಗಿ ಮಾಡುತ್ತದೆ. ರಾಜ್ಯದಲ್ಲಿ ೬೫೪, ಜಿಲ್ಲೆಯಲ್ಲಿ ೧೮ ತರಬೇತಿಗಳು ನಡೆಯಲಿವೆ. ಇದರಲ್ಲಿ ೭ ವಿಷಯಗಳ ಬಗ್ಗೆ ತಿಳಿಸಲಾಗುತ್ತದೆ. ಇವುಗಳನ್ನು ಅರಿತು ಇತರರಿಗೂ ತಿಳಿಸುವಂತೆ ಮೋಹನ್ ಕಾರ್ಯಕರ್ತರಿಗೆ ಮನವಿ ಮಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ. ಕುಮಾರಸ್ವಾಮಿ ಮಾತನಾಡಿದರು. ಮಾಜಿ ಶಾಸಕ ಜಿ.ಎಚ್ ತಿಪ್ಪಾರೆಡ್ಡಿ ಮಹಾ ಅಭಿಯಾನ ಉದ್ಘಾಟಿಸಿದರು. ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಟಿ.ಜಿ. ನರೇಂದ್ರನಾಥ್, ಜಿಲ್ಲಾ ಉಪಾಧ್ಯಕ್ಷ ಡಾ. ಸಿದ್ಧಾರ್ಥ ಗುಂಡಾರ್ಫಿ, ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್‌ಯಾದವ್, ಮಾಧುರಿ ಗಿರೀಶ್, ರಾಜ್ಯಕಾರ್ಯಕಾರಿಣಿ ಸದಸ್ಯ ಬಾಳೆಕಾಯಿ ರಾಮದಾಸ್, ನಗರಾಭಿವೃದ್ಧಿ ಪ್ರಾಽಕಾರದ ಮಾಜಿ ಅಧ್ಯಕ್ಷ ಸುರೇಶ್‌ಸಿದ್ದಾಪುರ, ಪಕ್ಷದ ನಗರಾಧ್ಯಕ್ಷ ಎಚ್.ಎನ್. ಲೋಕೇಶ್‌ಕುಮಾರ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೆ, ರೇಖಾ ಸೇರಿ ಪಕ್ಷದ ನಗರ ಪದಾಽಕಾರಿಗಳು, ಮಹಾಶಕ್ತಿ ಕೇಂದ್ರ ಪ್ರಮುಖರು, ಶಕ್ತಿ ಕೇಂದ್ರ ಪ್ರಮುಖರು, ಬಿ ಎಲ್‌ಎ-೨ ಬೂತ್ ಅಧ್ಯಕ್ಷರು ಇತರರು ಇದ್ದರು.
"

ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿರುವ ಜನೋಪಯೋಗಿ ಕಲ್ಯಾಣ ಯೋಜನೆಗಳು, ಸಾಧನೆಗಳನ್ನು ಮತದಾರರಿಗೆ ತಿಳಿಸುವ ಕೆಲ ಸವನ್ನು ಕಾರ್ಯಕರ್ತರು ಶ್ರದ್ಧೆಯಿಂದ ಮಾಡಬೇಕಿದೆ. ಈ ಅಭಿಯಾನದಲ್ಲಿ ತಿಳಿದುಕೊಳ್ಳುವ ವಿಚಾರಗಳನ್ನು ಇತರರಿಗೂ ಅರಿವು ಮೂಡಿಸುವ ಮೂಲಕ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು.