ಜಿಲ್ಲೆ

ಪಿಎಸ್‌ಐ ನೇಮಕಾತಿ ಹಗರಣ: ಪೌಲ್​ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ಸಿಐಡಿ

Webdesk - Ravikanth

ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಸಿಐಡಿ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಜಾಮೀನು ಅರ್ಜಿಯನ್ನು ಶನಿವಾರ ವಿಚಾರಣೆ ನಡೆಸಿದ ಒಂದನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಆನಂದ ಚೌಹಾಣ್ ಅವರಿಗೆ ಸಿಐಡಿ ವಿಶೇಷ ಅಭಿಯೋಜಕ ಪಿ. ಪ್ರಸನ್ನ ಕುಮಾರ್ ಈ ಸಂಬಂಧ ಮನವಿ ಸಲ್ಲಿಸಿದರು.

ಇದೇ ವೇಳೆ, ಅಮೃತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಅನುಮತಿ ನೀಡುವ ಕುರಿತ ಪ್ರಾಸಿಕ್ಯೂಷನ್ ಮನವಿಗೆ ಜು.19ರಂದು ಉತ್ತರಿಸಲಾಗುವುದು ಎಂದು ಅಮೃತ್ ಪೌಲ್ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಅದನ್ನು ದಾಖಲಿಸಿಕೊಂಡ ನ್ಯಾಯಾಧೀಶರು ವಿಚಾರಣೆಯನ್ನು ಇದೇ 19ಕ್ಕೆ ಮುಂದೂಡಿದರು.