ಯಲಬುರ್ಗಾ ತಾಪಂ ಸಭಾಂಗಣದಲ್ಲಿ ಯಲಬುರ್ಗಾ-ಕುಕನೂರು ತಾಲೂಕಿನ ಅನುಷ್ಠಾನ ಇಲಾಖೆ ಅಧಿಕಾರಿಗಳು, ಗ್ರಾಪಂ ಅಧಿಕಾರಿ ಹಾಗೂ ಸಿಬ್ಬಂದಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರವನ್ನು ಜಿಪಂ ಎಡಿಪಿಸಿ ಮಹಾಂತಸ್ವಾಮಿ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ಚನ್ನಬಸವ, ತಾಪಂ ನರೇಗಾ ಸಹಾಯಕ ನಿರ್ದೇಶಕ ಹನುಮಂತಗೌಡ ಪಾಟೀಲ್, ಎ್ಇಸಿ ಸಂಸ್ಥೆಯ ಜಿಲ್ಲಾ ಸಂಯೋಜಕ ವಾಸುದೇವ ಮೂರ್ತಿ ಇದ್ದರು.  
ಜಿಲ್ಲೆ

ಸುತ್ತೋಲೆ ಪ್ರಕಾರ ಕಾಮಗಾರಿ ಆಯ್ಕೆ ಮಾಡಿ

ರುದ್ರಪ್ಪ ವಾಲಿ

ಯಲಬುರ್ಗಾ: ನರೇಗಾ ಯೋಜನೆಯಡಿ 2025-26ನೇ ಸಾಲಿನ ಕ್ರಿಯಾಯೋಜನೆಯನ್ನು ಸಾಫ್ಟ್‌ವೇರ್‌ನಲ್ಲಿ ಅಪ್‌ಲೋಡ್ ಮಾಡಬೇಕಿದ್ದು, ಈ ಬಗ್ಗೆ ಜಾಗೃತಿ ವಹಿಸಬೇಕು ಎಂದು ಜಿಪಂ ಸಹಾಯಕ ಕಾರ್ಯಕ್ರಮ ಸಂಯೋಜಕ ಮಹಾಂತಸ್ವಾಮಿ ಹೇಳಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಯಲಬುರ್ಗಾ-ಕುಕನೂರು ತಾಲೂಕಿನ ಅನುಷ್ಠಾನ ಇಲಾಖೆ ಅಧಿಕಾರಿಗಳು, ಗ್ರಾಪಂ ಅಧಿಕಾರಿ ಹಾಗೂ ಸಿಬ್ಬಂದಿಗೆ ಸೋಮವಾರ ಹಮ್ಮಿಕೊಂಡಿದ್ದ 2025-26ನೇ ಸಾಲಿನ ನರೇಗಾ ಕಾರ್ಮಿಕ ಆಯವ್ಯಯ ತಯಾರಿಕೆ ಕುರಿತ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಕೇಂದ್ರ ಸರ್ಕಾರದ ಪ್ರಧಾನ ವಾರ್ಷಿಕ ನರೇಗಾ ಸುತ್ತೋಲೆ ಪ್ರಕಾರ ಕಾಮಗಾರಿ ಆಯ್ಕೆ ಮಾಡಬೇಕು. ನರೇಗಾ ಸಿಬ್ಬಂದಿ, ಅನುಮೋದಿಸಿದ ಕಾಮಗಾರಿಗಳ ಕ್ಷೇತ್ರ ಭೇಟಿ ಮಾಡಿ ಪರಿಶೀಲಿಸಬೇಕು. ಬಳಿಕ ಅಂದಾಜು ಪತ್ರಿಕೆ ತಯಾರಿಸಬೇಕು. ಕ್ರಿಯಾಯೋಜನೆ ಸಿದ್ಧಪಡಿಸಿ ತಾಪಂ ಕಚೇರಿಗೆ ತಂತ್ರಾಂಶದ ಮೂಲಕ ಮಾಹಿತಿ ಸಲ್ಲಿಸಬೇಕು ಎಂದರು.

ನರೇಗಾ ಯೋಜನೆಯ ಕೃಷಿ, ಜೀವನೋಪಾಯ ಮತ್ತು ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿಪಡಿಸುವ ಕಾಮಗಾರಿಗಳ ಬಗ್ಗೆ ಮಾಹಿತಿ ಒದಗಿಸಬೇಕು. ವಿವಿಧ ಅನುಷ್ಠಾನ ಇಲಾಖೆಗಳು ಗ್ರಾಪಂ ಜವಾಬ್ದಾರಿ ಕಡಿಮೆ ಮಾಡಬೇಕು. ಇಲಾಖೆಗಳು ಹೆಚ್ಚಿನ ಮಟ್ಟದಲ್ಲಿ ಕಾಮಗಾರಿಗಳನ್ನು ಅನುಷ್ಠ್ಠಾನ ಮಾಡಬೇಕು. ಅಂದಾಗ ಮಾತ್ರ ಯೋಜನೆ ಫಲಾನುಭವಿಗಳ ಮನೆ ಬಾಗಿಲಿಗೆ ಮುಟ್ಟಲು ಸಾಧ್ಯ ಎಂದರು.

ಜಿಲ್ಲಾ ಸಂಪನ್ಮೂಲ ವ್ಯಕ್ತಿ ಚನ್ನಬಸವ ನರೇಗಾ ಯೋಜನೆಯ ಕ್ರಿಯಾ ಯೋಜನೆ ತಯಾರಿಕೆಯ ಕುರಿತು ಮಾಡೆಲ್ ಸಾಫ್ಟವೆರ್‌ನಲ್ಲಿ ಮಾಹಿತಿ ಅಳವಡಿಸುವ ಬಗ್ಗೆ ತರಬೇತಿ ನೀಡಿದರು.

ತಾಪಂ ನರೇಗಾ ಸಹಾಯಕ ನಿರ್ದೇಶಕ ಹನುಮಂತಗೌಡ ಪಾಟೀಲ್, ತಾಪಂ ಸಹಾಯಕ ನಿರ್ದೇಶಕ ಫಕೀರಪ್ಪ ಕಟ್ಟಿಮನಿ, ಜಿಪಂ ಎಂಐಎಸ್ ಸಂಯೋಜಕ ಮೈನುದ್ದಿನ್ ಇತರರಿದ್ದರು.