ಭರಮಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪುರುಷರ ತಂಡ ಬಾಲ್ ಬ್ಯಾಡ್ಮಿಂಟನ್‌ನಲ್ಲಿ ದ್ವಿತೀಯ ಸ್ಥಾನ (ರನ್ನರ್ ಅಪ್) ಪಡೆದಿರುವುದು. Ball Badminton
ಚಿತ್ರದುರ್ಗ

ಬಾಲ್ ಬ್ಯಾಡ್ಮಿಂಟನ್‌ನಲ್ಲಿ ದ್ವಿತೀಯ ಸ್ಥಾನ: ಭರಮಸಾಗರ ಕಾಲೇಜು ಸಾಧನೆ Ball Badminton

ದಾವಣಗೆರೆ ವಿವಿ ಮಟ್ಟದ ಕ್ರೀಡಾಕೂಟ | ರನ್ನರ್ ಅಪ್ ಪಡೆದ ಪುರುಷರ ತಂಡ

ಭರಮಸಾಗರ: ಪ್ರಸಕ್ತ ಸಾಲಿನ ದಾವಣಗೆರೆ ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಪುರುಷ ಹಾಗೂ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಮತ್ತು ವಿವಿ ಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಭರಮಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪುರುಷರ ತಂಡವು ದ್ವಿತೀಯ ಸ್ಥಾನ (ರನ್ನರ್ ಅಪ್) ಪಡೆದುಕೊಂಡಿದೆ. Ball Badminton

ಈ ಕ್ರೀಡಾಕೂಟ ಹಾಗೂ ಆಯ್ಕೆ ಪ್ರಕ್ರಿಯೆಯು ಹರಿಹರದ ಎಸ್ಸೆಸ್ ಜೆಆರ್‌ಕೆ ಮಹಿಳಾ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆಯಿತು. ಪಂದ್ಯಾವಳಿಯಲ್ಲಿ ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳ ವಿವಿಧ ಕಾಲೇಜುಗಳ ತಂಡಗಳು ಭಾಗವಹಿಸಿದ್ದವು ಎಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಬಿ.ಎಸ್. ಹರೀಶ್ ತಿಳಿಸಿದ್ದಾರೆ.

ಸಾಧನೆ ತೋರಿದ ಕ್ರೀಡಾಪಟುಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್. ಶಶಿಕಲಾ ಅವರು ಪದಕ, ಪ್ರಶಸ್ತಿ ಹಾಗೂ ಪಾರಿತೋಷಕ ನೀಡಿ ಗೌರವಿಸಿ, ಅಭಿನಂದಿಸಿದರು.