ಚಿತ್ರದುರ್ಗದಲ್ಲಿ ಮಂಗಳವಾರ ಏಡ್ಸ್ ನಿಯಂತ್ರಣ ಮತ್ತು ತಡೆ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಡಿಸಿ ಬಿ.ಟಿ. ಕುಮಾರಸ್ವಾಮಿ, ಡಾ.ಸಿ.ಒ. ಸುಧಾ, ಡಾ.ಜಿ.ಪಿ. ರೇಣುಪ್ರಸಾದ್, ಡಾ.ಬಿ.ವಿ. ಗಿರೀಶ್, ಡಾ. ರಾಘವೇಂದ್ರ ಇತರರು ಇದ್ದರು. 
ಚಿತ್ರದುರ್ಗ

ಎಚ್‌ಐವಿ ಸೋಂಕಿತರ ಚಿಕಿತ್ಸೆಗೆ ಶ್ರಮಿಸಿ

ಪ್ರಮುಖ ಮುಖ್ಯಾಂಶಗಳು

  • ಅಽಕಾರಿಗಳು, ಎನ್‌ಜಿಒಗಳಿಗೆ ಎಡಿಸಿ ತಾಕೀತು
  • ಸವಲತ್ತುಗಳನ್ನು ಒದಗಿಸಲು ಸಮನ್ವಯತೆ ಅಗತ್ಯ
  • ಏಡ್ಸ್ ನಿಯಂತ್ರಣ ಮತ್ತು ತಡೆ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ
ಚಿತ್ರದುರ್ಗ: ಜಿಲ್ಲೆಯ ಎಚ್‌ಐವಿ/ಏಡ್ಸ್ ಸೋಂಕಿತರನ್ನು ಮುಖ್ಯವಾಹಿನಿಗೆ ಕರೆ ತಂದು ಗುಣಮಟ್ಟದ ಚಿಕಿತ್ಸೆ ಮತ್ತು ಆರೈಕೆಗಾಗಿ ಕ್ರಮ ವಹಿಸುವಂತೆ ಎಡಿಸಿ ಬಿ.ಟಿ. ಕುಮಾರಸ್ವಾಮಿ ಅವರು ಅಽಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಽಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಡಿಸಿ ಕಚೇರಿಯಲ್ಲಿ ಮಂಗಳವಾರ ಏಡ್ಸ್ ನಿಯಂತ್ರಣ ಮತ್ತು ತಡೆ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಗುರುತಿಸಿದ ಎಚ್‌ಐವಿ ಸೋಂಕಿತರಲ್ಲಿ ಇನ್ನೂ ನೂರಾರು ಜನರು ಚಿಕಿತ್ಸೆಗೆ ಒಳಪಡಲು ಹಿಂದೇಟು ಹಾಕುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಕುಮಾರಸ್ವಾಮಿ, ಸೋಂಕಿತರ ಮನವೊಲಿಸಿ ಅವರ ಚಿಕಿತ್ಸೆಗೆ ಹೆಚ್ಚಿನ ಶ್ರಮ ವಹಿಸುವಂತೆ ಎನ್‌ಜಿಒಗಳನ್ನು ತರಾಟೆಗೆ ತೆಗೆದುಕೊಂಡರು.
ಪ್ರತಿಯೊಬ್ಬ ಸೋಂಕಿತನ ಆರೋಗ್ಯ ಸುಧಾರಣೆಯಾಗಬೇಕು. ಅವರಿಗೆ ಬೇಕಾದ ಸರ್ಕಾರಿ ಸವಲತ್ತು, ಆರೋಗ್ಯ ಇಲಾಖೆ ಸೌಲಭ್ಯಗಳನ್ನು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಸೋಂಕಿತ ಮಕ್ಕಳು ಮತ್ತು ವ್ಯಕ್ತಿಗಳ ಹಾಜರಾತಿ ಹಾಗೂ ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆ ಬಗ್ಗೆ ಕಟ್ಟುನಿಟ್ಟಿನ ಪರಾಮರ್ಶೆ ನಡೆಸಬೇಕು. ಯಾವುದೇ ಹಂತದಲ್ಲಿ ಚಿಕಿತ್ಸೆಸ್ಥಗಿತವಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತದಿಂದ ಅಗತ್ಯವಿರುವ ಸಹಕಾರ ಹಾಗೂ ಪರಿಕರ ಒದಗಿಸಲಾಗುವುದು, ಸೋಂಕಿತರಿಗೆ ಕಡ್ಡಾಯವಾಗಿ ಚಿಕಿತ್ಸೆ ಪಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸುವಂತೆ ಎನ್‌ಜಿಒಗಳಿಗೆ ತಾಕೀತು ಮಾಡಿದರು.
ಏಡ್ಸ್ ಮುಕ್ತ ಸಮಾಜ ನಿರ್ಮಾಣ ಸಾಧ್ಯ
ಎಚ್‌ಐವಿ ಸೋಂಕಿತರ ಬಗ್ಗೆ ಸಮಾಜದಲ್ಲಿರುವ ತಾರತಮ್ಯ ಹೋಗಲಾಡಿಸಿ, ಅವರಿಗೆ ಸೌಲಭ್ಯಗಳನ್ನು ತಲುಪಿಸಲು ಎಲ್ಲ ಇಲಾಖೆಗ ಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಸೋಂಕಿತರು ಕೂಡ ಗೌರವಯುತವಾಗಿ ಬದುಕುವ ಹಕ್ಕನ್ನು ಹೊಂದಿ ದ್ದಾರೆ. ಅವರಿಗೆ ಪಡಿತರ ಚೀಟಿ, ಮಾಶಾಸನ ಸೇರಿ ವಿವಿಧ ಸೌಲಭ್ಯಗಳನ್ನು ತಲುಪಿಸಲು ಇಲಾಖೆಗಳು ಮತ್ತು ಎನ್‌ಜಿಒಗಳು ಜಂಟಿಯಾಗಿ ಕೆಲಸ ಮಾಡಬೇಕು. ಸೋಂಕು ಹರಡದಂತೆ ತಡೆಯುವ ಗುರಿ ಸಾಽಸಬೇಕು. ಇದರಿಂದ ಸೋಂಕಿತರ ಜೀವಿತಾವಽ ಹೆಚ್ಚಿಸಲು ಸಾಧ್ಯವಿದೆ ಹಾಗೂ ಹೊಸದಾಗಿ ಯಾರಿಗೂ ಸೋಂಕು ತಗುಲದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜಾಗÊತಿ ಮೂಡಿಸಬೇಕು ಎಂದು ಕುಮಾರಸ್ವಾಮಿ ಹೇಳಿದರು.
ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕದ ಜಿಲ್ಲಾ ಅಽಕಾರಿ ಡಾ.ಸಿ.ಒ.ಸುಧಾ ಮಾತನಾಡಿ, ಎಚ್‌ಐವಿ ಸೋಂಕಿತರನ್ನು ಪತ್ತೆ ಹಚ್ಚು ವಲ್ಲಿ ಇಂಡೆಕ್ಸ್ ಟೆಸ್ಟಿಂಗ್(ಸೋAಕಿತರ ಸಂಪರ್ಕಿತರ ತಪಾಸಣೆ) ಪ್ರಮುಖ ಪಾತ್ರ ವಹಿಸಲಿದೆ. ನಿಯಮದಂತೆ ಒಬ್ಬ ೧:೫ ಅನು ಪಾತದಂತೆ ಸೋಂಕಿತರಿAದ ಸಂಪರ್ಕ ಹೊಂದಿರುವ ನಾಲ್ವರನ್ನು ಗುರುತಿಸಿ ತಪಾಸಣೆಗೆ ಒಳಪಡಿಸಬೇಕು. ಆದರೆ ಪ್ರಸ್ತುತ ೧:೨ ಅನುಪಾತ ಸಾಽಸುವುದೇ ದೊಡ್ಡ ಸವಾಲಾಗಿದೆ ಎಂದರು.
ಈ ಸಂದರ್ಭದಲ್ಲಿ ಎಚ್‌ಐವಿ/ಏಡ್ಸ್ ಕುರಿತು ಜಾಗÊತಿ ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು. ಡಿಎಚ್‌ಒ ಡಾ.ಜಿ.ಪಿ. ರೇಣು ಪ್ರಸಾದ್, ಟಿಎಚ್‌ಒ ಡಾ.ಬಿ.ವಿ. ಗಿರೀಶ್, ಡಾ. ರಾಘವೇಂದ್ರ, ಎಆರ್‌ಟಿ ವೈದ್ಯಾಽಕಾರಿ ಡಾ. ರೂಪಶ್ರೀ, ಏಡ್ಸ್ ನಿಯಂತ್ರಣ ಕಾ ರ್ಯಕ್ರಮದ ಜಿಲ್ಲಾ ಮೇಲ್ವಿಚಾರಕ ವಿ. ಅಶೋಕ, ತಾಂತ್ರಿಕ ತರಬೇತಿ ಅಽಕಾರಿ ಶಿವಪ್ರಸಾದ್ ಹಾಗೂ ಸುಚೇತನಾ ನೆಟ್‌ವರ್ಕ್, ಸೌಖ್ಯ ಸಮುದಾಯ ಸಂಸ್ಥೆ, ಅಭಿವÊದ್ಧಿ ಸಾಮಾಜಿಕ ಸೇವಾಸಂಸ್ಥೆ ಎನ್‌ಜಿಒ ಪ್ರತಿನಿಽಗಳು ಇತರರು ಇದ್ದರು.