ಬನ್ನೂರು: ಪಟ್ಟಣದ ಪುರಸಭೆ ಅವರಣದಲ್ಲಿ ಸೋಮವಾರ ಪೌರಕಾರ್ಮಿಕರು ಮತ್ತು ಹೊರಗುತ್ತಿಗೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರು ವಿವಿಧ ಬೇಡಿಕೆಗಳನ್ನು ಈಡೆರಿಸುವಂತೆ ಆಗ್ರಹಿಸಿ ಧರಣಿ ನಡೆಸಿದರು.
ಪುರಸಭಾ ಆವರಣದಲ್ಲಿ ವಿವಿಧ ಘೋಷಣೆ ಕೂಗುತ್ತಾ ಧರಣಿ ಆರಂಭಿಸಿದರು. ಪೌರಕಾರ್ಮಿಕರಿಗೆ ವಿಮಾ ಸೌಲಭ್ಯ ಸೇರಿದಂತೆ ಆರೋಗ್ಯ ಸೇವಾ ಸೌಕರ್ಯ ಒದಗಿಸಬೇಕು. ಹೊರಗುತ್ತಿಗೆಯವರನ್ನು ಖಾಯಂಗೊಳಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಲ್ಲ ಕಾರ್ಮಿಕರು ಸೇರಿದಂತೆ ಸಿಬ್ಬಂದಿ ಇದ್ದರು.