ಚಿಕ್ಕಮಗಳೂರಿನ ದಂಟರಮಕ್ಕಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಚ್.ಡಿ.ತಮ್ಮಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಬಿ.ಸಿ.ಬಸವರಾಜ್, ಗುರುಮಲ್ಲಪ್ಪ ಇದ್ದರು. 
ಜಿಲ್ಲೆ

ನಗರದ ಕಾಮಗಾರಿಗಳು ಶೀಘ್ರದಲ್ಲೇ ಪೂರ್ಣ

ಜಿ.ಹೆಚ್. ಧನ್ಯಕುಮಾರ್

ಚಿಕ್ಕಮಗಳೂರು: ಸಾರ್ವಜನಿಕರ ಹಿತಾಸಕ್ತಿಯಿಂದ ನಗರಸಭೆ ಅನುದಾನದಲ್ಲಿ 8.5 ಲಕ್ಷ ರೂ. ವೆಚ್ಚದಲ್ಲಿ ರಸ್ತೆ, ಚರಂಡಿ ಹಾಗೂ 6.5 ಲಕ್ಷ ರೂ. ವೆಚ್ಚದಲ್ಲಿ ಶನೇಶ್ವರ ದೇವಸ್ಥಾನದ ಎದುರಿನ ಪಾರ್ಕಿಂಗ್‌ಗೆ ಫೆನ್ಸಿನ್ ಹಾಕುವ ಕಾಮಗಾರಿ ನಡೆಸಲಾಗುವುದು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಶಂಕುಸ್ಥಾಪನೆ ತಿಳಿಸಿದರು.
ನಗರದ ದಂಟರಮಕ್ಕಿಯಲ್ಲಿ 15 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಶೀಘ್ರವಾಗಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಮುಕ್ತಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.
ನಗರಸಭೆ ಆಯುಕ್ತ ಬಿ.ಸಿ.ಬಸವರಾಜ್ ಮಾತನಾಡಿ, ದಂಟರಮುಕ್ಕಿಯಲ್ಲಿ ನಗರಸಭೆ ಅನುದಾನದಡಿ ಚರಂಡಿ ಹಾಗೂ ಶನೇಶ್ವರ ದೇವಾಲಯದ ಮುಂಭಾಗದ ಪಾರ್ಕ್ ಅಭಿವೃದ್ಧಿ ಮಾಡಬೇಕೆಂಬುದು ಜನರ ಬಹುದಿನದ ಬೇಡಿಕೆಯಾಗಿತ್ತು. ಹೀಗಾಗಿ ನಗರಸಭೆ ಅನುದಾನದಲ್ಲಿ ಕಾಮಗಾರಿ ಆರಂಭಿಸಲಾಗಿದೆ ಎಂದರು.
ಸ್ಥಳೀಯ ಮುಖಂಡ ಶ್ರೀನಿವಾಸ್ ಮಾತನಾಡಿ, ದಂಟರಮುಕ್ಕಿ ಭಾಗದಲ್ಲಿ ಹಲವಾರು ಸಮಸ್ಯೆಗಳಿವೆ. ಅವುಗಳ ಪರಿಹಾರಕ್ಕಾಗಿ ಶಾಸಕರಲ್ಲಿ ಹಲವು ಬೇಡಿಕೆ ಸಲ್ಲಿಲಸಾಗಿದೆ. ನಮ್ಮ ಬೇಡಿಕೆಗೆ ಸ್ಪಂದಿಸಿ ಇದೀಗ ಕೆಲ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿರುವುದು ಸ್ವಾಗತಾರ್ಹ. ಶೀಘ್ರ ಇನ್ನುಳಿದ ಸಮಸ್ಯೆಗಳ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.