ಹೊಸದುರ್ಗ: ರಾಜ್ಯದಲ್ಲಿ ಹೆಚ್ಚಾಗುತ್ತಿರುವ ತೀವ್ರ ಬರಗಾಲದ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಪಟ್ಟಣದ ಎಸ್. ಲಿಂಗಮೂರ್ತಿ ಅವರ ನಿವಾಸದಲ್ಲಿ ಬುಧವಾರ ಮಾತನಾಡಿ, ಸಂಕಷ್ಟಕ್ಕೆ ಸಿಲುಕಿರುವ ರೈತರನ್ನು ರಾಜ್ಯ ಸರ್ಕಾರ ಭಿುಕರಂತೆ ಕಾಣುತ್ತಿದೆ ಎಂದು ಹರಿಹಾಯ್ದರು.
ಬರಕ್ಕೆ ಸಿಲುಕಿರುವ ರೈತರಿಗೆ ಪ್ರತಿ ಹೆಕ್ಟೆರ್ಗೆ ಕನಿಷ್ಠ 50 ಸಾವಿರ ರೂ. ಪರಿಹಾರ ನೀಡಬೇಕು. ಆದರೆ, ಕೇವಲ 2500 ರೂ. ಪರಿಹಾರ ನೀಡುವುದಾಗಿ ಹೇಳುತ್ತಿರುವ ಸರ್ಕಾರಕ್ಕೆ ರೈತರ ಕುರಿತು ಕಾಳಜಿ ಇಲ್ಲ. ಕಬ್ಬು ಬೆಳೆಗಾರರು ಕೂಡ ಸಂಕಷ್ಟಕ್ಕೆ ಸಿಲುಕಿದ್ದು ರಾಜ್ಯ ಸರ್ಕಾರ ಒಂದು ಟನ್ ಕಬ್ಬಿಗೆ ಕನಿಷ್ಠ 1 ಸಾವಿರ ರೂ. ಬೆಂಬಲ ಬೆಲೆ ನೀಡಬೇಕು ಎಂದು ಒತ್ತಾಯಿಸಿದರು.
ಬರಗಾಲಕ್ಕೆ ಸಿಕ್ಕಿರುವ ಜನರಿಗೆ ಬೆಲೆ ಏರಿಕೆ ಮತ್ತಷ್ಟು ಸಂಕಷ್ಟ ತಂದಿದ್ದು, ಮೊಸರು ಹಾಗೂ ಬಸ್ ಪ್ರಯಾಣ ದರವನ್ನು ಶೇ. 30ರಷ್ಟು ಹೆಚ್ಚಿಸಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಪಾಲಿಗೆ ಶಾಪವಾಗಿ ಪರಿಣಮಿಸಿದೆ ಎಂದರು. ಬಿಜೆಪಿ ರಾಜ್ಯಾಧ್ಯರ ಬದಲಾವಣೆ ಕುರಿತು ಪ್ರತಿಕ್ರಿಯಿಸಿ, ನಾನು ರಾಜ್ಯ ಬಿಜೆಪಿ ಅಧ್ಯನಾದ ದಿನದಿಂದಲೂ ಕೆಲವರು ರಾಜ್ಯಾಧ್ಯರ ಬದಲಾವಣೆ ಕುರಿತು ಚರ್ಚೆ ಮಾಡುತ್ತಿದ್ದಾರೆ ಎಂದರು.
ಶಾಸಕ ಎಂ. ಚಂದ್ರಪ್ಪ, ರಾಜ್ಯ ಖನಿಜ ನಿಗಮದ ಮಾಜಿ ಅಧ್ಯ ಎಸ್. ಲಿಂಗಮೂರ್ತಿ, ಬಿಜೆಪಿ ಮಾಜಿ ಜಿಲ್ಲಾಧ್ಯ ಹನುಮಂತೇಗೌಡ ಇದ್ದರು.