ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ನಗರದ ದುರ್ಗ ರನ್ನರ್ಸ್ ಸಂಸ್ಥೆಅಧ್ಯಕ್ಷ ಚೇತನ್ ಬಾಬು ಮಾತನಾಡಿದರು. 
ಚಿತ್ರದುರ್ಗ

ಚಿತ್ರದುರ್ಗದಲ್ಲಿ `ರನ್ ದುರ್ಗ ರನ್' ಸ್ಪರ್ಧೆ

ಪ್ರಮುಖ ಮುಖ್ಯಾಂಶಗಳು

  • ಪುರುಷ, ಮಹಿಳೆಯರು ಮತ್ತು ಮಕ್ಕಳಿಗಾಗಿ ಪ್ರತ್ಯೇಕ ವಿಭಾಗ
  • ಸಂಸದ ಗೋವಿಂದ ಕಾರಜೋಳ
  • ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್
ಚಿತ್ರದುರ್ಗ: ನಗರದ ದುರ್ಗ ರನ್ನರ್ಸ್ ಸಂಸ್ಥೆಯಿAದ `ರನ್ ದುರ್ಗ ರನ್-೨೦೨೫' ಸ್ಪರ್ಧೆ ಡಿ.೨೧ರಂದು ನಗರದಲ್ಲಿ ನಡೆಯಲಿದೆ ಎಂದು ಸಂಸ್ಥೆ ಅಧ್ಯಕ್ಷ ಚೇತನ್ ಬಾಬು ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪುರುಷ, ಮಹಿಳೆಯರು ಮತ್ತು ಮಕ್ಕಳಿಗಾಗಿ ಪ್ರತ್ಯೇಕ ವಿಭಾಗಳಲ್ಲಿ ಸ್ಪ ರ್ಧೆ ಆಯೋಜಿಸಲಾಗಿದೆ. ೧೦, ೫ ಹಾಗೂ ೩ ಕಿ.ಮೀ. ದೂರ ನಿಗದಿ ಮಾಡಲಾಗಿದೆ. ವಿಜೇತರಿಗೆ ಬಹುಮಾನ ಪ್ರದಾನ ಮಾಡ ಲಾಗುವುದು. ರಾಜ್ಯದ ವಿವಿಧ ಜಿಲ್ಲೆಗಳು, ಮಹಾರಾಷ್ಟçದಿಂದ ಕ್ರೀಡಾಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದರು.
ಅAದು ಬೆಳಗ್ಗೆ ೬ರಿಂದ ಮಧ್ಯಾಹ್ನ ೧೨ ಗಂಟೆವರೆಗೆ ಸ್ಪರ್ಧೆಗಳು ನಡೆಯಲಿವೆ. ಸ್ಪಽðಗಳಿಗೆ ಪದಕ, ಪ್ರಮಾಣ ಪತ್ರ ಪ್ರದಾನ ಮಾಡಲಾಗುವುದು. ೧ ಸಾವಿರ ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆ ಇದೆ. ೯೫೦ ಕ್ರೀಡಾಪಟುಗಳು ನೋಂದಾಯಿಸಿ ಕೊA ಡಿದ್ದಾರೆ. ಸಂಸದ ಗೋವಿಂದ ಕಾರಜೋಳ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಕಾರ್ಯಕ್ರಮ ಉದ್ಘಾಟಿಸಲಿ ದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮ ಸಂಯೋಜಕ ವಿ.ಎಲ್. ಪ್ರಶಾಂತ್ ಮಾತನಾಡಿ, ಅಂದು ನಗರದ ವೀರ ವನಿತೆ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣ ದಿAದ ಆರಂಭವಾಗಲಿರುವ ಓಟ ಬಳಿಕ ಅಲ್ಲಿಯೇ ಮುಕ್ತಾಯವಾಗಲಿದೆ. ಪ್ರಥಮ ಬಾರಿಗೆ ಚಿತ್ರದುರ್ಗದಲ್ಲಿ ಈ ಸ್ಪರ್ಧೆ ಆಯೋಜಿ ಸಲಾಗಿದೆ. ಅಂತಾರಾಷ್ಟೀಯ ಮಟ್ಟದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಸುಷ್ಮಾ,ವಿಕ್ರಮ್ ಹಾಗೂ ಮಹೇಶ್ ಸುದ್ದಿಗೋಷ್ಠಿಯಲ್ಲಿ ಇದ್ದರು.
----
(ಸಿಟಿಡಿ ೧೯ ಚೇತನ್‌ಬಾಬು)ಮಗ್‌ಶಾಟ್.