ಪಂಚವರ್ಣ ಸಂಸ್ಥೆ ವತಿಯಿಂದ ಸ್ವಚ್ಛತೆ ಕಾರ್ಯಕ್ರಮ ನಡೆಯಿತು.  
ಜಿಲ್ಲೆ

ಪಂಚವರ್ಣ ಸಂಸ್ಥೆಯಿಂದ ಸ್ವಚ್ಛತೆ

ಕೋಟ: ಕೋಟದ ಪಂಚವರ್ಣ ಯುವಕ ಮಂಡಲ, ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ, ಜೆಸಿಐ ಸಿನಿಯರ್ ಲಿಜನ್ ಸಹಯೋಗದೊಂದಿಗೆ ಕೋಟ ಗ್ರಾಮ ಪಂಚಾಯಿತಿ, ಎಸ್‌ಎಲ್‌ಆರ್‌ಎಂ ಘಟಕದ ಸಂಯೋಜನೆಯೊಂದಿಗೆ 234ನೇ ಪರಿಸರಸ್ನೇಹಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಭೋಜ ಪೂಜಾರಿ, ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯದರ್ಶಿ ವಸಂತಿ ಹಂದಟ್ಟು, ಜೆಸಿಐ ಸಿನಿಯರ್ ಅಧ್ಯಕ್ಷ ಕೇಶವ ಆಚಾರ್, ಮಣೂರು ಫ್ರೆಂಡ್ಸ್ ಮಾಜಿ ಅಧ್ಯಕ್ಷ ದಿನೇಶ್ ಆಚಾರ್ ಮತ್ತಿತರರು ಉಪಸ್ಥಿತರಿದ್ದರು. ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.