ಜಿಲ್ಲೆ

ಚಿಕ್ಕೋಡಿ ನಂದಿಪರ್ವತ ಆಶ್ರಮಕ್ಕೆ ಭೇಟಿ ನೀಡಿದ ಸಿಐಡಿ ಅಧಿಕಾರಿಗಳ‌ ತಂಡ

ಮಂಜುನಾಥ ಕೋಳಿಗುಡ್ಡ


ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ  ಆಶ್ರಮದಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ತನಿಖೆ ಚುರುಕುಗೊಳಿಸಿದ ಸಿಐಡಿ ಅಧಿಕಾರಿಗಳು.
ಮಂಗಳವಾರ ಹಿರೇಕೋಡಿ ನಂದಿಪರ್ವತ ಆಶ್ರಮಕ್ಕೆ ಉನ್ನತ ಮಟ್ಟದ ಅಧಿಕಾರಿಗಳ ಭೇಟಿ‌ನೀಡಿ ಪರಿಶೀಲನೆ ನಡೆಸಿ ‌ಮಾಹಿತಿ ಸಂಗ್ರಹಿಸಿದರು.
ಹಿರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿಗಳ ಕೋಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಿಐಡಿ ಐಜಿ ಪ್ರವೀಣ ಮಧುಕರ ಪವಾರ್.
ಎಫ್‌ಎಸ್‌ಎಲ್ ನಿರ್ದೇಶಕ ಧರ್ಮೇಂದ್ರ ಕುಮಾರ್ ಮೀನಾ ಸೇರಿ ಹಿರಿಯ ಅಧಿಕಾರಿಗಳ ತಂಡ ಭೇಟಿ.
ಬೆಳಗಾವಿ ಎಸ್‌ಪಿ ಡಾ.ಸಂಜೀವ್ ಪಾಟೀಲ್,
ಚಿಕ್ಕೋಡಿ ಡಿವೈಎಸ್‌ಪಿ ಬಸವರಾಜ ಯಲಿಗಾರ, ಸಿಪಿಐ ಆರ್.ಆರ್.ಪಾಟೀಲ್‌ರಿಂದ ಮಾಹಿತಿ ಪಡೆದುಕೊಂಡರು.