ಸುಂಟಿಕೊಪ್ಪ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‌ಬೈಲ್ ಕಾರ್ಯಕ್ಷೇತ್ರದ ವಿವಿಧ ಸ್ವಸಹಾಯ ಸಂಘಗಳ ವತಿಯಿಂದ ಕಾನ್‌ಬೈಲ್ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಭಾನುವಾರ ಗಿಡಗಂಟಿಗಳನ್ನು ಕಿತ್ತು ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‌ಬೈಲು ಒಕ್ಕೂಟದ ಕಾರ್ಯದರ್ಶಿ ಪುಷ್ಪಲತಾ, ಮಾಜಿ ಅಧ್ಯಕ್ಷ ಖತ್ತೀಜ ಹಾಗೂ ಸೇವಾ ಪ್ರತಿನಿಧಿ ಯಶೋದಾ ಬಸವರಾಜ್ ಶ್ರಮಾದಾನ ಕಾರ್ಯಕ್ಕೆ ಚಾಲನೆ ನೀಡಿದರು.
ನಂತರ ಕಾನಬೈಲ್ ಒಕ್ಕೂಟ ವ್ಯಾಪ್ತಿಯ ಸ್ವಸಹಾಯ ಸಂಘಗಳಾದ ಜನನಿ, ಭೂಮಿಕ, ಶ್ರೀನಿಧಿ, ಮೂಕಾಂಬಿಕಾ ,ಕನ್ನಿಕ,ಭಗವತಿ ಧೃತಿ ಹಾಗೂ ನೇತಾಜಿ ಸಂಘದ ಸದಸ್ಯರು ಶ್ರಮಾದಾನದಲ್ಲಿ ಪಾಲ್ಗೊಂಡು ಶಾಲಾ ಆವರಣದಲ್ಲಿ ಬೆಳೆದು ನಿಂತಿದ್ದ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿದರು.