ಜಿಲ್ಲೆ

ಶ್ರಮಿಕರ ಸೇವೆಗೆ ಬೆಲೆ ಕಟ್ಟಲಾಗದು

Davangere - Prakash Arali

ಹಿರಿಯೂರು: ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ತ್ಯಾಗ, ಸೇವೆ, ಸಮರ್ಪಣಾ ಭಾವದಿಂದ ಶ್ರಮಿಸುತ್ತಿರುವ ಪೌರ ಕಾರ್ಮಿಕರ ಸೇವೆಗೆ ಬೆಲೆ ಕಟ್ಟಲಾಗದು ಎಂದು ನಗರ ಸಭೆ ಸದಸ್ಯೆ ಶಂಷುನ್ನೀಸಾ ಹೇಳಿದರು.
ನಗರದ ರೋಟರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಳೆ-ಗಾಳಿ, ಚಳಿ ಲೆಕ್ಕಿಸದೆ ನಗರದ ಸ್ವಚ್ಛತೆಗೆ ನಸುಕಿನ ಜಾವ ಕಸವನ್ನು ಹೆಕ್ಕುವ ಪೌರ ಕಾರ್ಮಿಕರನ್ನು ಪ್ರತಿಯೊಬ್ಬರೂ ಗೌರವಿಸಬೇಕು, ಸುರಕ್ಷತೆ-ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದ ಮುಖ್ಯವಾಹಿಗೆ ತರಲು ಶ್ರಮಿಸಬೇಕು ಎಂದರು.
ಪೌರಾಯುಕ್ತ ಎಚ್.ಮಹಂತೇಶ್ ಮಾತನಾಡಿ, ಪೌರ ಕಾರ್ಮಿಕರ ಹಿತ ಕಾಯಲು ಬದ್ಧವಾಗಿದ್ದು, 20 ಕಾರ್ಮಿಕರಿಗೆ ಕಾಯಂ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ದುರ್ಗೇಶ್, ಮಾಜಿ ಅಧ್ಯಕ್ಷೆ ಗೀತಾ, ಸದಸ್ಯರಾದ ಪ್ರಕಾಶ್, ಅಂಬಿಕಾ, ಚಿತ್ರಜಿತ್, ಶಿವರಂಜನಿ ಇತರರಿದ್ದರು.