ಪುತ್ತೂರು ಗ್ರಾಮಾಂತರ: ಒಳಮೊಗ್ರು ಗ್ರಾಮದ ವ್ಯಾಪ್ತಿಯ ಅಜ್ಜಿಕಲ್ಲು ವ್ಯಾಪ್ತಿಯಲ್ಲಿ ಒಳಮೊಗ್ರು ಗ್ರಾಪಂ ವತಿಯಿಂದ 6ನೇ ದಿನದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಒಳಮೊಗ್ರು ಗ್ರಾ.ಪಂ. ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮನ್ಮಥ ಅಜಿರಂಗಳ, ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ಗ್ರಾಪಂ ಸದಸ್ಯರು, ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ ಘಟಕದ ವಿದ್ಯಾರ್ಥಿನಿಯರು, ಅನುಗ್ರಹ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಅಜ್ಜಿಕಲ್ಲು ವ್ಯಾಪ್ತಿಯ ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಗ್ರಾಮಸ್ಥರು ಸೇರಿದಂತೆ 150ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.
ಅಜ್ಜಿಕಲ್ಲು ಸುತ್ತಮುತ್ತ ರಸ್ತೆ ಬದಿಯಲ್ಲಿದ್ದ ಪ್ಲಾಸ್ಟಿಕ್, ಕಸ, ಕಡ್ಡಿ ಸೇರಿದಂತೆ ಪೇಟೆಯನ್ನು ಸಂಪೂರ್ಣ ಸ್ವಚ್ಛ ಮಾಡಲಾಯಿತು. ಸಂಗ್ರಹವಾದ ಕಸವನ್ನು ಗ್ರಾಪಂ ಸ್ವಚ್ಛತಾ ವಾಹಿನಿ ವಾಹನದಲ್ಲಿ ಘನತ್ಯಾಜ್ಯ ಘಟಕದಲ್ಲಿ ವಿಲೇವಾರಿ ಮಾಡಲಾಯಿತು.