ಜಿಲ್ಲೆ

ಜಿಲ್ಲೆಯ 12 ಗ್ರಾ.ಪಂ.ಗಳಿಗೆ ಸ್ವಚ್ಛತೆಯೇ ಸೇವೆ ಪ್ರಶಸ್ತಿ

ಮಡಿಕೇರಿ:

ಜಿಲ್ಲೆಯಾದ್ಯಂತ ಸ್ವಚ್ಛತೆಯೇ ಸೇವೆ (ಸ್ವಚ್ಛತಾ ಹೀ ಸೇವಾ ) ಪಾಕ್ಷಿಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದು ಕೊಡಗು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಜಿ. ಧನರಾಜು ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಶಂಸನಾ ಪತ್ರ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸೂಚನೆಯಂತೆ ಸ್ವಚ್ಛತೆಯೇ ಸೇವೆ ಪಾಕ್ಷಿಕ ಅಭಿಯಾನವನ್ನು ಸೆ. 17 ರಿಂದ ಅ. 2 ರ ವರೆಗೆ ಜಿಲ್ಲೆಯ 102 ಗ್ರಾಮಪಂಚಾಯಿತಿಗಳಲ್ಲಿಯೂ ಉತ್ತಮ ಮತ್ತು ವಿಭಿನ್ನವಾಗಿ ಹಮ್ಮಿಕೊಳ್ಳಲಾಗಿದೆ. ಅಭಿಯಾನದ ಭಾಗವಾಗಿ ಶ್ರಮದಾನ, ಶಾಲಾ ಮಕ್ಕಳಿಗೆ ರಸಪ್ರಶ್ನೆ, ಚಿತ್ರಕಲಾ ಸ್ಪರ್ಧೆ, ಮಹಿಳಾ ಸಂಘದ ಸದಸ್ಯರಿಗೆ ರಂಗೋಲಿ ಸೇರಿದಂತೆ ವಿವಿಧ ಚಟುವಟಿಕೆಗಳನ್ನು 15 ದಿನಗಳ ಕಾಲ ಹಮ್ಮಿಕೊಂಡು ಸ್ವಚ್ಛತೆಯ ಸಂದೇಶವನ್ನು ಸಾರಲಾಗಿದೆ. ಸೆ. 27 ರಂದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಪ್ರವಾಸಿ ಸ್ಥಳಗಳಲ್ಲಿ ಸ್ವಚ್ಛತಾ ಆಂದೋಲನಗಳನ್ನು ಹಮ್ಮಿಕೊಳ್ಳಲಾಗಿತ್ತು. 102 ಗ್ರಾ.ಪಂ.ಗಳ ಪೈಕಿ 5 ತಾಲೂಕಿನಿಂದ ಅತ್ಯುತ್ತಮವಾಗಿ ಕಾರ್ಯಕ್ರಮ ಆಯೋಜನೆ ಮಾಡಿರುವ 12 ಗ್ರಾ.ಪಂ.ಗಳಿಗೆ ಪ್ರಶಂಸನಾ ಪತ್ರವನ್ನು ನೀಡುತ್ತಿರುವುದು ಸಂತಸದ ವಿಷಯ. ಮುಂದಿನ ದಿನಗಳಲ್ಲಿಯೂ ಗ್ರಾಮಪಂಚಾಯಿತಿ ಮಟ್ಟದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ಜೊತೆಗೆ ಸುಂದರ ಪರಿಸರವನ್ನು ನಿರ್ಮಾಣ ಮಾಡಬೇಕು ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್, ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಉತ್ತಮ ಪಾಕ್ಷಿಕ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಯಾವುದೇ ಯೋಜನೆಯ ಯಶಸ್ವಿಗೆ ಮಾಹಿತಿ, ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಗಳು ಅತೀ ಅವಶ್ಯಕ. ಗ್ರಾಮಪಂಚಾಯಿತಿಗಳು ವಿಶಿಷ್ಟವಾಗಿ ಕಾರ್ಯಕ್ರಮ ಹಮ್ಮಿಕೊಂಡು ಜನರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವುದರ ಜತೆಗೆ ಸ್ವಚ್ಛತೆ ಎಂಬುದೂ ಸಹ ಸೇವೆ ಎಂಬುದನ್ನು ತಿಳಿಸಿವೆ ಎಂದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಸುರೇಶ್ ಕುಮಾರ್, ಜಿ.ಪಂ. ಸಹಾಯಕ ಕಾರ್ಯದರ್ಶಿ ಅಬ್ದುಲ್ ನಬಿ, ಸಹಾಯಕ ಯೋಜನಾಧಿಕಾರಿ ಜೀವನ್ ಕುಮಾರ್, ಸೋಮವಾರಪೇಟೆ ತಾ.ಪಂ. ಸಹಾಯಕ ನಿರ್ದೇಶಕ ಶ್ರೀನಿವಾಸ್, ಸ್ವಚ್ಛ ಭಾರತ್ ಮಿಷನ್ ಯೋಜನೆಯ ಜಿಲ್ಲಾ ಸಮಾಲೋಚಕÀ ಪೆಮ್ಮಯ್ಯ, ವಾಸುದೇವ್, ಹರ್ಷಿತ, ಭವ್ಯ ಇತರರು ಇದ್ದರು.

ಸ್ವಚ್ಛತೆಯೇ ಸೇವೆ ಅಭಿಯಾನದ ಅನುಷ್ಟಾನ ಸಂಬAಧಿಸಿದAತೆ 7ನೇ ಹೊಸಕೋಟೆ, ದೇವರಪುರ, ಕೂಡುಮಂಗಳೂರು, ನಾಪೋಕ್ಲು ಹಾಗೂ ಗುಡ್ಡೆಹೊಸೂರು ಗ್ರಾ.ಪಂ. ಅಧ್ಯಕ್ಷರು ಅಭಿಪ್ರಾಯ ಹಂಚಿಕೊAಡರು. ಬಳಿಕ ಜಿಲ್ಲೆಯಾದ್ಯಂತ ಸ್ವಚ್ಛತೆಯೇ ಸೇವೆ ಅಭಿಯಾನವನ್ನು ಗ್ರಾ.ಪಂ. ಮಟ್ಟದಲ್ಲಿ ವಿಭಿನ್ನವಾಗಿ ಅನುಷ್ಟಾನಿಸಿದ 12 ಗ್ರಾ.ಪಂ.ಗಳಾದ ನಾಪೋಕ್ಲು, ಹಾಕತ್ತೂರು, ಗಾಳಿಬೀಡು, ಗುಡ್ಡೆಹೊಸೂರು, 7ನೇ ಹೊಸಕೋಟೆ, ದುಂಡಳ್ಳಿ, ಹಾನಗಲ್ಲು, ಶ್ರೀಮಂಗಲ, ಅಮ್ಮತ್ತಿ ಹಾಗೂ ದೇವರಪುರ ಗ್ರಾ.ಪಂ.ಗಳ ಅಧ್ಯಕ್ಷರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಶಾಲು ಹೊದಿಸಿ ಸನ್ಮಾನಿಸಿ, ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.