ಜಿಲ್ಲೆ

ಶಾಲೆ ಆರಂಭಿಸುವಂತೆ ಸಿಐಎಸ್​ಸಿಇ ಎಲ್ಲ ರಾಜ್ಯಗಳಿಗೂ ಮನವಿ

djtrupti

ಬೆಂಗಳೂರು : 10ರಿಂದ 12ನೇ ತರಗತಿಯ ಶಾಲೆಗಳನ್ನು ಜನವರಿಯಲ್ಲಿ ಆರಂಭಿಸುವಂತೆ ಭಾರತೀಯ ಶಾಲಾ ಪರೀಾ ಅಂಗೀಕಾರ ಪರಿಷತ್ತು(ಸಿಐಎಸ್​ಸಿಇ) ಎಲ್ಲ ರಾಜ್ಯಗಳಿಗೂ ಪತ್ರ ಬರೆದು ಮನವಿ ಮಾಡಿದೆ. ರಾಜ್ಯದಲ್ಲೂ ಜನವರಿಯಿಂದ ಶಾಲೆ ಆರಂಭಿಸುವುದು ಉತ್ತಮವೆಂದು ಕರೊನಾ ತಾಂತ್ರಿಕ ಸಲಹಾ ಸಮಿತಿ ಹೇಳಿದೆ. ಅಲ್ಲದೆ, ಇದೇ ಸಮಿತಿ ರಾಜ್ಯದಲ್ಲಿ ಜನವರಿ ಮತ್ತು ಫೆಬ್ರವರಿ ಎರಡನೇ ವಾರದಲ್ಲಿ  ಕರೊನಾ ಎರಡನೇ ಅಲೆ ಆರಂಭವಾಗುವ ಸಾಧ್ಯತೆ ಇದೆ ಎಂದೂ ಹೇಳಿದೆ.

ಇಂತಹ ಸಂದರ್ಭದಲ್ಲಿ ಶಾಲೆ ಆರಂಭಿಸವುದು ಹೇಗೆ ಎಂಬುದು ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಶಾಲೆ ಮತ್ತು ಪಿಯು ಕಾಲೇಜು ಆರಂಭದ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

ಇತ್ತೀಚಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್​.ಸುರೇಶ್​ ಕುಮಾರ್​ ಮುಖ್ಯಮಂತ್ರಿ ಅವರೊಂದಿಗೆ ಸಭೆ ನಡೆಸಿದ್ದು, ಡಿಸೆಂಬರ್​ ಮೂರನೇ ವಾರದಲ್ಲಿ ಮತ್ತೊಂದು ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಸಿಎಂ ಹೇಳಿಕೆ ನೀಡಿದ್ದರು.
10 ಮತ್ತು 12ನೇ ತರಗತಿ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹೆಚ್ಚು ಮಹತ್ವವಾಗಿದ್ದು, ಈ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸಿ ಪರೀೆಗೆ ಸಿದ್ಧಪಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ಶಾಲೆ ಆರಂಭಿಸುವುದು ಅನಿವಾರ್ಯ ಎಂದು ಮನಗಂಡು ಸಿಐಎಸ್​ಸಿಇ ಎಲ್ಲ ರಾಜ್ಯಗಳಿಗೆ ಪತ್ರ ಬರೆದು ಮನವಿ ಮಾಡಿದೆ.