ಬೆಂಗಳೂರು: ಸಿಐಡಿ ಮಹಿಳಾ ಅಧಿಕಾರಿಯೊಬ್ಬರಿಗೆ ಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎ್ಐಆರ್ ದಾಖಲಾಗಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಮಹಾಲಿಂಗ(35) ವಿರುದ್ಧ ದೂರು ದಾಖಲಾಗಿದೆ.
ಅರಮನೆ ರಸ್ತೆಯಲ್ಲಿರುವ ಅಪರಾಧ ತನಿಖಾ ವಿಭಾಗ (ಸಿಐಡಿ) ಕಚೇರಿಯ ಸಮೀಪ ಈ ಘಟನೆ ನಡೆದಿದ್ದು, ಈ ಬಗ್ಗೆ ಮಹಿಳಾ ಅಧಿಕಾರಿ ನೀಡಿರುವ ದೂರಿನನ್ವಯ ಆರೋಪಿ ಮಹಾಲಿಂಗ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿ ಮಹಾಲಿಂಗ ಹಾಗೂ ಸಂತ್ರಸ್ತ ಮಹಿಳೆಯ ನಡುವೆ ಹಣಕಾಸಿನ ವ್ಯವಹಾರ ನಡೆದಿತ್ತು. ಮಹಿಳೆ ಆರೋಪಿಗೆ ಹಣ ಕೊಟ್ಟಿದ್ದರು. ಹಣಕಾಸಿನ ವಿಚಾರವಾಗಿ ವೈಮನ್ಸು ಉಂಟಾಗಿ ಆರೋಪಿ ಮಹಿಳೆಯ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಸುತ್ತ ಮುತ್ತಲಿನ ಸಿಸಿ ಕ್ಯಾಮರಾ ದೃಶ್ಯಾವಳಿ ವಶಕ್ಕೆ ಪಡೆದು ಆರೋಪಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.
ದೂರಿನಲ್ಲಿ ಏನಿದೆ?
ಸಿಐಡಿ ಕಚೇರಿಯಲ್ಲಿ ಸೆಕ್ಷನ್ ಆಫೀಸರ್ ಆಗಿರುವ 44 ವರ್ಷದ ಸಂತ್ರಸ್ತ ಮಹಿಳೆ ನ.೨೯ ರಂದು ಮಧ್ಯಾಹ್ನ ೨.೧೫ ರ ಸಮಯದಲ್ಲಿ ಅರಮನೆ ರಸ್ತೆಯ ಶ್ರೀಮುನೇಶ್ವರ ದೇವಸ್ಥಾನದ ಮುಂದೆ ುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುವಾಗ ಪರಿಚಿತನಾಗಿರುವ ಮಹಾಲಿಂಗ ಏಕಾಏಕಿ ಅವರನ್ನು ಅಡ್ಡಗಟ್ಟಿ ಮೈಕೈಮುಟ್ಟಿ, ಅಶ್ಲೀಲ ಪದಗಳಿಂದ ನಿಂದಿಸಿ, ‘‘ನೀ ನನ್ನ ಜತೆ ಬರಲಿಲ್ಲ ಅಂದರೆ ಕೊಲೆ ಮಾಡುತ್ತೇನೆ’ ಎಂದು ಬೆದರಿಕೆ ಹಾಕಿ ಸಾರ್ವಜನಿಕವಾಗಿ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೌರ್ಜನ್ಯ ಎಸಗಿರುವ ಮಹಾಲಿಂಗ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಮಹಿಳೆ ನೀಡಿರುವ ದೂರಿನಲ್ಲಿ ಒತ್ತಾಯಿಸಿದ್ದಾರೆ.