ಚಿತ್ರದುರ್ಗದಲ್ಲಿ ಸೋಮವಾರ ಆಯೋಜಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಎಂ. ವಿಜಯ್ ಉದ್ಘಾಟಿಸಿದರು. ಕೆ.ಎಚ್. ವಿಜಯಕುಮಾರ್, ಜೆ. ವೈಶಾಲಿ, ಡಾ.ಎಲ್. ಈಶ್ವರಪ್ಪ, ಎಚ್.ಎಸ್. ಮಹೇಶ್ವರಪ್ಪ, ಬಿ.ಪಿ. ಪ್ರೇಮನಾಥ ಇತರರಿದ್ದರು. 
ಚಿತ್ರದುರ್ಗ

ಮನೆಯ ಹಿರಿಯರ ಕಾಳಜಿ ಎಲ್ಲರ ಕರ್ತವ್ಯ

ಪ್ರಮುಖ ಮುಖ್ಯಾಂಶಗಳು

  • ನ್ಯಾಯಾಽÃಶ ಎಂ. ವಿಜಯ್ ಅಭಿಮತ
  • ಎಸ್‌ಜೆಎಂ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ
  • ಹಿರಿಯ ನಾಗರಿಕರ ಪಾಲನೆ, ಪೋಷಣೆ ಮತ್ತು ಸಂರಕ್ಷಣಾ ಕಾಯ್ದೆ
ಚಿತ್ರದುರ್ಗ: ಮಕ್ಕಳ ಏಳಿಗೆ, ಶ್ರೇಯೋಭಿವೃದ್ಧಿಯಲ್ಲಿ ಪಾಲಕರ ಪಾತ್ರ ಮಹತ್ತರವಾಗಿದೆ. ಹೀಗಾಗಿ ಅವರ ಬಗ್ಗೆ ಕಾಳಜಿ ವಹಿಸು ವುದು ಆದ್ಯ ಕರ್ತವ್ಯವಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಽÃಶ ಎಂ. ವಿಜಯ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಗರದ ಎಸ್‌ಜೆಎಂ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ ಹಿರಿಯ ನಾಗರಿಕರ ಪಾಲನೆ, ಪೋಷಣೆ ಮತ್ತು ಸಂರಕ್ಷಣಾ ಕಾಯ್ದೆ-೨೦೦೭ರ ಕುರಿತು ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಪಾಲನೆಗೆ ಜೀವನವಿಡೀ ದುಡಿಯುವ ಪಾಲಕರ ಶ್ರಮಕ್ಕೆ ಬೆಲೆಕಟ್ಟಲಾಗದು. ಅವರನ್ನು ಪ್ರೀತಿಯಿಂದ ನೋಡಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ತಿಳಿಸಿದರು.
ಮನೆಯ ಹಿರಿಯರನ್ನು ಪೂಜ್ಯ ಭಾವನೆಯಿಂದ ಗೌರವಿಸುವುದು, ವಾತ್ಸಲ್ಯ, ಸಹನೆ, ತಾಳ್ಮೆಯಿಂದ ನೋಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಸಾಮಾಜಿಕ ಮೌಲ್ಯಗಳನ್ನು ಎತ್ತಿ ಹಿಡಿದು, ಉತ್ತಮ ಸಮಾಜ ನಿರ್ಮಿಸುವಲ್ಲಿ ಹಿರಿಯರ ಪಾತ್ರ ಬೆಟ್ಟದಷ್ಟಿದೆ. ೬೦ ರಿಂದ ೭೦ ವ ರ್ಷ ಸುದೀರ್ಘ ಸೇವೆಯನ್ನು ಹಿರಿಯರಿಂದ ಪಡೆದಿದ್ದೇವೆ. ಹೀಗಾಗಿ ಉತ್ತಮ ಜೀವನ ನಡೆಸುತ್ತಿದ್ದೇವೆ ಎಂಬುದನ್ನು ಯಾರೂ ಮ ರೆಯಬಾರದು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಎಚ್. ವಿಜಯಕುಮಾರ್ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ಹಿರಿಯರ ಯೋಗಕ್ಷೇಮ, ಕಷ್ಟ-ಸುಖ ವಿಚಾರಿಸುವುದನ್ನು ಕಿರಿಯರು ಬಿಟ್ಟಿದ್ದಾರೆ.
ವಿದ್ಯಾಭ್ಯಾಸ, ಸಂಸ್ಕಾರ, ಹಣ, ಆಸ್ತಿ ಹಾಗೂ ತನಗೆ ಬೇಕಾದ ಎಲ್ಲವನ್ನೂ ಹಿರಿಯರಿಂದ ಪಡೆದು ನಂತರ ಅವರನ್ನು ವೃದ್ಧಾಶ್ರ ಮಕ್ಕೆ ಕಳುಹಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ. ಇಳಿ ವಯಸ್ಸಿನಲ್ಲಿ ಅವರ ಸೇವೆ ಮಾಡಿದರೆ ಜೀವನ ಸಾರ್ಥಕತೆ ಪಡೆಯಲಿದೆ ಎಂದು ತಿಳಿಸಿದರು.
ಜಿ¯್ಲÁ ಅಂಗವಿಕಲರ ಕಲ್ಯಾಣಾಽಕಾರಿ ಜೆ. ವೈಶಾಲಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಿದ ಕಾಯ್ದೆಯಡಿ ಹಿರಿಯ ನಾಗರಿಕರ ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಪರಿಹರಿಸಲು ಅವಕಾಶವಿದೆ.
ಸಹಾಯವಾಣಿ ಸಂಖ್ಯೆ ೧೦೯೦ ಕ್ಕೆ ಕರೆ ಮಾಡುವ ಮೂಲಕ ಪರಿಹಾರ ಕಂಡುಕೊಳ್ಳಬಹುದು ಎಂದು ತಿಳಿಸಿದರು. ನಗರದಲ್ಲಿ ಸರ್ಕಾರದ ಅನುದಾನದಡಿ ೨ ಹಾಗೂ ಅನುದಾನ ರಹಿತ ೪ ವೃದ್ಧಾಶ್ರಮಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.
ಚಿಂತಕ ಡಾ.ಜಿ.ಎನ್. ಮಲ್ಲಿಕಾರ್ಜುನಪ್ಪ, ಉಪ ಪ್ರಧಾನ ಕಾನೂನು ನೆರವು ಅಭಿರಕ್ಷಕ ಎಂ. ಮೂರ್ತಿ ಮಾತನಾಡಿದರು. ಜಿ¯್ಲÁ ಕಾನೂನು ಸೇವೆಗಳ ಪ್ರಾಽಕಾರ, ಜಿ¯್ಲÁಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿ¯್ಲÁ ಸಂಘ, ಹೊಂಬೆಳಕು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಸೇರಿ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎಲ್. ಈಶ್ವರಪ್ಪ, ವಕೀಲರ ಸಂಘದ ಜಿ¯್ಲÁಧ್ಯಕ್ಷ ಎಚ್.ಎಸ್. ಮಹೇಶ್ವರಪ್ಪ, ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿ¯್ಲÁಧ್ಯಕ್ಷ ಬಿ.ಪಿ. ಪ್ರೇಮನಾಥ, ವಿದ್ಯಾಲಯದ ಐಕ್ಯುಎಸಿ ಸಂಯೋಜಕ ಎಂ.ಎಸ್. ಪರಮೇಶ್ವರಪ್ಪ, ಜಿ¯್ಲÁ ನಿರೂಪಣಾಽಕಾರಿ ಮಂಜುನಾಥ್ ಇತರರಿದ್ದರು.