ಜಿಲ್ಲೆ

ಮಡಿಕೇರಿಯಲ್ಲಿ ಸಿಐಟಿಯು ಪ್ರತಿಭಟನೆ

ಸುನಿಲ್ ಪೊನ್ನೇಟಿ

ಮಡಿಕೇರಿ:

ಜಿಲ್ಲೆಯಲ್ಲಿ ಒತ್ತುವರಿ ಮಾಡಿಕೊಂಡಿರುವ ಸÀರ್ಕಾರಿ ಜಾಗವನ್ನು ಕಡಿಮೆ ದರಕ್ಕೆ ಗುತ್ತಿಗೆ ನೀಡುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ವತಿಯಿಂದ ಸೋಮವಾರ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ವಿವಿಧ ಬೇಡಿಕೆಗಳ ಈಡೇರಿಗಾಗಿ ಒತ್ತಾಯಿಸಿದರು.

ಈ ಸಂದರ್ಭ ಮಾತನಾಡಿದ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ ಪಿ.ಆರ್.ಭರತ್, ಬಿಜೆಪಿ ಸರ್ಕಾರ ತೆಗೆದುಕೊಂಡ ನಿರ್ಧಾರದಂತೆ ಕಾಂಗ್ರೆಸ್ ಸÀರ್ಕಾರ ಉಳ್ಳವರಿಗೆ ಗುತ್ತಿಗೆ ಆಧಾರದಲ್ಲಿ ಜಮೀನನ್ನು ನೀಡಲು ಮುಂದಾಗಿದೆ. ಇದರಿಂದ ಕಡು ಬಡತನದಲ್ಲಿರುವ ಆದಿವಾಸಿ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ವಂಚನೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜನವಿರೋಧಿ ಆದೇಶವನ್ನು ತಕ್ಷಣ ಹಿಂಪಡೆಯಬೇಕು, ಸರ್ಕಾರಿ ಒತ್ತುವರಿ ಜಾಗವನ್ನು ತೆರವುಗೊಳಿಸಿ ಜಿಲ್ಲೆಯ ನಿವೇಶನ ರಹಿತರಿಗೆ ನೀಡಬೇಕು, 2018-19ರಲ್ಲಿ ಮಹಾಮಳೆಯಿಂದ ಮನೆ ಕಳೆದುಕೊಂಡಿರುವ ನಿವೇಶನ ರಹಿತ ಕುಟುಂಟಗಳಿಗೆ ನಿವೇಶನ ನೀಡಬೇಕು, ನಿರಾಶ್ರಿತರ ಹೊಸ ಪಟ್ಟಿಯನ್ನು ತಯಾರಿಸಬೇಕು ಎಂದು ಒತ್ತಾಯಿಸಿದರು.

ವಾಲ್ನೂರು ಗ್ರಾ.ಪಂ ವ್ಯಾಪ್ತಿಗೆ ಒಳಪಡುವ 8.5 ಏಕರೆ ಜಾಗದಲ್ಲಿ ಮೂಲಭೂತ ಸೌಕರ್ಯ ಒದಗಿಸಬೇಕು, ಮನೆ ನಿರ್ಮಿಸಿಕೊಳ್ಳಲು ತಲಾ 10 ಲಕ್ಷ ರೂ. ನೀಡಬೇಕು, ನಿವೇಶನ ಹೊಂದಿರುವ ದಾಖಲಾತಿಗಳಿಲ್ಲದ ಸಾವಿರಾರು ಮನೆಗಳಿದ್ದು, 94 ಸಿ ಮೂಲಕ ಹಕ್ಕು ಪತ್ರ ವಿತರಣೆಯಾಗದೆ ಇರುವ ಕುಟುಂಬಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದರು.
ವನ್ಯಜೀವಿಗಳ ದಾಳಿಯಿಂದ ಮನುಷ್ಯರನ್ನು ಮತ್ತು ಕೃಷಿಯನ್ನು ರಕ್ಷಿಸಬೇಕು, ನೆಲ್ಲಿಹುದಿಕೇರಿ ಗ್ರಾ.ಪಂ.ವ್ಯಾಪ್ತಿಯ ರಸ್ತೆಗಳನ್ನು ಡಾಂಬರು ಅಥವಾ ಕಾಂಕ್ರಿಟೀಕರಣಗೊಳಿಸಬೇಕು, ರಸ್ತೆಗಳಿಗೆ ತಕ್ಷಣ ಚರಂಡಿ ನಿರ್ಮಾಣ ಮಾಡಬೇಕು, ನೆಲ್ಲಿಹುದಿಕೇರಿ ಪಟ್ಟಣದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಬೇಕು, ಒತ್ತುವರಿ ಮಾಡಿಕೊಂಡಿರುವ ಜಾಗವನ್ನು ಬಿಡಿಸಿ ನಿವೇಶನ ರಹಿತ ಬಡವರಿಗೆ ಹಾಗೂ ಆದಿವಾಸಿ ಕುಟುಂಬಗಳಿಗೆ ನೀಡಬೇಕು ಮತ್ತು ಮನೆ ನಿರ್ಮಿಸಿಕೊಡಬೇಕು ಆಗ್ರಹಿಸಿದರು.
ಸಿಐಟಿಯು ಕಾರ್ಯದರ್ಶಿ ಎ.ಸಿ.ಸಾಬು, ಉಪಾಧ್ಯಕ್ಷ ಮಹದೇವ್, ಖಜಾಂಚಿ ಎನ್.ಡಿ.ಕುಟ್ಟಪ್ಪನ್, ಸಹ ಕಾರ್ಯದರ್ಶಿಗಳಾದ ಕೆ.ಎಸ್.ಶಾಜಿ ರಮೇಶ್, ಕೆ.ಕೆ.ಹರಿದಾಸ್, ಪುಷ್ಪ, ಹೆಚ್.ಬಿ.ರಮೇಶ್, ಜಾನಕಿ, ಕರ್ನಾಟಕ ರಾಜ್ಯ ರೈತ ಸಂಘದ ಪ್ರಮುಖ ಲಕ್ಷö್ಮಣ್, ಆದಿವಾಸಿ ನಾಯಕರಾದ ರಘು, ಸುರೇಶ್, ಮುತ್ತ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಬೇಡಿಕೆಯ ಮನವಿ ಪತ್ರವನ್ನು ಜಿಲ್ಲಾಡಳಿತ ಮೂಲಕ ಸÀರ್ಕಾರಕ್ಕೆ ಸಲ್ಲಿಸಿದರು.