ಚಿತ್ರದುರ್ಗದಲ್ಲಿ ಮಂಗಳವಾರ ಡಿಸಿ ಟಿ.ವೆಂಕಟೇಶ್ ಅವರು ಮುಖ್ಯಮಂತ್ರಿ ಮೂಲ ಸೌಕರ್ಯಾಭಿವೃದ್ಧಿ ಯೋಜನೆ ಕಾಮಗಾ ರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಬಿ.ಟಿ. ಕುಮಾರಸ್ವಾಮಿ, ಗಾಯತ್ರಿ, ನಾಗರಾಜ್, ಹನುಮಂತಪ್ಪ, ಹರೀಶ್ ಇತರರು ಇದ್ದರು.  
ಚಿತ್ರದುರ್ಗ

ಮಾಸಾಂತ್ಯದೊಳಗೆ ಕಾಮಗಾರಿ ಆರಂಭಿಸಿ

ಪ್ರಮುಖ ಮುಖ್ಯಾಂಶಗಳು

  • ಅಽಕಾರಿಗಳಿಗೆ ಜಿಲ್ಲಾಽಕಾರಿ ಟಿ.ವೆಂಕಟೇಶ್ ಸೂಚನೆ
  • ಸಿಎಂ ಮೂಲ ಸೌಕರ್ಯಾಭಿವೃದ್ಧಿ ಯೋಜನೆ ಪ್ರಗತಿ ಪರಿಶೀಲನೆ
  • ಸ್ಥಳೀಯ ಶಾಸಕರಿಂದ ಭೂಮಿ ಪೂಜೆ ನೆರವೇರಿಸಿ
ಚಿತ್ರದುರ್ಗ: ಮುಖ್ಯಮಂತ್ರಿ ಮೂಲ ಸೌಕರ್ಯಾಭಿವೃದ್ಧಿ ಯೋಜನೆಯಡಿ ಆಡಳಿತಾತ್ಮಕ ಅನುಮೋದನೆ ಪಡೆದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲ ಕಾಮಗಾರಿಗಳಿಗೆ ಆಯಾ ಸ್ಥಳೀಯ ಶಾಸಕರಿಂದ ಭೂಮಿ ಪೂಜೆ ನೆರವೇರಿಸಿ -ೆಬ್ರವರಿ ಅಂತ್ಯದೊಳಗೆ ಕೆಲಸ ಆರಂಭಿಸುವAತೆ ಜಿಲ್ಲಾಽಕಾರಿ ಟಿ. ವೆಂಕಟೇಶ್ ಅಽಕಾರಿಗಳಿಗೆ ಸೂಚಿಸಿದರು.
ತಮ್ಮ ಕಚೇರಿಯಲ್ಲಿ ಮಂಗಳವಾರ ವಿವಿಧ ಇಲಾಖೆಗಳ ಕಾಮಗಾರಿ ಪ್ರಗತಿ ಪರಿಶೀಲಿಸಿ ಮಾತನಾಡಿ, ಈ ಯೋಜನೆಯಡಿ ಜಿಲ್ಲೆಗೆ ೨೭೫ ಕೋಟಿ ರೂ.ಅನುದಾನ ಬಿಡುಗಡೆಯಾಗಿ ೪ ತಿಂಗಳಾಗಿದೆ. ಮೊಳಕಾಲ್ಮೂರು, ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು ಹಾಗೂ ಹೊಸದುರ್ಗ ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ೫೦ ಕೋಟಿ ರೂ. ಹಾಗೂ ಹೊಳಲ್ಕೆರೆ ಕ್ಷೇತ್ರಕ್ಕೆ ೨೫ ಕೋಟಿ ರೂ. ನೀಡಲಾಗಿದೆ.
೩೦೪ ಕಾಮಗಾರಿಗಳನ್ನು ಶಾಸಕರು ಪ್ರಸ್ತಾಪಿಸಿದ್ದಾರೆ. ಇವುಗಳ ಪೈಕಿ ೨೧೦ ಕೋಟಿ ರೂ. ವೆಚ್ಚದ ೧೭೮ ಕಾಮ ಗಾರಿಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ. ೬೫ ಕೋಟಿ ರೂ. ವೆಚ್ಚದ ೧೨೬ ಕಾಮಗಾರಿಗಳಿಗೆ ಆಡಳಿತಾತ್ಮಕ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಈಗಾಗಲೇ ಆಡಳಿತಾತ್ಮಕ ಮಂಜೂರಾತಿ ಪಡೆದು ಲೋಕೋಪಯೋಗಿ ಇಲಾಖೆ, ಕೆಆರ್‌ಐಡಿಎಲ್, ನಗರ ಸ್ಥಳೀಯ ಸಂಸ್ಥೆ ಹಾಗೂ ಪುರಸಭೆಗಳು, ನಿರ್ಮಿತಿ ಕೇಂದ್ರ, ಪಂಚಾಯತ್ ರಾಜ್ ಮತ್ತು ಇಂಜಿನಿಯರಿAಗ್ ವಿಭಾಗದಿಂದ ಕೈಗೊಳ್ಳುತ್ತಿರುವ ಕಾಮಗಾರಿಗಳ ಅನುಷ್ಠಾನವನ್ನು ತ್ವರಿತಗೊಳಿಸಬೇಕು. ಭೌತಿಕ ಪ್ರಗತಿ ಜತೆಗೆ ಆರ್ಥಿಕ ಪ್ರಗತಿಯನ್ನೂ ಸಾಽಸಬೇಕೆಂದು ಜಿಲ್ಲಾಽಕಾರಿ ನಿರ್ದೇಶನ ನೀಡಿದರು.
ಅನುದಾನದ ಬಳಕೆ ಹಾಗೂ ಕಾಮಗಾರಿ ಯೋಜನೆ ತಯಾರಿಸುವಾಗ ಅಽಕಾರಿಗಳು ಎಚ್ಚರದಿಂದ ಇರಬೇಕು. ಜಿಲ್ಲೆಯಲ್ಲಿ ಡಿಎಂಎ-ï, ಕೆಎಂಇಆರ್‌ಸಿ, ಎನ್‌ಡಿಆರ್‌ಎ-ï, ಎಸ್‌ಡಿಆರ್‌ಎ-ï ಯೋಜನೆಗಳು, ಸ್ಥಳೀಯ ಶಾಸಕರು, ಸಂಸದರ ಪ್ರದೇಶಾಭಿವೃದ್ಧಿ ನಿಽ, ಜಿಪಂ ಸೇರಿದಂತೆ ಇತರೆ ಯೋಜನೆಗಳ ಅನುದಾನದಡಿ ಸಾಕಷ್ಟು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
ಇವುಗಳನ್ನು ಹೊರತುಪಡಿಸಿ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ಧಿ ಯೋಜನಯಡಿ ಇತರೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ಈ ಕುರಿತಂತೆ ಸಂಬAಽಸಿದ ಶಾಸಕರೊಂದಿಗೆ ಚರ್ಚಿಸಿಬೇಕು. ಒಂದು ವೇಳೆ ಎರಡೆರಡು ಅನುದಾನಗಳಲ್ಲಿ ಒಂದೇ ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವುದು ಕಂಡುಬAದರೆ ಅಂತಹ ಅಽಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಡಿಸಿ ಎಚ್ಚರಿಸಿದರು.
ಅಪರ ಜಿಲ್ಲಾಽಕಾರಿ ಬಿ.ಟಿ. ಕುಮಾರಸ್ವಾಮಿ, ಜಿಪಂ ಮುಖ್ಯ ಯೋಜನಾಽಕಾರಿ ಗಾಯತ್ರಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ನಾಗರಾಜ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಹನುಮಂತಪ್ಪ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಹರೀಶ್ ಇತರರು ಇದ್ದರು.