ಜಿಲ್ಲೆ

ಕನಿಷ್ಠ ವೇತನ ನಿಗದಿಗೆ ಸಿಐಟಿಯು ಒತ್ತಾಯ

ಮರಿದೇವ ಹೂಗಾರ

ಹುಬ್ಬಳ್ಳಿ: ವೈಜ್ಞಾನಿಕ ಕನಿಷ್ಠ ವೇತನ ನಿಗದಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಪದಾಧಿಕಾರಿಗಳು, ಇಲ್ಲಿಯ ಕಾರ್ಮಿಕ ಭವನದ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಕಾರ್ಮಿಕ ಇಲಾಖೆ ಹೊರಡಿಸಿರುವ ಕನಿಷ್ಠ ವೇತನ ಕರಡು ಅಧಿಸೂಚನೆಯಲ್ಲಿ ಎಲ್ಲ ವಿಭಾಗಗಳಿಗೆ ಏಕರೂಪ ಕನಿಷ್ಠ ವೇತನ ನಿಗದಿ ಮಾಡಿರುವುದು ಸ್ವಾಗತಾರ್ಹ. ಆದರೆ, ವೈಜ್ಞಾನಿಕ ಲೆಕ್ಕಾಚಾರದಲ್ಲಿ ಕನಿಷ್ಠ ವೇತನ 36 ಸಾವಿರ ರೂ. ನಿಗದಿ ಮಾಡಬೇಕು. ವೇತನ ಹೆಚ್ಚಳವಾದರೆ ಕೈಗಾರಿಕೆಗಳು ರಾಜ್ಯದಿಂದ ಹೊರ ಹೋಗಲಿವೆ ಎನ್ನುವುದು ತಪ್ಪು ಕಲ್ಪನೆ. ಯಾವುದೇ ಒತ್ತಡಕ್ಕೆ ಮಣಿಯದೆ ಸರ್ಕಾರ ವಿಳಂಬ ಮಾಡದೇ ಅಂತಿಮ ಅಧಿಸೂಚನೆ ಹೊರಡಿಸಬೇಕು. ಸೇವಾ ಹಿರಿತನದ ಆಧಾರದಲ್ಲಿ ವೇತನ ನಿಗದಿಯಾಗಬೇಕೆಂದು ಒತ್ತಾಯಿಸಿದ ಮನವಿಯನ್ನು ಸಹಾಯಕ ಕಾರ್ಮಿಕ ಆಯುಕ್ತರ ಮೂಲಕ ಕಾರ್ಮಿಕ ಸಚಿವರಿಗೆ ರವಾನಿಸಿದರು.

ಸಿಐಟಿಯು ಪ್ರಧಾನ ಕಾರ್ಯದರ್ಶಿ ಮಹೇಶ ಪತ್ತಾರ, ಜಿಲ್ಲಾಧ್ಯಕ್ಷ ಬಿ.ಐ. ಈಳಿಗೇರ, ಚಂದ್ರಗೌಡ ವೆಂಕನಗೌಡರ, ಮಹೇಶ ಹುಲಗೋಡ, ಮಂಜುನಾಥ ದೊಡ್ಡಮನಿ, ಈಶ್ವರ ಚಂದೂನವರ, ನಾಗರಾಜ ನಾಗರಳ್ಳಿ, ಪುಷ್ಪಾ, ಸುಧಾ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿ ನೌಕರರು ಭಾಗವಹಿಸಿದ್ದರು.