ಕನಕಗಿರಿ ಪಟ್ಟಣದಲ್ಲಿ ಸಿಐಟಿಯುನಿಂದ ವಾಲ್ಮೀಕಿ ವೃತ್ತದಲ್ಲಿ ಕಾರ್ಮಿಕ ಪ್ರಚಾರ ಆಂದೋಲನ ಕಾರ್ಯಕ್ರಮ ನಡೆಯಿತು. ಸಿಐಟಿಯು ತಾಲೂಕು ಅಧ್ಯಕ್ಷ ಮಲ್ಲಪ್ಪ, ತಾಲೂಕು ಕಾರ್ಯದರ್ಶಿ ಪರುಶುರಾಮ, ನಬಿಸಾಬ್, ಶಾಂತಾ ಕನಕಗಿರಿ ಇತರರಿದ್ದರು. 
ಜಿಲ್ಲೆ

ಸಿಐಟಿಯುನಿಂದ ಪ್ರಚಾರ ಆಂದೋಲನ

Kopala - Desk - Eraveni

ಕನಕಗಿರಿ: ನಮ್ಮಿಂದ ಆಯ್ಕೆಯಾದ ಸರ್ಕಾರಗಳು ನಮ್ಮನ್ನೇ ತುಳಿಯುವ ಪ್ರಯತ್ನ ಮಾಡುತ್ತಿವೆ ಎಂದು ಬಿಸಿಯೂಟ ಅಡುಗೆದಾರರ ಸಂಘದ ರಾಜ್ಯಾಧ್ಯಕ್ಷೆ ಲಕ್ಷ್ಮೀದೇವಿ ಸೋನಾರ ಹೇಳಿದರು.

ಶನಿವಾರದಂದು ಇಲ್ಲಿನ ವಾಲ್ಮೀಕಿ ವೃತ್ತದಲ್ಲಿ ಕಾರ್ಮಿಕರ ನಾನಾ ಬೇಡಿಕೆ ಈಡೇರಿಸಲು ಆಗ್ರಹಿಸಿ ಆ.14ರಂದು ನಡೆಯುವ ಪ್ರತಿಭಟನೆಯ ಅಂಗವಾಗಿ ಪ್ರಚಾರಾಂದೋಲನದಲ್ಲಿ ಮಾತನಾಡಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ, ಕಾರ್ಮಿಕರಿಗೆ ಹಲವು ಭರವಸೆಗಳನ್ನು ನೀಡಿ ಮತ ಪಡೆದಿರುವ ರಾಜ್ಯ ಸರ್ಕಾರ, ಕೊಟ್ಟಿರುವ ಆಶ್ವಾಸನೆಗಳನ್ನು ಈಡೇರಿಸಲಾಗುತ್ತಿಲ್ಲ. ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದೆ.

ಸಿಐಟಿಯುನ ಕಾರ್ಮಿಕರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಅಲ್ಲದೇ, ಮಧ್ಯರಾತ್ರಿ 12ಕ್ಕೆ ರಾಷ್ಟ್ರಧ್ವಜ ಹಾರಿಸಲಾಗುವುದು ಎಂದರು.
ಸಿಐಟಿಯು ತಾಲೂಕು ಅಧ್ಯಕ್ಷ ಮಲ್ಲಪ್ಪ, ತಾಲೂಕು ಕಾರ್ಯದರ್ಶಿ ಪರುಶುರಾಮ, ನಬಿಸಾಬ್, ಶಾಂತಾ ಕನಕಗಿರಿ ಇದ್ದರು.