ಜಿಲ್ಲೆ

ಸುಳ್ಯ ನಗರದಲ್ಲಿ ಸ್ವಚ್ಛತಾ ಅಭಿಯಾನ, ತರಬೇತಿ

ಸುಳ್ಯ: ಪಪಂ ಹಾಗೂ ಕೆವಿಜಿ ದಂತ ಮಹಾವಿದ್ಯಾಲಯ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ, ಸ್ವಚ್ಛತಾ ಜಾಗೃತಿ ಅಭಿಯಾನ ಹಾಗೂ ತರಬೇತಿ ಕಾರ್ಯಕ್ರಮ ನಡೆಯಿತು.

ನಗರದ ವಿವೇಕಾನಂದ ವೃತ್ತದಿಂದ ಕುರುಂಜಿಭಾಗ್‌ವರೆಗೆ ವಿವಿಧ ಕಡೆಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು, ನಗರ ಪಂಚಾಯಿತಿ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ, ಅಮರ ಸುಳ್ಯ ರಮಣೀಯ ತಂಡದ ಸದಸ್ಯರು ಹಾಗೂ ಸಾರ್ವಜನಿಕರು ಅಭಿಯಾನದಲ್ಲಿ ಭಾಗವಹಿಸಿದರು.

ಬಳಿಕ ಪಪಂ ಸಭಾಂಗಣದಲ್ಲಿ ಘನ ತ್ಯಾಜ್ಯ ವಸ್ತುಗಳ ನಿರ್ವಹಣೆ, ನಗರ ನೈರ್ಮಲ್ಯ ಜಾಗೃತಿ ಕುರಿತು ತರಬೇತಿ ಶಿಬಿರ ನಡೆಯಿತು. ಕೆವಿಜಿ ದಂತ ಮಹಾವಿದ್ಯಾಲಯ ಎಕ್ಸಿಕ್ಯುಟಿವ್ ಡೈರೆಕ್ಟರ್ ಮೌರ್ಯ ಆರ್.ಪ್ರಸಾದ್ ಶಿಬಿರ ಉದ್ಘಾಟಿಸಿದರು. ನಗರ ಪಂಚಾಯಿತಿ, ಕೆವಿಜಿ ದಂತ ಮಹಾವಿದ್ಯಾಲಯ, ಸ್ವಚ್ಛ ಭಾರತ್ ಮಿಷನ್, ಮಾಹಿತಿ ಶಿಕ್ಷಣ ಸಂವಹನ ಹಾಗೂ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮದ ಅಂಗವಾಗಿ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಡಾ.ರಾಜೇಶ್ ಬೆಜ್ಜಂಗಳ ಪುತ್ತೂರು ಸಂಪನ್ಮೂಲ ವ್ಯಕ್ತಿಯಾಗಿದ್ದರು. ನಗರ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಎ.ನೀರಬಿದಿರೆ, ಉಪಾಧ್ಯಕ್ಷ ಬುದ್ಧ ನಾಯ್ಕ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ.ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು.ಜೆ, ಕೆವಿಜಿ ದಂತ ಮಹಾವಿದ್ಯಾಲಯ ಪ್ರಾಂಶುಪಾಲೆ ಡಾ.ಮೋಕ್ಷಾ ನಾಯಕ್, ನಪಂ ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ ಮತ್ತಿತರರು ಉಪಸ್ಥಿತರಿದ್ದರು.