ಹೊಸದಿಲ್ಲಿಯಲ್ಲಿ ಸಿರಿಗೆರೆ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಬಸವರಾಜ ಬೊಮ್ಮಾಯಿ ನಿವಾಸದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ವಿ. ಸೋಮಣ್ಣ, ಬಿಜೆಪಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಇತರ ಗಣ್ಯರೊಂದಿಗೆ ಚರ್ಚಿಸಿದರು. 
ಚಿತ್ರದುರ್ಗ

ಭದ್ರಾ ಮೇಲ್ದಂಡೆ ಯೋಜನೆ ತ್ವರಿತ ಅನುಷ್ಠಾನಕ್ಕೆ ಒತ್ತಾಯ

ಡಿ.ಪಿ.ನಾಗರಾಜ ಶ್ರೇಷ್ಠಿ

ಪ್ರಮುಖ ಮುಖ್ಯಾಂಶಗಳು

  • ಸಿರಿಗೆರೆ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
  • ಕೇಂದ್ರ ಸಚಿವರು, ಮಾಜಿ ಸಿಎಂ, ಸಂಸದರೊAದಿಗೆ ಚರ್ಚೆ
  • ಭದ್ರಾ ಮೇಲ್ದಂಡೆ ಯೋಜನೆ
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ತ್ವರಿತ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಸಲುವಾಗಿ ಸಿರಿಗೆರೆ ತರಳ ಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಹೊಸದಿಲ್ಲಿಗೆ ತೆರಳಿದ್ದಾರೆ.
ಯುಗಾದಿ ಆಚರಣೆ ಕೈ ಬಿಟ್ಟು ಹೊಸದಿಲ್ಲಿಗೆ ತೆರಳಿರುವ ಶ್ರೀಗಳನ್ನು ಬುಧವಾರ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ವಿ. ಸೋಮಣ್ಣ, ಸಂಸದರಾದ ಬಸವರಾಜ ಬೊಮ್ಮಾಯಿ, ಗೋವಿಂದ ಎಂ. ಕಾರಜೋಳ, ಬಿ.ವೈ. ರಾಘವೇಂದ್ರ, ಬಿಜೆಪಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮತ್ತಿತರ ಪ್ರಮುಖರು ಬೊಮ್ಮಾಯಿ ಅವರ ನಿವಾಸದಲ್ಲಿ ಬುಧವಾರ ಭೇಟಿಯಾಗಿದ್ದರು.
ಯೋಜನೆ ಕಾಮಗಾರಿ ತ್ವರಿತಗೊಳಿಸುವ ನಿಟ್ಟಿನಲ್ಲಿ ಕಳೆದ ಫೆಬ್ರವರಿ ೨೭ ರಂದು ಸಿರಿಗೆರೆ ಬÊಹನ್ಮಠದಲ್ಲಿ ಶ್ರೀಗಳ ಸಾನ್ನಿಧ್ಯದಲ್ಲಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ಅಽಕಾರಿಗಳ ಸಭೆ ಜರುಗಿತ್ತು. ಕೇಂದ್ರದ ಕÊಷಿ ಸಿಂಚಾ ಯಿ ಯೋಜನೆಯಡಿ ಭದ್ರಾ ಮೇಲ್ದಂಡೆ ಯೋಜನೆ ಸೇರಿಸಿ, ತ್ವರಿತವಾಗಿ ಯೋಜನೆ ಅನುಷ್ಠಾನಗೊಳಿಸಲು ೧೦ ಸಾವಿರ ಕೋಟಿ ರೂ. ಅಗತ್ಯವಿದ್ದು, ಇದರಲ್ಲಿ ಶೇ.೬೦ ಅಂದರೆ ೬ ಸಾವಿರ ಕೋಟಿ ರೂ.ಗಳನ್ನು ಕೇಂದ್ರ, ಉಳಿದ ಶೇ.೪೦ ಭಾಗದಷ್ಟು ೪ ಸಾವಿರ ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಭರಿಸಬೇಕಾಗಿದೆ.
ಮಾ.೨೦ ರಂದು ಮಧ್ಯಾಹ್ನ ೩ಕ್ಕೆ ಹೊಸದಿಲ್ಲಿಯಲ್ಲಿ ತಾಂತ್ರಿಕ ನೀರಾವರಿ ಸಲಹಾ ಸಮಿತಿ ಸಭೆ ಇದೆ. ಈ ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ಕÊಷಿ ಸಿಂಚಾಯಿ ಯೋಜನೆಯಡಿ ಸೇರಿಸುವ ನಿಟ್ಟಿನಲ್ಲಿ ಚರ್ಚೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕರ್ನಾ ಟಕದ ಕೇಂದ್ರ ಸಚಿವರು, ಅಽಕಾರಿಗಳ ಪೂರ್ವಭಾವಿ ಸಭೆ ಕರೆದು ಬಯಲುಸೀಮೆ, ಬರಗಾಲದ ಪರಿಸ್ಥಿತಿ ಮನವರಿಕೆ ಮಾಡಿಕೊಡಲು ಶ್ರೀಗಳು ಮಂಗಳವಾರ ಹೊಸದಿಲ್ಲಿಗೆ ತೆರಳಿದ್ದಾರೆ.
ನಾನಾ ಏತ ನೀರಾವರಿ ಯೋಜನೆಗಳ ಅನುಷ್ಠಾನ ನಿಟ್ಟಿನಲ್ಲಿ ಶ್ರಮಿಸಿರುವ ಶ್ರೀಗಳು ಈಗ ಭದ್ರಾ ಮೇಲ್ದಂಡೆ ಯೋಜನೆ ವಿಚಾರದಲ್ಲೂ ಕಾಳಜಿ ತೋರುವ ಮೂಲಕ ರೈತರ ಪರವಾಗಿ ನಿಂತಿದ್ದಾರೆ. -Àಸಲ್ ಬಿಮಾ ಯೋಜನೆ ತೊಂದರೆಗಳ ಬಗ್ಗೆ, ಕಾರ್ಮಿಕರ ಹಿತದೃಷ್ಟಿಯಿಂದ ವಿಐಎಸ್‌ಎಲ್ ಕಾರ್ಖಾನೆ ಮರು ಆರಂಭ ತೀರ್ಮಾನದ ಹಿನ್ನೆಲೆಯಲ್ಲಿ ಸಂಬAಽಸಿದ ಕೇಂದ್ರ ಸಚಿವರೊಂದಿಗೆ ಶ್ರೀಗಳು ಚರ್ಚಿಸಿದ್ದಾರೆ.