ಜಿಲ್ಲೆ

ಕುಕ್ಕೆ ಕ್ಷೇತ್ರದಲ್ಲಿ ಸ್ವಚ್ಛತಾ ಅಭಿಯಾನ

ಸೌಮ್ಯ ಆರ್

ಸುಬ್ರಹ್ಮಣ್ಯ: ಕುಕ್ಕೆಶ್ರೀ ಸೀನಿಯರ್ ಚೇಂಬರ್ ಸುಬ್ರಹ್ಮಣ್ಯ ಹಾಗೂ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಪ್ರತಿ ಭಾನುವಾರ ನಿರಂತರವಾಗಿ ಸ್ವಚ್ಛತಾ ಅಭಿಯಾನ ನಡೆಸುತ್ತಿದ್ದು, ಅಭಿಯಾನದಲ್ಲಿ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್‌ನ 30ಕ್ಕೂ ಅಧಿಕ ಮಂದಿ ಭಾಗವಹಿಸಿದರು.

ಕುಮಾರಧಾರಾ ಸೇತುವೆ ಮೇಲಿನ ಕಸ ಕಡ್ಡಿಗಳು, ಮಣ್ಣು, ತರೆಗೆಲೆಗಳು, ಇತರ ತ್ಯಾಜ್ಯಗಳನ್ನು ಸ್ವಚ್ಛಗೊಳಿಸಿದರು. ಕುಮಾರಧಾರಾ ಸ್ನಾನಘಟ್ಟ ಪರಿಸರದಲ್ಲಿದ್ದ ಕಸ ಕಡ್ಡಿಗಳು, ಪ್ಲಾಸ್ಟಿಕ್ ಚೀಲ, ಪ್ಲಾಸ್ಟಿಕ್ ಬಾಟಲಿಗಳು ಹಾಗೂ ಕೊಳಚೆ ವಸ್ತುಗಳನ್ನು ಸಂಗ್ರಹಿಸಿ ಮೂಟೆ ಮಾಡಿ ತ್ಯಾಜ್ಯ ವಿಲೇವಾರಿ ಘಟಕಕ್ಕೆ ರವಾನಿಸಿದರು.

ಸೀನಿಯರ್ ಚೇಂಬರ್ ಅಧ್ಯಕ್ಷ ವೆಂಕಟೇಶ ಎಚ್.ಎಲ್., ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟಿನ ಸಂಸ್ಥಾಪಕ ರವಿ ಕಕ್ಕೆಪದವು, ಸುಬ್ರಹ್ಮಣ್ಯ ಕುಕ್ಕೆಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷ ವೆಂಕಟೇಶ್ ಎಚ್.ಎಲ್., ಸ್ಥಾಪಕಾಧ್ಯಕ್ಷ ವಿಶ್ವನಾಥ ನಡುತೋಟ, ಕಾರ್ಯದರ್ಶಿ ಗೋಪಾಲ ಎಣ್ಣೆಮಜಲ್, ಸಮಾಜ ಸೇವಾ ಟ್ರಸ್ಟ್ ಸ್ವಯಂಸೇವಕರು ಭಾಗವಹಿಸಿದ್ದರು. ಗೀತಾ ರವಿ ಕಕ್ಕೆಪದವು ಸ್ವಯಂಸೇವಕರಿಗೆ ಉಪಹಾರದ ವ್ಯವಸ್ಥೆ ಮಾಡಿದ್ದರು.