ಜಿಲ್ಲೆ

ಕುಂದಾಪುರದಲ್ಲಿ ಸ್ವಚ್ಛತಾ ಅರಿವು ಕಾರ್ಯಕ್ರಮ

ಇಂದಿರಾ ಎನ್ ಕೆ

ಕುಂದಾಪುರ: ಕುಂದಾಪುರ ತಾಲೂಕು ಕಚೇರಿ ಸಭಾಂಗಣದಲ್ಲಿ ಜರುಗಿದ ಸ್ವಚ್ಛತಾ ಹೀ ಸೇವಾ ಅಭಿಯಾನ-2024ರ ಅಂಗವಾಗಿ ಸ್ವಚ್ಛತಾ ಅರಿವು ಕಾರ್ಯಕ್ರಮ ಮತ್ತು ಹಿರಿಯ ನಾಗರಿಕರ ದಿನಾಚರಣೆ ನಡೆಯಿತು.

ಹಿರಿಯ ಸಿವಿಲ್ ನ್ಯಾಯಾಧೀಶ ರಾಜು ಎನ್. ಉದ್ಘಾಟಿಸಿದರು. ಕುಂದಾಪುರ ಸಹಾಯಕ ಆಯುಕ್ತ ಮಹೇಶ್ಚಂದ್ರ ಕೆ. ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ ಮಂಜುಳಾ ಬಿ., ಕುಂದಾಪುರ ತಹಸೀಲ್ದಾರ್ ಶೋಭಾಲಕ್ಷ್ಮೀ ಎಚ್.ಎಸ್., ಕುಂದಾಪುರ ವಕೀಲರ ಸಂಘ ಅಧ್ಯಕ್ಷ ಹಂದಟ್ಟು ಪ್ರಮೋದ ಹಂದೆ, ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಆನಂದ ಜಿ., ಸಹಾಯಕ ಸರ್ಕಾರಿ ಅಭಿಯೋಜಕ ಉದಯ ಕುಮಾರ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಗಿಳಿಯಾರು ಪ್ರಕಾಶ್ಚಂದ್ರ ಶೆಟ್ಟಿ, ರೆಡ್ ಕ್ರಾಸ್ ಸೊಸೈಟಿ ಚೇರ್ಮನ್ ಎಸ್.ಜಯಕರ ಶೆಟ್ಟಿ, ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷ ಸದಾನಂದ ಶೆಟ್ಟಿ ಹಾಗೂ ಹಿರಿಯ ನಾಗರಿಕ ವೇದಿಕೆ ಸದಸ್ಯರು ಹಾಗೂ ತಾಲೂಕು ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು. ಉಪತಹಸೀಲ್ದಾರ್ ವಿನಯ್ ಎಸ್.ವಿ. ಕಾರ್ಯಕ್ರಮ ನಿರ್ವಹಿಸಿದರು.