ಜಿಲ್ಲೆ

ಡ್ರಗ್ಸ್ ವ್ಯಸನಿಗಳ ಜತೆ ಆಪ್ತ ಸಮಾಲೋಚನೆ, ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಕೆ. ನಾಗಣ್ಣ ಗೌಡ ಸೂಚನೆ

Mangaluru - Shravan Kumar Nala

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್‌ಮುಕ್ತ ಸಮಾಜ ನಿರ್ಮಾಣ ಮಾಡಲು ಅರಿವು ಮೂಡಿಸುವ ಹಾಗೂ ಡ್ರಗ್ಸ್ ವ್ಯಸನಕ್ಕೆ ಒಳಗಾದ 18 ವರ್ಷದೊಳಗಿನ ಮಕ್ಕಳ ಜತೆ ಆಪ್ತ ಸಮಾಲೋಚನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳ ಜತೆ ಸಭೆ ನಡೆಸಿ ಮಾತನಾಡಿದರು.

ಪೋಕ್ಸೋ ಪ್ರಕರಣಗಳು, ಮಕ್ಕಳ ಮೇಲಿನ ದೌರ್ಜನ್ಯಗಳು ಆಗದಂತೆ ಎಚ್ಚರ ವಹಿಸಬೇಕು. ಮಕ್ಕಳ ಸುರಕ್ಷಾ ನೀತಿಯನ್ನು ಎಲ್ಲ ಶಿಕ್ಷಣ ಸಂಸ್ಥೆಗಳು, ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಅಳವಡಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಜಿಲ್ಲಾ ಪಂಚಾಯಿತಿ ಸಿಇಒ ಡಾ.ಆನಂದ್, ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪಾ ಬೋವಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಾಲತಿ ಹಾಜರಿದ್ದರು.