ಉಪ್ಪಿನಂಗಡಿ: ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯೂತ್ ರೆಡ್‌ಕ್ರಾಸ್ ಅಭಿಯಾನದಡಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ವಠಾರದಲ್ಲಿ ಸ್ವಚ್ಛತಾ ಅಭಿಯಾನ ಸೋಮವಾರ ನಡೆಯಿತು.
ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾದ ದಿಶಾ ಜಿ.ಆರ್. ಹಾಗೂ ರಶ್ಮಿ ಪಿ.ಸಿ. ನೇತೃತ್ವದಲ್ಲಿ ಆಗಮಿಸಿದ ಕಾಲೇಜಿನ ಎನ್‌ಎಸ್‌ಎಸ್ ಘಟಕದ 57 ವಿದ್ಯಾರ್ಥಿಗಳು ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದರು.
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಕ್, ಸದಸ್ಯರಾದ ಡಾ.ರಮ್ಯಾ ರಾಜಾರಾಮ್, ದೇವಿದಾಸ್ ರೈ, ಗೋಪಾಲಕೃಷ್ಣ ರೈ ವಿದ್ಯಾರ್ಥಿಗಳ ತಂಡವನ್ನು ಸ್ವಾಗತಿಸಿದರು.