ನಾಪೋಕ್ಲು: ಕೂರ್ಟ್ ಹೋಟೇಲ್, ರೆಸಾರ್ಟ್ ಅಸೋಸಿಯೇಷನ್ ವತಿಯಿಂದ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛ ಕೊಡಗು-ಸುಂದರ ಕೊಡಗು ಸ್ವಚ್ಛತಾ ಅಭಿಯಾನದಲ್ಲಿ ಸ್ಥಳೀಯ ಪ್ಲಾಂಟಸ್ ಕ್ಲಬ್, ಶೌರ್ಯ ವಿಪತ್ತು ನಿರ್ವಹಣಾ ತಂಡ ಭಾಗವಹಿಸಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ತ್ಯಾಜ್ಯ ಸಂಗ್ರಹಿಸಲಾಯಿತು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ಪ್ಲಾಂಟಸ್ ಕ್ಲಬ್ ಅಧ್ಯಕ್ಷ ಬಾಚಮಂಡ ಲವ ಚಿನ್ನಪ್ಪ , ಚೆಕ್ ಪುವಂಡ, ಅಪ್ಪಚ್ಚು, ಶಿವಚಳಿಯಂಡ ಅಂಬಿ ಕಾರ್ಯಪ್ಪ, ಅರೆಯಡ ರತ್ನ, ಕಲಿಯಡರ ಕೌಶಿಕ್, ಶೌರ್ಯ ವಿಪತ್ತು ನಿರ್ವಹಣಾ ತಂಡದ ತಾಲೂಕು ಮಾಸ್ಟರ್ ಬಾಳೆಯಡ ದಿವ್ಯ ಮಂದಪ್ಪ, ತಂಡದ ಸದಸ್ಯರು ಭಾಗವಹಿಸಿದ್ದರು.