ವೀರಾಪುರ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಭೂಮಿಪೂಜೆ ನೆರವೇರಿಸಿದರು. ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಗ್ರಾಮೀಣ ಘಟಕದ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ, ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಮೆಹಬೂಬ್ ಸಾಬ್, ಕೆಪಿಸಿಸಿ ಸದಸ್ಯ ಸಿದ್ದನಗೌಡ ಮಾಟೂರು ಇತರರಿದ್ದರು. 
ಜಿಲ್ಲೆ

ಶುದ್ಧ ಕುಡಿವ ನೀರಿನ ಯೋಜನೆಗೆ ಅನುಮೋದನೆ

Kopala - Desk - Eraveni

ಸಿಂಧನೂರು: ಎಸ್‌ಎಚ್‌ಡಿಪಿ ಯೋಜನೆಯಡಿ ಕಲ್ಮಂಗಿಯಿಂದ ಗುಂಡಾವರೆಗೆ 30 ಕೋಟಿ ರೂ.ವೆಚ್ಚದಲ್ಲಿ ರಸ್ತೆ ನಿರ್ಮಿಸಲಾಗಿದೆ. ಈ ಭಾಗದ 13 ಹಳ್ಳಿಗಳಿಗೆ ಶುದ್ಧ ಕುಡಿವ ನೀರು ಸರಬರಾಜು ಮಾಡುವ ಉದ್ದೇಶದಿಂದ ಜಲಧಾರ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

ಮಸ್ಕಿ ವಿಧಾನಸಭಾ ಕ್ಷೇತ್ರದ ತಾಲೂಕು ವ್ಯಾಪ್ತಿಯ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಎಸ್ಸಿ-ಎಸ್ಟಿ ಸಮುದಾಯ ಭವನಗಳ ನಿರ್ಮಾಣ ಕಾಮಗಾರಿಗಳನ್ನು ಕೆಆರ್‌ಐಡಿಎಲ್‌ಗೆ ವಹಿಸಲಾಗಿದೆ.

ನಿಗದಿತ ಕಾಲಮಿತಿಯಲ್ಲಿ ಗುಣಮಟ್ಟದ ಕಾಮಗಾರಿ ಮುಗಿಸಿ ಬಳಕೆಗೆ ನೀಡಲಾಗುವುದು. ಕ್ಷೇತ್ರದ ಪ್ರತಿ ಗ್ರಾಮದಲ್ಲೂ ಸಿಸಿ ರಸ್ತೆ, ಸಮುದಾಯ ಭವನ ಸೇರಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತಿದೆ ಎಂದರು.

ತಾಲೂಕಿನ ವೀರಾಪುರ, ಬೊಮ್ಮನಾಳ, ಭೋಗಾಪುರ, ಹತ್ತಿಗುಡ್ಡ, ಗುಂಜಳ್ಳಿ ಹಾಗೂ ಕುರುಕುಂದಾ ಗ್ರಾಮದಲ್ಲಿ ಎಸ್ಸಿಪಿ-ಟಿಎಸ್ಪಿ ಯೋಜನೆಯಡಿ 2.85 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಹಾಗೂ ಮುಳ್ಳೂರು ಗ್ರಾಮದಲ್ಲಿ 27.56 ಲಕ್ಷ ರೂ.ಗಳಲ್ಲಿ ಶಾಲಾ ಕೊಠಡಿ ಹಾಗೂ 50 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ತಿಳಿಸಿದರು.

ಗ್ರಾಪಂ ಅಧ್ಯಕ್ಷ ವೆಂಕೋಬ, ಎಪಿಎಂಸಿ ಮಾಜಿ ನಿರ್ದೇಶಕ ಹುಲುಗಪ್ಪ, ಕೆಆರ್‌ಐಡಿಎಲ್‌ನ ಎಇಇ ಎಂ.ಡಿ. ಸೊಹೆಲ್, ಜೆಇ ಕಾಶಿನಾಥ, ಪ್ರಮುಖರಾದ ಅಶೋಕ ಉಮಲೂಟಿ, ಬಾಬಣ್ಣ ಉಮಲೂಟಿ, ಭೀಮಣ್ಣ, ಅಂಬಣ್ಣ ನಾಯಕ, ಯಮನಪ್ಪ ವೀರಾಪುರ, ಬಸಪ್ಪ, ಪರಸಪ್ಪ ಗೊರಲೂಟಿ ಇದ್ದರು.