ಎಡಿಸಿ ಬಿ.ಟಿ.ಕುಮಾರಸ್ವಾಮಿ 
ಚಿತ್ರದುರ್ಗ

೩೦ರಿಂದ ಮೇ ೧೩ ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ೨

ಪ್ರಮುಖ ಮುಖ್ಯಾಂಶಗಳು

  • ೪೨೭೦ ಪರೀಕ್ಷಾರ್ಥಿಗಳಿಗೆ ೬ ಪರೀಕ್ಷಾ ಕೇಂದ್ರಗಳು
  • ಗೊಂದಲಕ್ಕೆ ಅವಕಾಶ ನೀಡದೆ ಕಾರ್ಯ ನಿರ್ವಹಿಸಿ
  • ಎಡಿಸಿ ಬಿ.ಟಿ.ಕುಮಾರಸ್ವಾಮಿ
ಚಿತ್ರದುರ್ಗ: ಏ. ೩೦ರಿಂದ ಮೇ ೧೩ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-ಸೆಕೆಂಡ್‌ಗೆ ಜಿಲ್ಲೆಯಲ್ಲಿ ೪೨೭೦ ಪರೀ ಕ್ಷಾರ್ಥಿಗಳು ನೋಂದಾಯಿಸಿಕೊAಡಿದ್ದಾರೆ ಎಂದು ಎಡಿಸಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಡಿಸಿ ಕಚೇರಿಯಲ್ಲಿ ಪರೀಕ್ಷೆ-೨ರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಗೊಂದಲಕ್ಕೆ ಅವಕಾಶ ನೀಡದಂತೆ ೬ ಕೇಂದ್ರಗಳಲ್ಲಿ ಜರುಗಲಿರುವ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವಂತೆ ಅಽಕಾರಿಗಳಿಗೆ ತಾಕೀತು ಮಾಡಿದರು. ದ್ವಿತೀಯ ಪಿಯುಸಿ ಪರೀಕ್ಷೆ-೧ರಂತೆ ಇದನ್ನೂ ಗಂಭೀರವಾಗಿ ಪರಿಗಣಿಸಬೇಕೆಂದರು.
ಪರೀಕ್ಷೆ ಕೇಂದ್ರದ ಸುತ್ತಮುತ್ತಲಿನ ೨೦೦ ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ವ್ಯಾಪ್ತಿಯಲ್ಲಿ ಯಾವುದೇ ಜೆರಾಕ್ಸ್ ಹಾಗೂ ಕಂಪ್ಯೂಟರ್ ಸೆಂಟರ್‌ಗಳು ನಿಷೇಧಾಜ್ಞೆ ಸಮಯದಲ್ಲಿ ಕರ‍್ಯ ನಿರ್ವಹಿಸುವಂತಿಲ್ಲ ಎಂದು ತಿಳಿಸಿದರು.
ಪಿಯು ಡಿಡಿ ಕೆ.ತಿಮ್ಮಯ್ಯ ಅವರು ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿ ಪರೀಕ್ಷೆ-೧ರಲ್ಲಿ ಉತ್ತೀರ್ಣರಾಗದ ೨,೫೪೦ ವಿದ್ಯಾರ್ಥಿಗಳು ಮರು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ. -Àಲಿತಾಂಶ ಸುಧಾರಣೆಗಾಗಿ ೨೦೨೬ರ ಸಾಲಿನ ೫೯೧ ವಿದ್ಯಾರ್ಥಿಗಳು ಹಾಗೂ ೨೦ ೨೫ರ ಸಾಲಿನ ೭ ವಿ ದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ಕಳೆದ ಸಾಲಿನ ಹಾಗೂ ಅದಕ್ಕಿಂತ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾಗಿದ್ದ ೧,೦೭೨ ಪುನರಾವರ್ತಿತ ಅಭ್ಯರ್ಥಿಗಳು ಈ ಬಾರಿ ಪ ರೀಕ್ಷೆ ಎದುರಿಸಲಿದ್ದಾರೆ. ಹಾಜರಾತಿ ಕೊರತೆಯ ಕಾರಣದಿಂದ ಖÁಸಗಿ ವಿಭಾಗದಲ್ಲಿ ೬೦ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂ ದಾಯಿಸಿ ಕೊಂಡಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ -ÉÆÃನ್ ತರುವುದನ್ನು ಕಡ್ಡಾಯ ನಿಷೇಽಸಲಾಗಿದೆ ಎಂದರು. ವಿವಿಧ ಇಲಾಖೆ ಅಽಕಾರಿಗಳು ಸಭೆಯಲ್ಲಿದ್ದರು.
ಪರೀಕ್ಷಾ ಕೇಂದ್ರಗಳು
ಚಿತ್ರದುರ್ಗ ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು, ಚಳ್ಳಕೆರೆಯ ಸರ್ಕಾರಿ ಪದವಿಪೂರ್ವ ಕಾಲೇಜು, ಹಿರಿಯೂರಿ ನ ಸರ್ಕಾರಿ ಪದವಿಪೂರ್ವ ಕಾಲೇಜು, ಹೊಸದುರ್ಗದ ಸರ್ಕಾರಿ ಪದವಿಪೂರ್ವ ಕಾಲೇಜು, ಮೊಳಕಾಲ್ಮೂರಿನ ಸರ್ಕಾರಿ ಪಪೂ ಕಾಲೇ ಜು ಹಾಗೂ ಹೊಳಲ್ಕೆರೆಯ ಎಂ.ಎA ಸರ್ಕಾರಿ ಪದವಿಪೂರ್ವ ಕಾಲೇಜು.