ಮಡಿಕೇರಿ:
ಸ್ವಚ್ಛ ಮತ್ತು ಸುಂದರ ಕೊಡಗು ನಿರ್ಮಾಣದ ಜವಾಬ್ದಾರಿ ಜಿಲ್ಲೆಯ ಪ್ರತೀಯೋರ್ವರ ಮೇಲಿದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹೇಳಿದರು. ಕೂರ್ಗ್ ಹೋಟೇಲ್, ರೆಸಾರ್ಟ್ ಅಸೋಸಿಯೇಷನ್ ವತಿಯಿಂದ ವಿವಿಧ ಸಂಘಸAಸ್ಥೆಗಳ ಸಹಯೋಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸ್ವಚ್ಚ ಕೊಡಗು - ಸುಂದರ ಕೊಡಗು ಸ್ವಚ್ಚತಾ ಅಭಿಯಾನಕ್ಕೆ ಇಲ್ಲಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಆಯೋಜಿತ ಕಾರ್ಯಕ್ರಮದಲ್ಲಿ ಕಸ ಹೆಕ್ಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಕೊಡಗು ಜಿಲ್ಲೆಯ ಸುಂದರ ಪ್ರಕೃತಿ ಸಂಪನ್ಮೂಲ ಕಾಪಾಡದಿದ್ದರೆ ಭವಿಷ್ಯದಲ್ಲಿ ತೊಡಕು ಉಂಟಾಗುತ್ತದೆ. ಈಗಾಗಲೇ ಏಕಬಳಕೆ ಪ್ಲಾಸ್ಟಿಕ್ ನಿಷೇಧಿಸಲಾಗಿದೆ. ಮಡಿಕೇರಿಯಲ್ಲಿ 2 ಲೀಟರ್‌ಗಿಂತ ಕಡಿಮೆ ಸಂಗ್ರಹ ಸಾಮರ್ಥ್ಯದ ನೀರಿನ ಬಾಟಲ್‌ಗಳ ಮಾರಾಟ ಹಾಗೂ ಬಳಕೆಯನ್ನೂ ನಿಷೇಧಿಸಲಾಗಿದೆ. ಇದರಿಂದ ಕಸದ ಪ್ರಮಾಣ ಕಡಿಮೆಯಾಗಿದೆ. ಜಿಲ್ಲೆಯ ಸ್ವಚ್ಛತೆ ಕಾಪಾಡುವುದು ಎಲ್ಲರ ಜವಾಬ್ದಾರಿ. ಒಂದು ದಿನಕ್ಕೆ ಈ ಕಾರ್ಯಕ್ರಮ ಮೀಸಲಾಗದೆ ವರ್ಷವಿಡೀ ಸ್ವಚ್ಛತಾ ಜಾಗೃತಿ ಹೊಂದಿರಬೇಕು.
ಹಸಿರು ಸಂರಕ್ಷಣೆಯ ಕ್ರಾಂತಿ ಮಾಡಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಮನೆಯಿಂದಲೇ ಶೂನ್ಯ ತ್ಯಾಜ್ಯ ಬಗ್ಗೆ ಚಿಂತಿಸಬೇಕು. ಪ್ರವಾಸಿಗರು ಕಸ ಎಸೆದು ಪ್ರಕೃತಿಗೆ ಧಕ್ಕೆ ತರುತ್ತಿರುವ ಪ್ರಕರಣಗಳು ಆಗಿಂದಾಗ್ಗೆ ವರದಿಯಾಗುತ್ತಿವೆ. ಕೊಡಗಿನ ಸ್ವಚ್ಛತೆ ಕಾಪಾಡುವ ಜವಾಬ್ದಾರಿ ಎಲ್ಲರ ಮೇಲಿದೆ. ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆಯುವುದು ಕಂಡುಬAದಲ್ಲಿ ಸಂಬAಧಿಸಿದ ಸ್ಥಳೀಯ ಆಡಳಿತ ಕೂಡಲೇ ಕ್ರಮವಹಿಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ಸ್ವಚ್ಛ ಕೊಡಗು - ಸುಂದರ ಕೊಡಗು ಸ್ವಚ್ಛತಾ ಅಭಿಯಾನದಲ್ಲಿ ಜಿಲ್ಲೆಯಾದ್ಯಂತ ಸಂಗ್ರಹವಾಗುವ ಕಸವನ್ನು ವೈಜ್ಞಾನಿಕವಾಗಿ ಮೈಸೂರಿನ ತ್ಯಾಜ್ಯ ಸಂಗ್ರಹಾಲಯಕ್ಕೆ ಕೊಂಡೊಯ್ದು ವಿಲೇವಾರಿ ಮಾಡಲಾಗುವುದು. ಕೊಡಗಿನೆಲ್ಲೆಡೆ ಶುಚಿತ್ವ ಕಾರ್ಯ ಕೈಗೊಳ್ಳಲಾಗಿದೆ. ಸÀರ್ಕಾರಿ ಅಧಿಕಾರಿಗಳನ್ನು ನೋಡೆಲ್ ಅಧಿಕಾರಿಗಳನ್ನು ನೇಮಿಸಿ ಅಭಿಯಾನಲ್ಲಿ ಸಂಗ್ರಹವಾಗುವ ತ್ಯಾಜ್ಯ ವಿಲೇವಾರಿಗೆ ಮೇಲ್ವಿಚಾರಣೆ ಮಾಡಲಾಗುತ್ತ್ತಿದೆ ಎಂದರು.
ಕೂರ್ಗ್ ಹೋಟೇಲ್, ರೆಸಾರ್ಟ್ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳAಡ ದಿನೇಶ್ ಕಾರ್ಯಪ್ಪ ಮಾತನಾಡಿ, ಇದು ಕೊಡಗು ಸ್ವಚ್ಛತೆಯ ನಿಟ್ಟಿನಲ್ಲಿ ಪ್ರಥಮ ಹೆಜ್ಜೆಯಾಗಿದೆ. ಈ ಅಭಿಯಾನದಲ್ಲಿ ಜಿಲ್ಲೆಯ ವಿವಿಧೆಡೆಗಳ 320 ಕ್ಕೂ ಅಧಿಕ ಸಂಘಸAಸ್ಥೆಗಳು ಪಾಲ್ಗೊಂಡಿವೆ. ನಿರೀಕ್ಷೆಗೂ ಮೀರಿದ ಸ್ಪಂದನ ವ್ಯಕ್ತವಾಗಿದೆ. ಹಲವು ವರ್ಷಗಳಿಂದ ಪ್ರವಾಸೋದ್ಯಮದಿಂದ ಕೊಡಗಿಗೆ ಸಮಸ್ಯೆ ಉಂಟಾಗುತ್ತಿದೆ ಎಂಬ ಆರೋಪವಿದೆ. ಈ ಆರೋಪವನ್ನು ದೂರಮಾಡಿ, ಜವಾಬ್ದಾರಿಯುತ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಪ್ರವಾಸೋದ್ಯಮ ಅವಲಂಬಿತರು ಜವಾಬ್ದಾರಿ ತೆಗೆದುಕೊಂಡು ಈ ಯೋಜನೆ ರೂಪಿಸಲಾಗಿದೆ.
ಇದು ಒಂದು ದಿನಕ್ಕೆ ಸೀಮಿತವಲ್ಲ. ಮುಂದಿನ ದಿನಗಳಲ್ಲಿ ಪ್ರವಾಸಿ ತಾಣಗಳಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗುವುದು. ತ್ಯಾಜ್ಯ ಮುಕ್ತ, ಸ್ವಚ್ಛ ಕೊಡಗು ನಿರ್ಮಾಣದ ಸಂಕಲ್ಪದೊದಿಗೆ ವಿವಿಧ ಕಾರ್ಯಯೋಜನೆ ಜಾರಿಗೊಳಿಸಿ ಭವಿಷ್ಯದಲ್ಲಿ ಕೊಡಗನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿಸುವ ಗರ‍್ನಿ ಸಂಘ ಹೊಂದಿದೆ ಎಂದು ಹೇಳಿದರು.
ಮಡಿಕೇರಿ ನಗರಸಭೆ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಪೌರಾಯುಕ್ತ ಹೆಚ್.ಆರ್. ರಮೇಶ್, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ, ಕೂರ್ಗ್ ಹೋಟೇಲ್, ರೆಸಾರ್ಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ನಾಸೀರ್ ಅಹಮ್ಮದ್, ಉಪಾಧ್ಯಕ್ಷ ಜಾಹೀರ್ ಅಹಮ್ಮದ್, ಗೌರವ ಸಲಹೆಗಾರ ಜಿ. ಚಿದ್ವಿಲಾಸ್, ಸ್ವಚ್ಛ ಕೊಡಗು ಸುಂದರ ಕೊಡಗು ಅಭಿಯಾನದ ಸಾಮಾಜಿಕ ಜಾಲತಾಣ ಪ್ರಚಾರ ಸಮಿತಿ ಸಂಚಾಲಕ ಹೆಚ್.ಟಿ. ಅನಿಲ್, ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷೆ ಮೋಂತಿ ಗಣೇಶ್ ಸೇರಿದಂತೆ ಅನೇಕರು ಈ ಸಂದರ್ಭ ಹಾಜರಿದ್ದರು.