ಕಲಬುರಗಿ: ಜಿಲ್ಲೆಯ ಹೈವೋಲ್ಟೇಜ್ ಕ್ಷೇತ್ರವಾಗಿರುವ ಚಿತ್ತಾಪುರ ಕ್ಷೇತ್ರದಲ್ಲಿ ಚುನಾವಣಾ ಅಧಿಕಾರಿಯೊಬ್ಬರು ಮತದಾರರ ಪರವಾಗಿ ಬಿಜೆಪಿ ಪರ ಬಟನ್ ಒತ್ತಿದ ಘಟನೆ ಚಿತ್ತಾಪುರ ತಾಲೂಕಿನ ಚಾಮನೂರು ಗ್ರಾಮದಲ್ಲಿ ನಡದಿದೆ. ಇದರಿಂದಾಗಿ ಕೆಲಹೊತ್ತು ಮಾತಿನ ಚಕಮಕಿ ನಡೆದು ಪರಿಸ್ಥಿತಿ ಉದ್ವಿಗ್ನಗೊಂಡಿತು.
ಇದರಿಂದಾಗಿ ಕೆಲಹೊತ್ತು ಮತದಾನ ನಿಲ್ಲಿಸಲಾಯಿತು. ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಿ. ಸಿ. ಚವ್ಹಾಣ ಎಂಬ ಮತಗಗಟ್ಟೆ ಅಧಿಕಾರಿ ಈ ಕೆಲಸ ಮಾಡಿದ್ದಾರೆ ಎಂದು ದೂರಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಪ್ರಿಯಾಂಕ್ ಖರ್ಗೆ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು ನಂತರ ಅಧಿಕಾರಿ ಬದಲಾಯಿಸಿದರು.
ಬಸ್ಸಮ್ಮ ಎಂಟುಮನ್ ಎಂಬ ಮಹಿಳೆ ಮತಗಟ್ಟೆಗೆ ಹೋಗಿ ಕಾಂಗ್ರೆಸ್ ಅಭ್ಯರ್ಥಿಯ ಚಿಹ್ನೆಗೆ ಬಟನ್ ಒತ್ತಲು ತಿಳಿಸಿದ್ದಾಳೆ. ಆದರೆ ಚುನಾವಣಾಧಿಕಾರಿ ಬಿಜೆಪಿ ಅಭ್ಯರ್ಥಿಯ ಮುಂದಿರುವ ಬಟನ್ ಒತ್ತಿದ್ದಾರೆ. ಅದು ಮಹಿಳೆ ಗಮನಕ್ಕೆ ಬಂದು ಆಕ್ಷೇಪ ವ್ಯಕ್ತಪಡಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ಇದಕ್ಕೂ ಮೊದಲು ಮತಯಂತ್ರ ಪರೀಕ್ಷೆ ಸಮಯದಲ್ಲಿ ಸಹ ಬಿಜೆಪಿಯ ಸುಮಾರು ಐವತ್ತಕ್ಕೂ ಅಧಿಕ ಅಧಿಕ ಮತ ಹಾಕಲಾಗಿದೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ನಂತರ ಅದನ್ನು ಡಿಲೀಟ್ ಮಾಡಲಾಗಿದೆ ಎಂದು ಸ್ಥಳೀಯ ಕಾಂಗ್ರೆಸ್ ಮುಖಂಡ ಭಗವಾನ್ ಹೇಳಿದರು..
ಸ್ಥಳಕ್ಕೆ ಆಗಮಿಸಿದ ಶಾಸಕ ಪ್ರಿಯಾಂಕ ಖರ್ಗೆ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು ಬದಲಾಯಿಸುವಂತೆ ಚುನಾವಣಾ ಅಧಿಕಾರಿ ಮೇಲೆ ಒತ್ತಡ ಹೇರಿದ ಮೇಲೆ ಅವರನ್ನು ಬದಲಾಯಿಸಲಾಯಿತು. ಆರೋಪಿಯನ್ನು ಪೊಲೀಸ್ ಕಸ್ಟಡಿ ಗೆ ಒಪ್ಪಿಸಲಾಗಿದೆ