?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????? 
ಜಿಲ್ಲೆ

ಮತ್ತಿಕೆರೆಯಲ್ಲಿ ತ್ಯಾಜ್ಯ ತೆರವುಗೊಳಿಸಿ

ಎ. ಆರ್. ರಘುರಾಮ

ಹನೂರು: ತಾಲೂಕಿನ ಮಂಗಲ ಗ್ರಾಮದ ಮತ್ತಿಕೆರೆಯಲ್ಲಿ ಬೆಳೆದು ನಿಂತಿರುವ ಗಿಡಗಂಟಿಗಳನ್ನು ತೆರೆವುಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಬೃಹತ್ ಆಕಾರದಲ್ಲಿರುವ ಈ ಕೆರೆಯನ್ನು ಬ್ರಿಟಿಷರ ಕಾಲದಲ್ಲಿ ನಿರ್ಮಿಸಲಾಗಿದ್ದು, ಇಲ್ಲಿನ ನೀರನ್ನು ಈ ಹಿಂದೆ ಜನರು ಕುಡಿಯಲು ಬಳಕೆ ಮಾಡುತ್ತಿದ್ದರು. ಇದೀಗ ದನಕರುಗಳು ನೀರುಣಿಸಲು ಹಾಗೂ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಸಹಕಾರಿಯಾಗಿದೆ.

ಮಳೆಗಾಲದಲ್ಲಿ ಯಥೇಚ್ಛವಾದ ನೀರು ಈ ಕೆರೆಯಲ್ಲಿ ಸಂಗ್ರಹವಾಗುತ್ತಿತ್ತು. ಜತೆಗೆ ಭರ್ತಿಯೂ ಆಗುತ್ತಿತ್ತು. ಆದರೆ ಕೆಲವು ಕಡೆಗಳಲ್ಲಿ ನೀರಿನ ಮೂಲ ಮುಚ್ಚಿ ಹೋಗಿರುವುದರಿಂದ ಸಮರ್ಪಕವಾಗಿ ನೀರು ಕೆರೆಗೆ ಹರಿದು ಬರುತ್ತಿಲ್ಲ. ಆದರೆ ಗ್ರಾಪಂ ಆಡಳಿತ ಈ ಬಗ್ಗೆ ಕಿಂಚಿತ್ತೂ ಗಮನಹರಿಸುತ್ತಿಲ್ಲ. ಇನ್ನು ಈ ಹಿಂದೆ ಬೇಸಿಗೆ ವೇಳೆ ನರೇಗಾ ಯೋಜನೆಯಡಿ ಕೆರೆಯ ಹೂಳನ್ನು ತೆಗೆಸಲು ಕ್ರಮವಹಿಸಿತ್ತು. ಆದರೆ ಈ ಕಾರ್ಯ ಅರ್ಧಕ್ಕೆ ನಿಂತಿತು.

ಕಳೆದ ಒಂದು ತಿಂಗಳ ಹಿಂದೆ ಸುರಿದ ಜೋರು ಮಳೆಗೆ ಕೆರೆಯಲ್ಲಿ ತಕ್ಕಮಟ್ಟಿಗೆ ನೀರು ಸಂಗ್ರಹವಾಗಿದೆ. ಆದರೆ ಗಿಡಗಂಟಿಗಳು ಬೆಳೆದು ನಿಂತಿದೆ. ಇದರಿಂದ ನೀರಿನ ಸಂಗ್ರಹಣೆಗೆ ತೊಡುಕಾಗಿ ಪರಿಣಮಿಸಿದೆ. ಜತೆಗೆ ಸಮೀಪದಲ್ಲಿನ ಚಿಕ್ಕ ಕೆರೆಯಲ್ಲೂ ಗಿಡಗಂಟಿಗಳು ಆಳೆತ್ತರಕ್ಕೆ ಬೆಳೆದು ನಿಂತಿದ್ದು, ಮುಚ್ಚಿ ಹೋಗುವ ಹಂತದಲ್ಲಿದೆ.

ಗ್ರಾಪಂ ಆಡಳಿತ ಗ್ರಾಮದ ಹೊರವಲಯದಲ್ಲಿನ ಕೆರೆಗಳಲ್ಲಿ ನರೇಗಾ ಯೋಜನೆಯಡಿ ಹೂಳನ್ನು ತೆಗೆಸುವುದರ ಮೂಲಕ ಅಭಿವೃದ್ಧಿ ಪಡಿಸಲಾಗುತ್ತಿದೆ. ಆದರೆ ಗ್ರಾಮದೊಳಗಡೆ ಇರುವ ಈ ಕೆರೆಯನ್ನು ಅಭಿವೃದ್ಧಿ ಪಡಿಸಲು ಇಲ್ಲಿನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಇನ್ನಾದರೂ ಈ ಬಗ್ಗೆ ಗಮನಹರಿಸಿ ಕೆರೆಯಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ತೆರೆವುಗೊಳಿಸುವುದರ ಜತೆಗೆ ಮುಂದಿನ ದಿನಗಳಲ್ಲಿ ಅಭಿವೃದ್ಧಿ ಪಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.