ಚಿತ್ರದುರ್ಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಕೃಷಿಕ ಸಮಾಜದ ಸಭೆಯಲ್ಲಿ ರಾಜ್ಯಾಧ್ಯಕ್ಷ ಮಹದೇವಪ್ಪ, ಎನ್.ಆರ್.ಮಹೇಶ್ವರಪ್ಪ, ಬಿ.ಮಂಜುನಾಥ್, ವಿ.ಜಿ.ಪರಮೇಶ್ವರಪ್ಪ, ರಾಗಿಶಿವಮೂರ್ತಪ್ಪ, ಭಕ್ತಪ್ರಹ್ಲಾದ್ ಇದ್ದರು. 
ಚಿತ್ರದುರ್ಗ

ಕೃಷಿ, ನೀರಾವರಿಗೆ ವಿಶೇಷ ಆದ್ಯತೆ

ಡಿ.ಪಿ.ನಾಗರಾಜ ಶ್ರೇಷ್ಠಿ

ಪ್ರಮುಖ ಮುಖ್ಯಾಂಶಗಳು

  • ರಾಜ್ಯ ಕೃಷಿಕ ಸಮಾಜದ ಅಧ್ಯಕ್ಷ ಮಹದೇವಪ್ಪ ಭರವಸೆ
  • ಕಾರ್ಯಕಾರಿ ಸಮಿತಿ ಸಭೆ
  • ಬಜೆಟ್‌
ಚಿತ್ರದುರ್ಗ : ಕೃಷಿ, ನೀರಾವರಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಬಜೆಟ್‌ನಲ್ಲಿ ವಿಶೇಷ ಯೋಜನೆಗಳನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ರಾಜ್ಯ ಕೃಷಿಕ ಸಮಾಜದ ಅಧ್ಯಕ್ಷ ಮಹದೇವಪ್ಪ ಹೇಳಿದರು.
ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಗುರುವಾರ ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿ, ಕೃಷಿ ಮತ್ತು ನೀರಾವರಿಗೆ ಬಜೆಟ್‌ನಲ್ಲಿ ಮೀಸಲಿಡುವ ಅನುದಾನದ ಪ್ರಮಾಣ ಅತ್ಯಂತ ಕಡಿಮೆ ಇದ್ದು, ಹೆಚ್ಚಿನ ಅನುದಾನ ಹಂಚಿಕೆಗೆ ಸರ್ಕಾರವನ್ನು ಒತ್ತಾಯಿಸುವುದಾಗಿ ಭರವಸೆ ನೀಡಿದರು.
ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎನ್.ಆರ್.ಮಹೇಶ್ವರಪ್ಪ ಮಾತನಾಡಿ, ಜಿಲ್ಲೆಯಲ್ಲಿ ಹನಿ ನೀರಾವರಿ ಯೋಜನೆಗೆ ರೈತರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ ಒಂದು ಸಾವಿರ ಹೆಕ್ಟೇರ್‌ಗೆ ಕಾಲುವೆ ನೀರಾವರಿ ಸೌಲಭ್ಯವಿದೆ. ಭದ್ರಾ ಮೇಲ್ದಂಡೆ ಯೋಜನೆಯಡಿ ೩ ತಿಂಗಳಲ್ಲಿ ನೀರು ಒದಗಿಸಲಾಗುತ್ತಿದೆ. ಹನಿ ನೀರಾವರಿಯಂತಹ ಆಧುನಿಕ ಪದ್ಧತಿಗಳು ರೈತರಿಗೆ ವರದಾನವಾಗಲಿದೆ ಎಂದರು.
ಮೂರು ಸಾವಿರಕ್ಕೂ ಹೆಚ್ಚು ರೈತರು ಹನಿ ನೀರಾವರಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಹನಿ ನೀರಾವರಿ ಯೋಜನೆಗೆ ಸರ್ಕಾರ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ತಿಳಿಸಿದರು.
ಜಿಲ್ಲೆಯ ರೇಷ್ಮೆ ಇಲಾಖೆ ಕೆËಶಲವಿರುವ ಸಿಬ್ಬಂದಿಯನ್ನು ನೇಮಕ ಮಾಡಬೇಕು. ರೇಷ್ಮೆ ಬೆಳೆಗಾರರಿಗೆ ೨ ಕಂತುಗಳಲ್ಲಿ ನೀಡುತ್ತಿರುವ ಸಬ್ಸಿಡಿಯನ್ನು ಒಂದೇ ಕಂತಿನಲ್ಲಿ ನೀಡುವುದು ಸೂಕ್ತ ಎಂದರು.
ಹಿರಿಯೂರಿನ ೧೦ ವರ್ಷ ಹಳೆಯ ಅಕ್ಷಯ -ÀÅಡ್ ಪಾರ್ಕ್ನ ಶೀತಲೀಕರಣ ಘಟಕ ಸ್ಥಗಿತಗೊಂಡಿದೆ. ಇದರಿಂದ ರೈತರಿಗೆ ತೊಂದರೆಯಾಗಿದೆ. ಇದನ್ನು ಪಿಪಿಪಿ ಮಾದರಿಯಲ್ಲಿ ಮರು ಆರಂಭಿಸಿ ಅನುಕೂಲ ಮಾಡಿಕೊಡಬೇಕು ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಸವಿತಾ ಮನವಿ ಮಾಡಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ.ಮಂಜುನಾಥ್, ಜಿಲ್ಲಾ ಕÊಷಿಕ ಸಮಾಜದ ರಾಜ್ಯಪ್ರತಿನಿಽ ವಿ.ಜಿ.ಪರಮೇಶ್ವರಪ್ಪ, ಪ್ರಧಾನ ಕಾರ್ಯದರ್ಶಿ ರಾಗಿ ಶಿವಮೂರ್ತಪ್ಪ, ಖಜಾಂಚಿ ಭಕ್ತಪ್ರಹ್ಲಾದ್, ಜಿಲ್ಲಾ ಪ್ರತಿನಿಽಗಳಾದ ಕೇಶವ, ಶಶಿಧರ್, ರಮೇಶಪ್ಪ, ಶಿವಲಿಂಗಪ್ಪ, ಚಂದ್ರಶೇಖರಪ್ಪ, ಜಗದೀಶ್ ಕಂದಿಕೆರೆ ಇತರರಿದ್ದರು.